ಸಾರಾಂಶ
ಜಗಳೂರು ತಾಲೂಕಿನ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ದಿನಗೂಲಿ ನೌಕರರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಪಟ್ಟ ಸಚಿವರ ಜೊತೆ ಚರ್ಚಿಸುತ್ತೇನೆ ಎಂದು ಶಾಸಕ ಬಿ.ದೇವೇಂದ್ರಪ್ಪ ಭರವಸೆ ನೀಡಿದರು.
- ರಾಜ್ಯ ದಿನಗೂಲಿ ಕ್ಷೇಮಾಭಿವೃದ್ಧಿ ಸಂಘದಿಂದ ಮನವಿ ಸ್ವೀಕಾರ
- - -ಕನ್ನಡಪ್ರಭ ವಾರ್ತೆ ಜಗಳೂರು
ತಾಲೂಕಿನ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ದಿನಗೂಲಿ ನೌಕರರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಪಟ್ಟ ಸಚಿವರ ಜೊತೆ ಚರ್ಚಿಸುತ್ತೇನೆ ಎಂದು ಶಾಸಕ ಬಿ.ದೇವೇಂದ್ರಪ್ಪ ಭರವಸೆ ನೀಡಿದರು.ಪಟ್ಟಣದ ಶಾಸಕರ ನಿವಾಸದಲ್ಲಿ ತಾಲೂಕಿನ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ದಿನಗೂಲಿ ಕ್ಷೇಮಾಭಿವೃದ್ಧಿ ಸಂಘದ ನೌಕರರಿಗೆ ಸೌಲಭ್ಯಕ್ಕಾಗಿ ಇದೇ ಆ.12ರಿಂದ ಆರಂಭವಾಗಲಿರುವ ವಿಧಾನ ಸಭೆ ಅಧಿವೇಶನದಲ್ಲಿ ಚರ್ಚಿಸಿ ಸರ್ಕಾರದ ಮತ್ತು ಸಂಬಂಧಪಟ್ಟ ಸಚಿವರ ಗಮನ ಸೆಳೆಯಬೇಕು ಎಂಬ ನೀಡಿದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.
ಈ ವೇಳೆ ಮಾತನಾಡಿದ ಕಾರ್ಯದರ್ಶಿ ಅಂಜಿನಪ್ಪ ಮಾತನಾಡಿ 2012ರ ಅಧಿಸೂಚನೆಯಂತೆ ಪೂರ್ಣ ಪ್ರಮಾಣದ ಸೌಲಭ್ಯ ಜಾರಿಗೊಳಿಸಲು ಸರ್ಕಾರದ ಮಟ್ಟದಲ್ಲಿ ನಮ್ಮ ಪರವಾಗಿ ಧ್ವನಿ ಎತ್ತಬೇಕು. ಅಲ್ಲದೇ ತಾಲೂಕು ವ್ಯಾಪ್ತಿಯಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ದಿನಗೂಲಿ ನೌಕರರಿಗೆ ಹೋರಾಟದ ಪ್ರಯತ್ನದಿಂದ ಕನಿಷ್ಠ ಮೂಲವೇತನ ಹಾಗೂ ಶೇ.75ರಷ್ಟು ಮನೆ ಬಾಡಿಗೆ ಭತ್ಯೆ ಹಾಗೂ ಶೇ.75 ಜೀವನ ನಿರ್ವಹಣೆ ಭತ್ಯೆ ಸೌಲಭ್ಯ ನೀಡಲಾಗಿದೆ. 2012ರಲ್ಲಿನ ಅಧಿನಿಯಮ ಶಾಸಕ ಹಲವು ಸೌಲಭ್ಯಗಳನ್ನು ಕಡಿತಗೊಳಿಸಿದೆ. 30-40 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿ ಹೊಂದುವ ನೌಕರರಿಗೆ ಪಿಂಚಣಿ ಯೋಜನೆ ಜಾರಿಯಾಗಿಲ್ಲ ಎಂದು ಶಾಸಕರಿಗೆ ಮನವರಿಕೆ ಮಾಡಿಕೊಟ್ಟರು.ಈ ವೇಳೆ ರಾಜ್ಯ ದಿನಗೂಲಿ ಕ್ಷೇಮಾಭಿವೃದ್ಧಿ ಸಂಘದ ನೌಕರರ ಅಧ್ಯಕ್ಷ ಕೆಳಗೋಟೆ ಬಸವರಾಜ್ . ತಾಲೂಕು ಅಧ್ಯಕ್ಷ ಬೋರಯ್ಯ, ಗೌರವ ಅಧ್ಯ್ಯಕ್ಷ ಮಲ್ಲಿಕಾರ್ಜುನ್, ರಂಗಪ್ಪ, ಶಾಂತಕುಮಾರ, ಈರಪ್ಪ, ರಾಜಪ್ಪ, ಸೂರಲಿಂಗಪ್ಪ, ಸಣ್ಣಭೀಮಪ್ಪ, ರಾಜಪ್ಪ, ಸೇರಿದಂತೆ ಅನೇಕರು ಇದ್ದರು. - - -
-7ಜೆಎಲ್ಆರ್ಚಿತ್ರ1:ಜಗಳೂರು ಪಟ್ಟಣದ ನಿವಾಸದಲ್ಲಿ ಶಾಸಕ ಬಿ.ದೇವೇಂದ್ರಪ್ಪ ಅವರಿಗೆ ದಿನಗೂಲಿ ನೌಕರರ ಸಂಘದಿಂದ ಮನವಿ ಸಲ್ಲಿಸಲಾಯಿತು.