ಕನ್ನಡಪ್ರಭ ವಾರ್ತೆ ಮಳವಳ್ಳಿ
ಸಾರ್ವಜನಿಕ ಅರ್ಜಿಗಳನ್ನು ಇಲ್ಲಸಲ್ಲದ ನೆಪ ಹೇಳಿ ಅಲೆದಾಡಿಸದೆ ಜನರ ಕೆಲಸಗಳನ್ನು ಸಕಾಲದಲ್ಲಿ ಮಾಡಿಕೊಡಿ. ಇಲ್ಲವಾದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಲೋಕಾಯುಕ್ತ ಡಿವೈಎಸ್ಪಿ ಸುನೀಲ್ ಕುಮಾರ್ ಎಚ್ಚರಿಕೆ ನೀಡಿದರು.ಪಟ್ಟಣದ ತಾಲೂೂಕು ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಿ ದೂರುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ನಮ್ಮ ಕಚೇರಿಗಳಿಗೆ ನಿಗದಿತ ಸಮಯಕ್ಕೆ ಹಾಜರಾಗಿ, ಕರ್ತವ್ಯ ನಿಮಿತ್ತ ಹೊರ ಹೋಗುವ ವೇಳೆ ಕಡ್ಡಾಯವಾಗಿ ಪುಸ್ತಕದಲ್ಲಿ ದಾಖಲಿಸಬೇಕೆಂದು ಸಲಹೆ ನೀಡಿದರು.
ಇಲಾಖೆಗಳಲ್ಲಿನ ನಗದು ಪುಸ್ತಕಗಳನ್ನು ನಿಯಮಾವಳಿಯಂತೆ ಪಾಲಿಸಬೇಕು. ಸಾರ್ವಜನಿಕ ಅರ್ಜಿಗಳು ಬಂದಾಗ ಇಲ್ಲಸಲ್ಲದ ನೆಪ ಹೇಳಿ ಜನರನ್ನು ಅಲೆದಾಡಿಸಬಾರದು. ಸಾರ್ವಜನಿಕರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಿ ಅವರ ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥಪಡಿಸದಿದ್ದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.ಲೋಕಾಯುಕ್ತ ಇಲಾಖೆಯು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು, ಭ್ರಷ್ಟಾಚಾರ ನಿಯಂತ್ರಿಸಲು ಮತ್ತು ಆಡಳಿತದಲ್ಲಿ ಪಾರದರ್ಶಕತೆ ತರಲು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿ ಲಂಚ ಕೇಳಿದರೆ ದೂರು ನೀಡಬಹುದು. ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ಜನರಿಗೆ ಸಕಾಲದಲ್ಲಿ ಸೌಲಭ್ಯ ನೀಡದಿರುವ ವಿರುದ್ಧ ದೂರು ನೀಡಲು ಲೋಕಾಯುಕ್ತಕ್ಕೆ ಅಧಿಕಾರವಿದೆ ಎಂದರು.
ಇದೇ ವೇಳೆ ಸಲ್ಲಿಕೆಯಾಗಿರುವ 30ಕ್ಕೂ ಅಧಿಕ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು. ಸಮಸ್ಯೆ ಬಗೆಹರಿಸುವುದು ನಮ್ಮ ಕರ್ತವ್ಯ. ಮೇಲಿನ ಅಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ವಹಿಸುತ್ತೇವೆಂದು ಹೇಳಿದರು.
ಈ ವೇಳೆ ಲೋಕಾಯುಕ್ತ ಅಧಿಕಾರಿ ಎಂ.ರವಿಕುಮಾರ್, ತಹಸೀಲ್ದಾರ್ ಎಸ್.ವಿ.ಲೋಕೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಮೋಹನ್ ಅವರ ಪಕ್ಷ ನಿಷ್ಠೆಗೆ ಒಲಿದು ಬಂದ ಅಧ್ಯಕ್ಷ ಸ್ಥಾನ: ಎಚ್.ಟಿ.ಮಂಜುಕೆ.ಆರ್.ಪೇಟೆ:ಜೆಡಿಎಸ್ ನೂತನ ತಾಲೂಕು ಅಧ್ಯಕ್ಷರಾಗಿ ಟಿಎಪಿಸಿಎಂಎಸ್ ನಿರ್ದೇಶಕ ಮಲ್ಲೇನಹಳ್ಳಿ ಮೋಹನ್ ಅವರನ್ನು ನೇಮಿಸಲಾಗಿದೆ ಎಂದು ಶಾಸಕ ಎಚ್.ಟಿ.ಮಂಜು ತಿಳಿಸಿದರು.
ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ನೂತನ ಅಧ್ಯಕ್ಷ ಮತ್ತು ಜಿಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿ, ಜೆಡಿಎಸ್ ಪಕ್ಷವು ಪ್ರಾಮಾಣಿಕರು ಹಾಗೂ ಪಕ್ಷನಿಷ್ಠೆ ಇರುವ ವ್ಯಕ್ತಿಗಳನ್ನು ಎಂದಿಗೂ ಕೈಬಿಡುವುದಿಲ್ಲ ಅವರನ್ನು ಗುರುತಿಸಿ ಅವರುಗಳಿಗೆ ಜವಾಬ್ದಾರಿ ನೀಡುತ್ತದೆ ಎಂದರು.ಮೋಹನ್ ಅವರು ಕಳೆದ 25 ವರ್ಷಗಳಿಂದಲೂ ಜೆಡಿಎಸ್ ನಿಷ್ಠ ಕಾರ್ಯಕರ್ತನಾಗಿ, ತಾರಮ ಸದಸ್ಯರಾಗಿ, ಹೀಗೆ ವಿವಿಧ ಹಂತದ ಹುದ್ದೆ ನಿಭಾಯಿಸುವ ಮೂಲಕ ಪಕ್ಷ ವಹಿಸಿದ ಎಲ್ಲಾ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿದ್ದಾರೆ. ಹೀಗಾಗಿ ಅವರಿಗೆ ತಾಲೂಕು ಜೆಡಿಎಸ್ ಅಧ್ಯಕ್ಷ ಹುದ್ದೆ ಒಲಿದು ಬಂದಿದೆ ಎಂದರು.ಜಿಲ್ಲಾ ಮಟ್ಟಕ್ಕೂ ಅನೇಕ ಪ್ರಾಮಾಣಿಕ ಕಾರ್ಯಕರ್ತರನ್ನು ಪಕ್ಷವು ಗುರುತಿಸಿ ನೇಮಕ ಮಾಡಲಾಗಿದೆ. ಪಕ್ಷದಲ್ಲಿ ಇನ್ನೂ ಹಲವು ಹುದ್ದೆಗಳಿದ್ದು ಮುಂದಿನ ದಿನಗಳಲ್ಲಿ ಅವುಗಳನ್ನು ಪಕ್ಷದ ಕಾರ್ಯಕರ್ತರಿಗೆ ನೀಡಲಾಗುವುದು ಎಂದರು.