ಸಿ ಅಂಡ್ ಡಿ ಜಾಗದ ಸಮಸ್ಯೆ ಬಗ್ಗೆ ವಿಸ್ತ್ರತ ಚರ್ಚೆ

| Published : Aug 18 2025, 12:00 AM IST

ಸಾರಾಂಶ

ಸಿ ಮತ್ತು ಡಿ ಜಾಗದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಮಿಟಿ ರಚನೆ ಮಾಡಲಾಗುವುದು ಎಂದು ಸಚಿವರು ಹೇಳಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸಿ ಮತ್ತು ಡಿ ಜಾಗದ ಸಮಸ್ಯೆಗಳ ಬಗ್ಗೆ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಹೋರಾಟಗಳು ನಡೆಯುತ್ತಿದ್ದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಶುಕ್ರವಾರ ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ ಎಸ್ ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ ರವರನ್ನು ಭೇಟಿ ಮಾಡಿ ಸಿ ಮತ್ತು ಡಿ ಜಾಗದ ಸಮಸ್ಯೆಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿತು.ಸಿ ಮತ್ತು ಡಿ ಜಾಗದ ಸಮಸ್ಯೆಯಿಂದ ರೈತರಿಗೆ ಉಂಟಾಗಿರುವ ಅನಾನುಕೂಲಗಳ ಬಗ್ಗೆ ಸಭೆಯಲ್ಲಿ ರೈತರ ಪರವಾಗಿ ಧ್ವನಿ ಎತ್ತಿದ ಕೊಡಗು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ ಎಂ ಲೋಕೇಶ್, ಈ ವಿಚಾರದ ಬಗ್ಗೆ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಹಾಗೂ ರೈತರ ಆತಂಕವನ್ನು ದೂರ ಮಾಡುವಂತೆ ಉಸ್ತುವಾರಿ ಸಚಿವರು ಹಾಗೂ ಶಾಸಕದ್ವಯರಿಗೆ ರೈತರ ಪರವಾಗಿ ಮನವಿ ಮಾಡಿದರು. ಈ ಮನವಿಗೆ ಸ್ಪಂದಿಸಿದ ಉಸ್ತುವಾರಿ ಸಚಿವರು ಸಿ ಮತ್ತು ಡಿ ಜಾಗದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಮಿಟಿ ರಚನೆ ಮಾಡಲಾಗುವುದು. ಮಂಗಳವಾರ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಕಾಂಗ್ರೆಸ್ ಮುಖಂಡರುಗಳೊಂದಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗುವುದು ಎಂದರು.

ಶಾಸಕ ಡಾ.ಮಂತರ್ ಗೌಡ ಮಾತನಾಡಿ ಸೋಮವಾರ ಸದನದಲ್ಲಿ ಸಿ ಮತ್ತು ಡಿ ಜಾಗದ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲಾಗುವುದು ಎಂದರು. ಈ ಸಭೆಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ,ಮಾಜಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ಕಾಂಗ್ರೆಸ್ ಮುಖಂಡರಾದ ಕೆ ಪಿ ಚಂದ್ರಕಲಾ, ಸೋಮವಾರಪೇಟೆ ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಜೆ ಎಲ್ ಜನಾರ್ದನ್, ಕಾಂಗ್ರೆಸ್ ಮುಖಂಡರಾದ ಟಿ ಪಿ ರಮೇಶ್, ಕೊಲ್ಯದ ಗಿರೀಶ್, ನಟೇಶ್ ಗೌಡ, ಖಾಲಿದ್, ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ್ ಉಪಸ್ಥಿತರಿದ್ದರು.