ತಾಲೂಕಿನಲ್ಲಿ ಕಸಾಪನ 780ಕ್ಕೂ ಹೆಚ್ಚು ಅಜೀವ ಸದಸ್ಯರಿದ್ದರೂ ಅವರನ್ನು ವಿಶ್ವಾಸಕ್ಕೆ ತಗೆದುಕೊಳ್ಳದೆ ಕೆಲವೇ ಜನ ಕುಳಿತು ನಿರ್ಧಾರ ಮಾಡಿರುವುದು ಸರಿಯಲ್ಲ.

ಮುಂಡರಗಿ: ಕನ್ನಡ ಸಾಹಿತ್ಯ ಪರಿಷತ್ತಿಗೆ ಸೇರಿದ ಯಾವುದೇ ಸಾಹಿತ್ಯ ಸಮ್ಮೇಳನಗಳನ್ನು ಮಾಡಬೇಕಾದರೆ ಆಜೀವ ಸದಸ್ಯರ ಸಭೆ ಕರೆದು ಎಲ್ಲರೊಂದಿಗೆ ಚರ್ಚಿಸಿ ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆ ಕುರಿತು ಚರ್ಚೆ ನಡೆಯಬೇಕು ಎಂದು ಕಸಾಪ ಆಜೀವ ಸದಸ್ಯ ಎಸ್.ಎಸ್. ಗಡ್ಡದ ತಿಳಿಸಿದರು.ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಇತ್ತೀಚೆಗೆ ಕೇವಲ ತಾಲೂಕು ಕಾರ್ಯಕಾರಿಣಿ ಸಮಿತಿ ಸದಸ್ಯರ ಸಭೆ ಕರೆದು ತಾಲೂಕು ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆ ಮಾಡಿದ್ದು, ಅವರ ಹೆಸರನ್ನು ಗೌಪ್ಯವಾಗಿಟ್ಟಿರುವ ತಾಲೂಕಾಧ್ಯಕ್ಷರ ಸರ್ವಾಧಿಕಾರಿ ಧೋರಣೆ ಖಂಡನೀಯ ಎಂದರು.

ತಾಲೂಕಿನಲ್ಲಿ ಕಸಾಪನ 780ಕ್ಕೂ ಹೆಚ್ಚು ಅಜೀವ ಸದಸ್ಯರಿದ್ದರೂ ಅವರನ್ನು ವಿಶ್ವಾಸಕ್ಕೆ ತಗೆದುಕೊಳ್ಳದೆ ಕೆಲವೇ ಜನ ಕುಳಿತು ನಿರ್ಧಾರ ಮಾಡಿರುವುದು ಸರಿಯಲ್ಲ. ಜ. 28ಕ್ಕೆತಾಲೂಕು ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಿದ್ದು, ಅದರ ಸರ್ವಾಧ್ಯಕ್ಷರನ್ನಾಗಿ ಪ್ರೊ. ಆರ್.ಎಲ್. ಪೊಲೀಸಪಾಟೀಲರನ್ನು ಆಯ್ಕೆ ಮಾಡಿದ್ದಾಗಿ ಬೇರೆಯವರ ಮೂಲಕ ತಿಳಿದುಬಂದಿದೆ. ಆದರೆ ತಾಲೂಕಿನಲ್ಲಿ ಆರ್.ಎಲ್. ಪೊಲೀಸಪಾಟೀಲರಿಗಿಂತಲೂ ಹೆಚ್ಚಿನ ಸಾಧಕರು, ಸಾಹಿತಿಗಳು, ಸಾಹಿತ್ಯಾಸಕ್ತರಿದ್ದು, ಅಂಥವರನ್ನು ಮೊದಲು ಪರಿಗಣಿಸಬೇಕು. ಇವರ ಸರ್ವಾಧ್ಯಕ್ಷತೆಯಲ್ಲಿಯೇ ಸಮ್ಮೇಳನ ನಡೆಸಿದರೆ ನಿರ್ದಾಕ್ಷಿಣ್ಯವಾಗಿ ಪ್ರತಿಭಟನೆ ನಡೆಸುತ್ತೇವೆ ಎಂದರು.

ಪ್ರೊ. ಎ.ವೈ. ನವಲಗುಂದ, ಪಾಲಾಕ್ಷಿ ಗಣದಿನ್ನಿ, ಬಸವರಾಜ ನವಲಗುಂದ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಬಸವರಾಜ ರಾಮೇನಹಳ್ಳಿ, ಬಸವಂತಪ್ಪ ಮುದ್ದಿ, ದೇವಪ್ಪ ರಾಮೇನಹಳ್ಳಿ, ನಾಗಪ್ಪ ಶೇಡದ್, ಡಿ.ಜಿ. ಪೂಜಾರ, ಬಿ.ವಿ. ನಂದಗಾವಿ, ವಿ.ಆರ್. ಹೂಗಾರ, ರಫೀಕ್ ಮುಲ್ಲಾ, ಧ್ರುವಕುಮಾರ ಹೂಗಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ಇಂದು ತೋಂಟದಾರ್ಯ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇ‍ಳನ

ಮುಂಡರಗಿ: ಜಗದ್ಗುರು ತೋಂಟದಾರ್ಯ ಸಿಬಿಎಸ್ಇ ಶಾಲೆಯ 21ನೇ ವಾರ್ಷಿಕೋತ್ಸವ ಜ. 12ರಂದು ಸಂಜೆ ಗಂಟೆಗೆ ಜರುಗಲಿದೆ.ಡಾ. ಸಿದ್ದರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸುವರು. ಶಾಲೆ ಆಡಳಿತ ಮಂಡಳಿ ಅಧ್ಯಕ್ಷ ಎಸ್.ಎಸ್. ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.ಅತಿಥಿಗಳಾಗಿ ರೋಣ ಶಾಸಕ ಜಿ.ಎಸ್. ಪಾಟೀಲ, ಶಾಸಕ ಡಾ. ಚಂದ್ರು ಲಮಾಣಿ, ಎಸ್.ವಿ. ಸಂಕನೂರ, ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ತಹಸೀಲ್ದಾರ್ ಎರ್ರಿಸ್ವಾಮಿ ಪಿ.ಎಸ್., ಬಿಇಒ ಜಿ.ಎಸ್. ಅಣ್ಣೀಗೇರಿ, ತಾಪಂ ಇಒ ವಿಶ್ವನಾಥ ಹೊಸಮನಿ, ಪುರಸಭೆ ಮುಖ್ಯಾಧಿಕಾರಿ ಶಂಕರ್ ಹುಲ್ಲಮ್ಮನವರ, ಜೆಟಿ ವಿದ್ಯಾಪೀಠದ ಆಡಳಿತಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ಆಗಮಿಸಲಿದ್ದಾರೆ ಎಂದು ಶಾಲೆಯ ಪ್ರಾ. ಶರಣಕುಮಾರ ಬುಗುಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.