ರಾಜ್ಯ ಸರ್ಕಾರಿ ನೌಕರರ ಬಹು ವರ್ಷಗಳ ಬೇಡಿಕೆಯಾದ ಎನ್‌ಪಿಎಸ್ ರದ್ದತಿ ಹಾಗೂ ಹಳೇ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಿದ್ದು, ಲೋಕಸಭೆಯಲ್ಲೂ ನಿಮ್ಮ ಬೇಡಿಕೆ ಪರ ಧ್ವನಿ ಎತ್ತುತ್ತೇನೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭರವಸೆ ನೀಡಿದ್ದಾರೆ.
- ಸರ್ಕಾರಿ ನೌಕರರ ಸಂಘದ 2025-26ನೇ ಸಾಲಿನ ಜಿಲ್ಲಾಮಟ್ಟದ ಕ್ರೀಡಾಕೂಟ- ಸಾಂಸ್ಕೃತಿಕ ಸ್ಪರ್ಧೆ - - -
ಕನ್ನಡಪ್ರಭ ವಾರ್ತೆ ದಾವಣಗೆರೆ ರಾಜ್ಯ ಸರ್ಕಾರಿ ನೌಕರರ ಬಹು ವರ್ಷಗಳ ಬೇಡಿಕೆಯಾದ ಎನ್‌ಪಿಎಸ್ ರದ್ದತಿ ಹಾಗೂ ಹಳೇ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಿದ್ದು, ಲೋಕಸಭೆಯಲ್ಲೂ ನಿಮ್ಮ ಬೇಡಿಕೆ ಪರ ಧ್ವನಿ ಎತ್ತುತ್ತೇನೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭರವಸೆ ನೀಡಿದರು.ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2025-26ನೇ ಸಾಲಿನ ಜಿಲ್ಲಾಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಹೊಸ ಪಿಂಚಣಿ ಯೋಜನೆ ಕೈ ಬಿಟ್ಟು, ಹಳೇ ಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕೆಂಬ ನಿಮ್ಮ ಬೇಡಿಕೆಗೆ ಸಂಪೂರ್ಣ ಬೆಂಬಲ ಇದೆ ಎಂದರು.
ನಾಗರೀಕರು ಕೆಲಸ, ಕಾರ್ಯಗಳ ನಿಮಿತ್ತ, ಸಮಸ್ಯೆ, ಅಹವಾಲು ಹೊತ್ತು ನಿಮ್ಮ ಕಚೇರಿ, ನಿಮ್ಮ ಟೇಬಲ್ ಬಳಿ ಬಂದಾಗ ಸರಿಯಾದ ಮಾರ್ಗದರ್ಶನ ನೀಡಿ, ನೆರವಾಗಬೇಕು. ಜಿಲ್ಲೆಯ 13 ಸಾವಿರ ನೌಕರರ ಪರಿಶ್ರಮದಿಂದಲೇ ಸರ್ಕಾರದ ಯೋಜನೆಗಳು ಜನರಿಗೆ ತಲುಪುತ್ತಿವೆ. ಆರೋಗ್ಯ ಸಂಜೀವಿನಿ ಯೋಜನೆಯ ಲಾಭವನ್ನು ನೌಕರರು ಸದ್ಬಳಕೆ ಮಾಡಿಕೊಳ್ಳಬೇಕು. ಎಸ್.ಎಸ್. ಕೇರ್ ಟ್ರಸ್ಟ್‌ನಿಂದ ಮುಂದಿನ ದಿನಗಳಲ್ಲಿ ನೌಕರರು ಹಾಗೂ ನೌಕರರ ಮಕ್ಕಳಿಗಾಗಿ ವಿಶೇಷ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗುವುದು ಎಂದರು.ಸಂಘದ ಜಿಲ್ಲಾಧ್ಯಕ್ಷ ವೀರೇಶ ಎಸ್. ಒಡೇನಪುರ ಮಾತನಾಡಿ, ರಾಜ್ಯದಲ್ಲಿ ಒಟ್ಟು 7.13 ಲಕ್ಷ ಮಂಜೂರಾದ ಹುದ್ದೆಗಳಿವೆ. ಆದರೆ, ಹೊಸ ನೇಮಕಾತಿ ಪ್ರಕ್ರಿಯೆಗಳು ಆಗದ ಹಿನ್ನೆಲೆ 4.97 ಲಕ್ಷ ನೌಕರರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಸುಮಾರು 2.14 ಲಕ್ಷ ಹುದ್ದೆಗಳು ಖಾಲಿ ಉಳಿದಿದ್ದು, ಅಧಿಕಾರಿ, ನೌಕರರ ಮೇಲೆ ಹೆಚ್ಚಿನ ಒತ್ತಡ ಇದೆ. ನಿರಂತರ ಒತ್ತಡದಲ್ಲಿ ಸೇವೆ ಸಲ್ಲಿಸುವ ಅಧಿಕಾರಿ, ನೌಕರರಲ್ಲಿ ಆತ್ಮವಿಶ್ವಾಸ ಮೂಡಿಸಲು ಇಂತಹ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ ಚೇತೋಹಾರಿಯಾಗಿವೆ ಎಂದರು.
ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ, ಯುವ ಉದ್ಯಮಿ, ಕಾಂಗ್ರೆಸ್ ಮುಖಂಡ ಶ್ರೀನಿವಾಸ ವಿ.ಶಿವಗಂಗಾ, ಜಿಪಂ ಉಪ ಕಾರ್ಯದರ್ಶಿ ಮಮತಾ ಹೊಸಗೌಡರ್, ಡಿಆರ್‌ಆರ್ ಪಾಲಿಟೆಕ್ನಿಕ್ ಬೋಧಕ ವಿಜಯಕುಮಾರ, ಸಂಘದ ಗೌರವಾಧ್ಯಕ್ಷ ಎನ್.ಮಾರುತಿ, ಪ್ರಧಾನ ಕಾರ್ಯದರ್ಶಿ ಸಿ.ಪರಶುರಾಮಪ್ಪ, ಕಾರ್ಯಾಧ್ಯಕ್ಷ ಬಿ.ಪಾಲಾಕ್ಷಿ, ಖಜಾಂಚಿ ಬಿ.ಆರ್.ತಿಪ್ಪೇಸ್ವಾಮಿ, ರಾಜ್ಯ ಪರಿಷತ್ ಸದಸ್ಯ ಜಿ.ಓಬಳಪ್ಪ, ಸಾಂಸ್ಕೃತಿಕ ಕಾರ್ಯದರ್ಶಿ ಸುಧಾ, ನರೇಶ, ಸೋಮಶೇಖರಪ್ಪ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ರೇಣುಕಾದೇವಿ, ಸಂಘದ ನಿಕಟ ಪೂರ್ವ ರಾಜ್ಯ ಪರಿಷತ್ ಸದಸ್ಯ ಡಾ.ರಂಗನಾಥ, ಜಿಲ್ಲಾ ಯೋಗ ಒಕ್ಕೂಟದ ಅಧ್ಯಕ್ಷ ವಾಸುದೇವ ರಾಯ್ಕರ್, ರವಿಕುಮಾರ, ಡಾ.ಪರಶುರಾಮ, ನಾಗರಾಜ, ಮಾರುತಿ, ಆನಂದಗೌಡ, ಸಿದ್ದಪ್ಪ ಇತರರು ಇದ್ದರು.- - -
(ಬಾಕ್ಸ್)* ನೌಕರರು ವೃತ್ತಿ ಗೌರವ ಕಾಪಾಡಬೇಕು ಪದವೀಧರ ಯುವಕನೊಬ್ಬ ಕಿಡ್ನಿ ವೈಫಲ್ಯದಿಂದ ವಾರಕ್ಕೆರೆಡು ಸಲ ಡಯಾಲಿಸಿಸ್ ಪಡೆಯುತ್ತಿದ್ರೂ ತನ್ನ ತಂದೆ, ತಾಯಿಗೆ ಆರ್ಥಿಕ ಹೊರೆ ಆಗಬಾರದೆಂದು ಬದುಕಿರುವ ಕೊನೆಯ ದಿನಗಳಲ್ಲಿ ಕೆಲಸ ಮಾಡಿ, ತಂದೆ, ತಾಯಿ ಸೇವೆ ಮಾಡಬೇಕೆನ್ನುತ್ತಿದ್ದ. ಆ ಯುವಕನ ಆಸೆ, ಆತ್ಮವಿಶ್ವಾಸ, ಹೆತ್ತವರಿಗೆ ಕಷ್ಟಕೊಡಬಾರದೆಂಬ ಆತನ ಬದ್ಧತೆ, ಇಚ್ಛಾಶಕ್ತಿ ಕಂಡು ಹೆಮ್ಮೆಯೆನಿಸಿತು. ಜನಸೇವೆಯ ಅವಕಾಶ ದೇವರು ನಿಮಗೆ ಕೊಟ್ಟಿದ್ದಾರೆ. ನಿಸ್ವಾರ್ಥದಿಂದ ಸೇವೆ ಮಾಡಿ, ವೃತ್ತಿ ಗೌರವ ಕಾಪಾಡಿ ಎಂದು ಸಂಸದೆ ಸಲಹೆ ನೀಡಿದರು.
- - --13ಕೆಡಿವಿಜಿ1, 2, 3.ಜೆಪಿಜಿ: ದಾವಣಗೆರೆಯಲ್ಲಿ ಮಂಗಳವಾರ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ, ಯೋಗ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಚಾಲನೆ ನೀಡಿದರು.- - - -13ಕೆಡಿವಿಜಿ6, 7: ದಾವಣಗೆರೆಯಲ್ಲಿ ಮಂಗಳವಾರ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ, ಯೋಗ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗೆ ಗುಂಡು ಎಸೆಯುವ ಮೂಲಕ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಚಾಲನೆ ನೀಡಿದರು. ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ಇತರರು ಇದ್ದರು.- - - -13ಕೆಡಿವಿಜಿ8: ದಾವಣಗೆರೆಯಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ, ಯೋಗ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ ಸಮಾರಂಭದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಕಾಂಗ್ರೆಸ್ ಯುವ ಮುಖಂಡ ಶ್ರೀನಿವಾಸ ವಿ.ಶಿವಗಂಗಾ ಇತರರಿಗೆ ಸನ್ಮಾನಿಸಲಾಯಿತು. - - -