ಜಿಲ್ಲೆಯ ಬಹುತೇಕ ಶಾಲೆಗಳಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ತರಬೇತಿ ಕಾರ್ಯಾಗಾರವನ್ನು ಪ್ರತಿವರ್ಷ ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ದೇಶಭಕ್ತ, ಸೇವಾ ಮನೋಭಾವನೆ ಕುರಿತು ಉಪಯುಕ್ತ ಮಾಹಿತಿ ನೀಡಲಾಗುತ್ತದೆ. ತಾಲೂಕಿನ ಎಲ್ಲಾ ಶಿಕ್ಷಕರು ಈ ಬಗ್ಗೆ ಗಂಭೀರ ಚಿಂತನೆ ನಡೆಸಿ ಮಕ್ಕಳಿಗೂ ಪ್ರೇರೇಪಿಸಬೇಕಿದೆ.
ಚಳ್ಳಕೆರೆ: ಪ್ರತಿವರ್ಷವೂ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ವತಿಯಿಂದ ಸಿಆರ್ ಪಿ, ಈಸಿಒಗಳಿಗೆ ಒಂದು ದಿನದ ತರಬೇತಿ ಶಿಬಿರ ಆಯೋಜಿಸಿ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಮಾರ್ಗದರ್ಶನ ನೀಡುತ್ತಾ ಬಂದಿದೆ. ಇಂತಹ ಸಂಸ್ಥೆಯ ಶಿಸ್ತು ಮತ್ತು ಸಂಯಮ ಮೆಚ್ಚುವಂತದ್ದು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಉತ್ತಮ ಶಿಸ್ತು ಕಲಿಸಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ತಿಳಿಸಿದರು.
ನಗರದ ಬಿಇಒ ಕಚೇರಿ ಸಭಾಂಗಣದಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.ಕಳೆದ ಹಲವಾರು ವರ್ಷಗಳಿಂದ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನಿರಂತರವಾಗಿ ವಿದ್ಯಾರ್ಥಿಗಳಿಗೆ ಚಟುವಟಿಕೆಗಳ ಬಗ್ಗೆ ಉಪಯುಕ್ತ ಮಾಹಿತಿ ನೀಡಿದೆ. ತಾಲೂಕಿನ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕಾರ್ಯಕ್ರಮ ಅನುಷ್ಠಾನ ಕುರಿತು ಮಾಹಿತಿ ನೀಡಲಾಗುತ್ತಿದೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತಮ್ಮಜೀವನದಲ್ಲಿ ಶಿಸ್ತನ್ನು ರೂಪಿಸಿಕೊಳ್ಳಬೇಕಿದೆ. ಜಿಲ್ಲಾ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಈ ವಿಚಾರದಲ್ಲಿ ಮುಂಚೂಣಿಯಲ್ಲಿದೆ ಎಂದರು.
ಜಿಲ್ಲಾ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಆಯುಕ್ತ ದೇವರಾಜ ಮಾತನಾಡಿ, ಜಿಲ್ಲೆಯ ಬಹುತೇಕ ಶಾಲೆಗಳಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ತರಬೇತಿ ಕಾರ್ಯಾಗಾರವನ್ನು ಪ್ರತಿವರ್ಷ ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ದೇಶಭಕ್ತ, ಸೇವಾ ಮನೋಭಾವನೆ ಕುರಿತು ಉಪಯುಕ್ತ ಮಾಹಿತಿ ನೀಡಲಾಗುತ್ತದೆ. ತಾಲೂಕಿನ ಎಲ್ಲಾ ಶಿಕ್ಷಕರು ಈ ಬಗ್ಗೆ ಗಂಭೀರ ಚಿಂತನೆ ನಡೆಸಿ ಮಕ್ಕಳಿಗೂ ಪ್ರೇರೇಪಿಸಬೇಕಿದೆ ಎಂದರು.ಕಾರ್ಯಕ್ರಮದಲ್ಲಿ ಬಿ ಆರ್ ಸಿ ಎಚ್.ಪಿ. ಮಂಜುಬಾಬು, ಎಚ್.ತಿಪ್ಪೇಸ್ವಾಮಿ, ದೈಹಿಕ ಶಿಕ್ಷಣ ಪರಿವೀಕ್ಷಕ ಸುನೀಲ್‍ನಾಯ್ಕ,ಸ್ಕೌಟ್ಸ್ ಆ್ಯಂಡ್ ಗೈಡ್ಸ್ ತಾಲೂಕು ಕಾರ್ಯದರ್ಶಿ ಜಗದೀಶ್, ಈಶ್ವರಪ್ಪ, ಈಸಿಒ ಶಿವಣ್ಣ, ದೇವೇಂದ್ರಪ್ಪ, ಮಲ್ಲಿಕಾರ್ಜುನ್, ಸಿ.ಟಿ.ವೀರೇಶ್, ತಿಪ್ಪೇಸ್ವಾಮಿ, ಬಿಆರ್‍ಪಿ ಸದಾಶಿವಯ್ಯ, ಈಶ್ವರಪ್ಪ, ತಿಪ್ಪೇಸ್ವಾಮಿ, ಎನ್.ಮಲ್ಲೇಶ್ ಮುಂತಾದವರು ಭಾಗವಹಿಸಿದ್ದರು.