ಸಾರಾಂಶ
ನಮ್ಮ ರಾಜ್ಯದ ಕಾರ್ಮಿಕರಿಗೆ ಅನ್ಯಾಯ ಎಸಗಿದೆ ಎಂದು ಜೆಎಸ್‌ಡಬ್ಲ್ಯೂ ಸಂಸ್ಥೆ ವಿರುದ್ಧ ದಿಕ್ಕಾರ ಕೂಗಿದರು. ಕೈಬಿಟ್ಟವರನ್ನು ಕೂಡಲೇ ಕೆಲಸಕ್ಕೆ ಮರು ನೇಮಕಗೊಳಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಕನ್ನಡಪ್ರಭ ವಾರ್ತೆ ಮಂಗಳೂರುಪಣಂಬೂರು ನವಮಂಗಳೂರು ಬಂದರನಲ್ಲಿ ಕರ್ನಾಟಕದ ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಲಾಗಿದೆ ಎಂದು ಆರೋಪಿಸಿ ಜೆಎಸ್‌ಡಬ್ಲ್ಯೂಸಂಸ್ಥೆ ವಿರುದ್ಧ ನೌಕರರು ಬುಧವಾರ ನವ ಮಂಗಳೂರು ಬಂದರ್ ಗೇಟ್ ಬಳಿ ಪ್ರತಿಭಟನೆ ನಡೆಸಿದರು.
ನಮ್ಮ ರಾಜ್ಯದ ಕಾರ್ಮಿಕರಿಗೆ ಅನ್ಯಾಯ ಎಸಗಿದೆ ಎಂದು ಜೆಎಸ್‌ಡಬ್ಲ್ಯೂ ಸಂಸ್ಥೆ ವಿರುದ್ಧ ದಿಕ್ಕಾರ ಕೂಗಿದರು. ಕೈಬಿಟ್ಟವರನ್ನು ಕೂಡಲೇ ಕೆಲಸಕ್ಕೆ ಮರು ನೇಮಕಗೊಳಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಕರ್ನಾಟಕದ ಬಡ ಕಾರ್ಮಿಕರನ್ನು ಸಂಸ್ಥೆ ಕೆಲಸದಿಂದ ತೆಗೆದು ಹಾಕಿ, ಬೇರೆ ರಾಜ್ಯದ ಕಾರ್ಮಿಕರಿಗೆ ಕೆಲಸ ಕೊಟ್ಟಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.ಕೆಲಸ ಕಳೆದುಕೊಂಡ ಕಾರ್ಮಿಕರು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿ ಸಂಸ್ಥೆಯ ವಿರುದ್ಧ ಘೋಷಣೆ ಕೂಗಿದರು.