ಶಾಸಕ ಗವಿಯಪ್ಪ ಜತೆ ಚರ್ಚಿಸಿ ಸಕ್ಕರೆ ಕಾರ್ಖಾನೆಗೆ ಸ್ಥಳ ನಿಗದಿ: ಸಚಿವ ಜಮೀರ್‌ ಅಹ್ಮದ್‌ ಖಾನ್

| Published : Jan 27 2025, 12:50 AM IST

ಶಾಸಕ ಗವಿಯಪ್ಪ ಜತೆ ಚರ್ಚಿಸಿ ಸಕ್ಕರೆ ಕಾರ್ಖಾನೆಗೆ ಸ್ಥಳ ನಿಗದಿ: ಸಚಿವ ಜಮೀರ್‌ ಅಹ್ಮದ್‌ ಖಾನ್
Share this Article
  • FB
  • TW
  • Linkdin
  • Email

ಸಾರಾಂಶ

ಸಕ್ಕರೆ ಕಾರ್ಖಾನೆಗೆ ಹಿಂದಿನ ಸರ್ಕಾರದಲ್ಲಿ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ ಮಂಜೂರಾಗಿತ್ತು.

ಹೊಸಪೇಟೆ: ಸಕ್ಕರೆ ಕಾರ್ಖಾನೆಗೆ ಹಿಂದಿನ ಸರ್ಕಾರದಲ್ಲಿ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ ಮಂಜೂರಾಗಿತ್ತು. ಈಗ ಶಾಸಕ ಎಚ್‌.ಆರ್‌. ಗವಿಯಪ್ಪ ಬೇರೆ ಸ್ಥಳ ನೋಡಿದ್ದಾರೆ. ಅವರು ಹೈದರಾಬಾದ್‌ಗೆ ಹೋಗಿದ್ದಾರೆ. ಬಂದ ಮೇಲೆ ಅವರೊಂದಿಗೆ ಮಾತಾಡಿ ತೀರ್ಮಾನಿಸಲಾಗುವುದು ಎಂದು ಎಂದು ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಹೇಳಿದರು.

ನಗರದ ಡಾ. ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 76ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣೆ ನೆರವೇರಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಜಿಲ್ಲೆಯಾಗಿರುವ ಕಾರಣ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬೇಕಾಗುತ್ತದೆ. ಅದೇ ಕಾರಣಕ್ಕೆ ಮುಖ್ಯಮಂತ್ರಿಯನ್ನು ಕರೆತಂದು ಕೆಡಿಪಿ ಸಭೆ ಮಾಡಲಾಗಿತ್ತು. ಇತ್ತೀಚೆಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೊಸ ಜಿಲ್ಲೆಗೆ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ ನೀಡಿ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದೇನೆ. ಈ ಬಾರಿ ಬಜೆಟ್ ನಲ್ಲಿ ಮೆಡಿಕಲ್ ಕಾಲೇಜು ಸೇರಿಸಿ ಘೋಷಣೆ ಮಾಡಿಸಲು ಪ್ರಯತ್ನಿಸುವೆ ಎಂದರು.

ಬಳ್ಳಾರಿ ಜಿಲ್ಲೆಗೆ ಬಂದಷ್ಟು ಅನುದಾನ ವಿಜಯನಗರ ಜಿಲ್ಲೆಗೆ ಬಂದಿಲ್ಲ ಎನ್ನುವ ಪ್ರಶ್ನೆಗೆ ಜಿಲ್ಲೆಗೆ ಸಿಗಬೇಕಾದ ಪ್ರಮಾಣದ ಅನುದಾನ ಬರುತ್ತಿದೆ. ಡಿಎಂಎಫ್ ಹಂಚಿಕೆ ಕೇಂದ್ರ ಸರ್ಕಾರ ತೀರ್ಮಾನಿಸಿರುವುದು. ನಮ್ಮ ಜಿಲ್ಲೆಗೆ ಶೇ.28ರಷ್ಟು ಬರುತ್ತದೆ. ಅದನ್ನು ಬಳಸಿಕೊಳ್ಳುತ್ತಿದ್ದೇವೆ. ಕೆಕೆಆರ್‌ಡಿಬಿ ಅನುದಾನ ಹಂಚಿಕೆಯಲ್ಲಿ ಜಿಲ್ಲೆಗೆ ತಾರತಮ್ಯ ಮಾಡಿಲ್ಲ. ಸಮಾನವಾಗಿ ಹಂಚಿಕೆ ಮಾಡಲಾಗಿದೆ. ಜಿಲ್ಲಾಸ್ಪತ್ರೆಗೆ ₹30 ಕೋಟಿ ನೀಡಲಾಗಿದೆ. ಹೊಸಪೇಟೆ ನಗರಕ್ಕೆ ಹೆಚ್ಚಿನ ಅನುದಾನ ನೀಡಿದ್ದು, ಮುಂದಿನ ಆರು ತಿಂಗಳಲ್ಲಿ ಜಿಲ್ಲಾಸ್ಪತ್ರೆ ಪೂರ್ಣಗೊಳ್ಳಲಿದೆ. ವೈದ್ಯರು, ಸಿಬ್ಬಂದಿ ನೇಮಕಾತಿ ಸರ್ಕಾರದಿಂದ ನಡೆಯಲಿದೆ. ಜಿಲ್ಲೆಯಲ್ಲಿ ಎಲ್ಲ ರೀತಿಯ ಅಭಿವೃದ್ಧಿ ಕೆಲಸಗಳಿಗೆ ಸಂಬಂಧಿಸಿದಂತೆ ಆದ್ಯತೆ ನೀಡಿ ಕೆಲಸ ಮಾಡಲಾಗುತ್ತಿದೆ. ಈ ಕುರಿತು ಪಟ್ಟಿಯೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಳೆದ ವರ್ಷಕ್ಕಿಂತ ಈ ಬಾರಿ ಹಂಪಿ ಉತ್ಸವ ಅದ್ಧೂರಿಯಾಗಿ ಆಚರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅನುದಾನ ಕಳೆದ ಸಲ ₹14 ಕೋಟಿ ಇತ್ತು. ಈ ಬಾರಿ ಇನ್ನು ಎರಡು ಕೋಟಿ ರುಪಾಯಿ ಹೆಚ್ಚಾಗಬಹುದು ಎಂದರು.