ಸಿಎಂ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ಅನುದಾನದಲ್ಲಿ ಕಾಂಗ್ರೆಸ್ ಸದಸ್ಯರಿರುವ ವಾರ್ಡ್‌ಗಳಿಗೆ ತಲಾ ₹1 ಕೋಟಿ ನೀಡಲಾಗಿದೆ. ಬಿಜೆಪಿ ಸದಸ್ಯರ ವಾರ್ಡ್‌ಗಳಿಗೆ ಕೇವಲ ₹50 ಲಕ್ಷ ನೀಡಲಾಗಿದೆ. ಅಭಿವೃದ್ಧಿಯಲ್ಲಿ ಇಂತಹ ಮಲತಾಯಿ ಧೋರಣೆ ತೋರುತ್ತಿರುವುದು ಖಂಡನೀಯ.
ಗದಗ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅನುದಾನ ಹಂಚಿಕೆಯಲ್ಲಿ ತೀವ್ರ ತಾರತಮ್ಯ ಮಾಡುತ್ತಿದ್ದು, ಬಿಜೆಪಿ ಸದಸ್ಯರಿರುವ ವಾರ್ಡ್‌ಗಳಿಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ತೋಟಪ್ಪ (ರಾಜು) ಕುರುಡಗಿ ಆಕ್ರೋಶ ವ್ಯಕ್ತ ಪಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಸಿಎಂ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ಅನುದಾನದಲ್ಲಿ ಕಾಂಗ್ರೆಸ್ ಸದಸ್ಯರಿರುವ ವಾರ್ಡ್‌ಗಳಿಗೆ ತಲಾ ₹1 ಕೋಟಿ ನೀಡಲಾಗಿದೆ. ಬಿಜೆಪಿ ಸದಸ್ಯರ ವಾರ್ಡ್‌ಗಳಿಗೆ ಕೇವಲ ₹50 ಲಕ್ಷ ನೀಡಲಾಗಿದೆ. ಅಭಿವೃದ್ಧಿಯಲ್ಲಿ ಇಂತಹ ಮಲತಾಯಿ ಧೋರಣೆ ತೋರುತ್ತಿರುವುದು ಖಂಡನೀಯ. ಬಿಜೆಪಿ ಸದಸ್ಯರಿರುವ ವಾರ್ಡ್‌ಗಳಲ್ಲಿ ಅಂದಾಜು ಪತ್ರಿಕೆ ಸಿದ್ಧಪಡಿಸಲು ಚುನಾಯಿತ ಪ್ರತಿನಿಧಿಗಳ ಬದಲು, ಪರಾಜಿತ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜವಾಬ್ದಾರಿ ನೀಡುವಂತೆ ಅಧಿಕಾರಿಗಳಿಗೆ ಮೌಖಿಕ ಸೂಚನೆ ನೀಡಲಾಗಿದೆ. ಇದು ಜನಪ್ರತಿನಿಧಿಗಳಿಗೆ ಮಾಡುತ್ತಿರುವ ಅವಮಾನವಾಗಿದೆ.ಬಿಜೆಪಿ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಅಂದಾಜು ಪತ್ರಿಕೆ ಸಿದ್ಧಪಡಿಸಲಾಗುತ್ತಿದೆ. ಈ ಹಿಂದೆ ಬಿಜೆಪಿ ಆಡಳಿತವಿದ್ದ ಸಮಯದಲ್ಲಿ ಪಕ್ಷಭೇದ ಮಾಡದೆ ಎಲ್ಲ ವಾರ್ಡ್‌ಗಳಿಗೂ ಸಮನಾದ ಅನುದಾನ ನೀಡಿ ಅಭಿವೃದ್ಧಿಗೆ ಸಹಕರಿಸಲಾಗಿತ್ತು. ಆದರೆ, ಪ್ರಸ್ತುತ ಸಚಿವರು ತಾತತಮ್ಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ವಿನಾಯಕ ಮಾನ್ವಿ, ಅನೀಲ ಅಬ್ಬಿಗೇರಿ, ರಾಘವೇಂದ್ರ ಯಳವತ್ತಿ, ನಾಗರಾಜ ತಳವಾರ, ಮಾಧುಸಾ ಮೇರವಾಡೆ, ಲಕ್ಷ್ಮೀ ಕಾಕಿ, ಉಷಾ ದಾಸರ, ವಿದ್ಯಾವತಿ ಗಡಗಿ, ಸುನಂದಾ ಬಾಕಳೆ, ಮಹಾಂತೇಶ ನಲವಡಿ, ಪಕ್ಷದ ಮುಖಂಡರಾದ ಎಂ.ಎಸ್. ಕರೀಗೌಡ್ರ, ಎಂ.ಎಂ. ಹಿರೇಮಠ, ಗದಗ ನಗರ ಮಂಡಲ ಅಧ್ಯಕ್ಷರಾದ ಸುರೇಶ ಮರಳಪ್ಪನವರ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.