ತಾಲೂಕಿನ ರಾಯಲಕೇರಿಯ ನಿವಾಸಿಗಳಾದ ಲಕ್ಷ್ಮಿನಾರಾಯಣ ಗಣಪತಿ ನಾಯ್ಕ(19) ಹಾಗೂ ಅಜಿತ ಗಜಾನನ ನಾಯ್ಕ(29) ಪ್ರಕರಣದ ಆರೋಪಿಗಳಾಗಿದ್ದಾರೆ.
ಹೊನ್ನಾವರ: ಸಾರ್ವಜನಿಕ ಸ್ಥಳದಲ್ಲಿ ತಲವಾರ್ ಪ್ರದರ್ಶಿಸಿ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದಲ್ಲದೆ, ಅದರ ವಿಡಿಯೋವನ್ನು ವಾಟ್ಸಪ್ ಸ್ಟೇಟಸ್ನಲ್ಲಿ ಹರಿಬಿಟ್ಟ ಆರೋಪದ ಮೇಲೆ ಇಬ್ಬರು ಯುವಕರ ವಿರುದ್ಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕಿನ ರಾಯಲಕೇರಿಯ ನಿವಾಸಿಗಳಾದ ಲಕ್ಷ್ಮಿನಾರಾಯಣ ಗಣಪತಿ ನಾಯ್ಕ(19) ಹಾಗೂ ಅಜಿತ ಗಜಾನನ ನಾಯ್ಕ(29) ಪ್ರಕರಣದ ಆರೋಪಿಗಳಾಗಿದ್ದಾರೆ.ಹೊನ್ನಾವರ ಪೊಲೀಸ್ ಠಾಣೆಯ ಸಿಬ್ಬಂದಿಯೋರ್ವರಿಗೆ ಸ್ಥಳೀಯರು ನೀಡಿದ ಪೆನ್ಡ್ರೈವ್ ಆಧರಿಸಿ ದೂರು ದಾಖಲಿಸಲಾಗಿದೆ. ಪೆನ್ಡ್ರೈವ್ನಲ್ಲಿದ್ದ 27 ಸೆಕೆಂಡ್ಗಳ ವಿಡಿಯೋವನ್ನು ಪರಿಶೀಲಿಸಿದಾಗ, ಲಕ್ಷ್ಮಿನಾರಾಯಣ ನಾಯ್ಕ ಸಾರ್ವಜನಿಕ ಸ್ಥಳದಲ್ಲಿ ತಲವಾರನ್ನು ಹೆಗಲ ಮೇಲಿಟ್ಟುಕೊಂಡು ಸಾಗುತ್ತಿರುವುದು ಕಂಡುಬಂದಿದೆ ಎನ್ನಲಾಗಿದೆ.
ಅಲ್ಲದೆ, ಬೈಕ್ನಲ್ಲಿ ಮೂವರು ಪ್ರಯಾಣಿಸುತ್ತಿದ್ದ ವೇಳೆ ಮಧ್ಯದಲ್ಲಿ ಕುಳಿತಿದ್ದ ಅಜಿತ ಗಜಾನನ ನಾಯ್ಕ ತಲವಾರನ್ನು ರಸ್ತೆಗೆ ಉಜ್ಜಿಕೊಂಡು ಸಾಗಿದ್ದು, ಇದರಿಂದ ರಸ್ತೆಯಲ್ಲಿ ಬೆಂಕಿಯ ಕಿಡಿಗಳು ಚಿಮ್ಮಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇದೇ ವೇಳೆ ವ್ಯಕ್ತಿಯೊಬ್ಬ ಅಶ್ಲೀಲ ಪದಗಳಿಂದ ನಿಂದಿಸುತ್ತಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಹೊನ್ನಾವರ ಪೊಲೀಸ್ ಠಾಣೆಯ ಸಿಬ್ಬಂದಿಯೊರ್ವರಿಗೆ ಸ್ಥಳೀಯರು ನೀಡಿದ ಪೆನ್ಡ್ರೈವ್ ಆಧರಿಸಿ ದೂರು ದಾಖಲಿಸಲಾಗಿದೆ.ಈ ಸಂಬಂಧ ಹೊನ್ನಾವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.ಇಂದು ಮುಂಡಗೋಡ್ ಬಂದ್ಗೆ ಕರೆ
ಮುಂಡಗೋಡ: ಇತ್ತೀಚೆಗೆ ತಾಲೂಕಿನ ಸಿಂಗನಳ್ಳಿ ಗ್ರಾಮದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ನ. ೧೨ರಂದು ಮುಂಡಗೋಡ ಬಂದ್ಗೆ ಹಿಂದೂಪರ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿವೆ.ಸಂತ್ರಸ್ತ ಬಾಲಕಿಗೆ ನ್ಯಾಯ ಸಿಗಬೇಕು ಮತ್ತು ಇಂತಹ ಹೇಯ ಕೃತ್ಯಗಳನ್ನು ಎಸಗುವ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿ ಈ ಬಂದ್ ಕರೆ ನೀಡಲಾಗಿದೆ. ಗುರುವಾರ ಬೆಳಗ್ಗೆ ೧೦ ಗಂಟೆಗೆ ಮುಂಡಗೋಡದ ಪ್ರವಾಸಿ ಮಂದಿರ ಆವರಣದಲ್ಲಿ ಸಾರ್ವಜನಿಕರು ಹಾಗೂ ಸಂಘಟನೆಗಳ ಕಾರ್ಯಕರ್ತರು ಒಗ್ಗೂಡಿ ಪ್ರತಿಭಟನೆ ನಡೆಸಲಿವೆ ಎಂದು ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.