ಸಾರಾಂಶ
ಶ್ರೀರಂಗಪಟ್ಟಣದ ಕಾಂಗ್ರೆಸ್ ಶಾಸಕ ಬಂಡೀಸಿದ್ದೇಗೌಡನ ಮುಸ್ಲಿಂ ವಿರೋಧಿ ಹೇಳಿಕೆಯನ್ನು ಖಂಡಿಸಿ ಹಾಗೂ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿಶ್ರೀರಂಗಪಟ್ಟಣದ ಕಾಂಗ್ರೆಸ್ ಶಾಸಕ ಬಂಡೀಸಿದ್ದೇಗೌಡನ ಮುಸ್ಲಿಂ ವಿರೋಧಿ ಹೇಳಿಕೆಯನ್ನು ಖಂಡಿಸಿ ಹಾಗೂ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು.ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ಉಡುಪಿ ಜಿಲ್ಲಾ ಉಪಾಧ್ಯಕ್ಷ ಹನೀಫ್ ಮೂಳೂರ್, ಕಾಂಗ್ರೆಸ್ ಸರ್ಕಾರ ಮುಸ್ಲಿಮರ ವೋಟ್ ಪಡೆದು ನಿರಂತರವಾಗಿ ಮುಸ್ಲಿಮರ ವಿರುದ್ಧವೇ ಕೆಲಸ ಮಾಡಿದೆ. ಅಧಿಕಾರಕ್ಕೆ ಬಂದರೆ ಹಿಜಾಬ್ ನಿಷೇಧವನ್ನು ಹಿಂಪಡೆಯುತ್ತೇವೆ ಎಂದು ಹೇಳಿದ್ದ ಸಿದ್ದರಾಮಯ್ಯ, ಅಧಿಕಾರ ಹಿಡಿದು 2 ವರ್ಷವಾದರೂ ಅದರ ಬಗ್ಗೆ ಮಾತೆತ್ತುತ್ತಿಲ್ಲ. ಒಂದು ವೇಳೆ ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ ಶಾಸಕರನ್ನು ಶಾಸಕ ಸ್ಥಾನದಿಂದ ವಜಾಗೊಳಿಸದಿದ್ದರೆ ತೀವ್ರ ಹೋರಾಟವನ್ನು ನಡೆಸುವುದಾಗಿ ಎಚ್ಚರಿಸಿದರು.ಎಸ್‌ಡಿಪಿಐ ಉಡುಪಿ ಕ್ಷೇತ್ರ ಸಮಿತಿ ಉಪಾಧ್ಯಕ್ಷ ರಹೀಂ ಆದಿಉಡುಪಿ ಮಾತನಾಡಿದರು.
ಈ ಸಂದರ್ಭ ಎಸ್‌ಡಿಪಿಐ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಶುದ್ದೀನ್, ಉಡುಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವ, ವುಮೆನ್ ಇಂಡಿಯಾ ಮೂವ್ಮೆಂಟ್ ಜಿಲ್ಲಾಧ್ಯಕ್ಷೆ ನಾಝಿಯಾ ನಸ್ರುಲ್ಲ ಹಾಗೂ ಮತ್ತಿತರು ಉಪಸ್ಥಿತರಿದ್ದರು.