ಸಾರಾಂಶ
ಕನ್ನಡಪ್ರಭ ವಾರ್ತೆ ಮೂಡುಬಿದಿರೆ ಶಿವಮೊಗ್ಗದಲ್ಲಿ ಪಿ.ಜಿ.ಆರ್. ಸಿಂಧ್ಯಾ ಅವರ ನೇತೃತ್ವದಲ್ಲಿ ಮೊದಲ ಬಾರಿ ಸ್ಕೌಟ್ಸ್ ಮತ್ತು ಗೈಡ್ಸ್ ಕಂಡು ಆಶ್ಚರ್ಯಪಟ್ಟಿದೆ. ಏಕೆಂದರೆ, ಸ್ಕೌಟ್ಸ್ ಮತ್ತು ಗೈಡ್ಸ್ ಎನ್ನುವುದು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಶಾಂತ ಭಾವನೆ ಮತ್ತು ಸಮಯಪ್ರಜ್ಞೆಯನ್ನು ಸೃಷ್ಟಿಸುವಲ್ಲಿ ಮಾದರಿಯಾಗಿದೆ ಎಂದು ಭಾರತೀಯ ಸೇನೆಯ ನಿವೃತ್ತ ಲೆಫ್ಟಿನೆಂಟ್ ಜನರಲ್ ಬಿ.ಎಸ್. ರಾಜು ಹೇಳಿದರು.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ೩೦ನೇ ಆಳ್ವಾಸ್ ವಿರಾಸಾತ್ ಸಂದರ್ಭದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ರೋವರ್ಸ್ - ರೇಂಜರ್ಸ್ ಸಾಂಸ್ಕೃತಿಕ ಉತ್ಸವದಲ್ಲಿ ಶುಕ್ರವಾರ ಅವರು ಉಪನ್ಯಾಸ ನೀಡಿದರು.ಸಣ್ಣಪುಟ್ಟ ಕೆಲಸವನ್ನು ಸರಿಯಾಗಿ ಅರ್ಥೈಸಿಕೊಳ್ಳುತ್ತಾ, ಉತ್ತಮ ರೀತಿಯಲ್ಲಿ ಅದನ್ನು ಸ್ವೀಕರಿಸುವ ಮನೋಭಾವನೆ ಬಂದಾಗ ದೊಡ್ಡ ದೊಡ್ಡ ಕೆಲಸವನ್ನು ಸವಾಲಿನಿಂದ ಎದುರಿಸಲು ಸಾಧ್ಯವಾಗುತ್ತದೆ ಎಂದು ತಮ್ಮ ಸೇನಾ ವೃತ್ತಿಯ ಅನುಭವಗಳನ್ನು ವಿವರಿಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ನಿವೃತ್ತ ಲೆಫ್ಟಿನೆಂಟ್ ಜನರಲ್ ಬಿ.ಎಸ್. ರಾಜು ಅವರ ಪತ್ನಿ ಶಕುಂತಲಾ ರಾಜು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ರಾಜ್ಯ ಕಾರ್ಯದರ್ಶಿ ಗಂಗಪ್ಪ ಗೌಡ, ಶಿಬಿರದ ಮೇಲ್ವಿಚಾರಕಿ ಮಲ್ಲೇಶ್ವರಿ ಜೂಜಾರೆ ಮತ್ತು ನಿತಿನ್ ಅಮೀನ್, ದಕ್ಷಿಣ ಕನ್ನಡ ಜಿಲ್ಲಾ ಕೋಶಾಧಿಕಾರಿ ನವೀನ್ ಚಂದ್ರ ಅಂಬೂರಿ ಇದ್ದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ಮೇಘನಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.