:ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ವಂದೇ ಮಾತರಂ ಗೀತೆಗೆ ಅಗೌರವ ತೋರಿರುವುದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.
ಸಿಂಧನೂರು:ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ವಂದೇ ಮಾತರಂ ಗೀತೆಗೆ ಅಗೌರವ ತೋರಿರುವುದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.
ಪ್ರವಾಸಿಮಂದಿರದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಮಹಾತ್ಮಾಗಾಂಧಿ ವೃತ್ತದವರೆಗೆ ಸಾಗಿಬಂದಿತು. ಮೆರವಣಿಗೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ವಿರುದ್ಧ ಘೋಷಣೆ ಕೂಗಿದರು.ತಹಸೀಲ್ದಾರ್ ಅರುಣ್.ಎಚ್.ದೇಸಾಯಿ ಮುಖಾಂತರ ಮನವಿ ಪತ್ರ ಸಲ್ಲಿಸಲಾಯಿತು. ಪಕ್ಷದ ನಗರ ಮೋರ್ಚಾ ಅಧ್ಯಕ್ಷ ಸಿದ್ಧರಾಮೇಶ ಮನ್ನಾಪುರ, ಯುವ ಮೋರ್ಚಾ ಅಧ್ಯಕ್ಷ ಮುತ್ತು ಬರಸಿ, ಮುಖಂಡರಾದ ರವಿ ರಾಠೋಡ್, ರಾಜು ಅಡವಿಭಾವಿ, ಅಕ್ಷಯಗೌಡ, ಸೋಮನಾಥ ಕಲ್ಲೂರು, ವಂಶಿ ಕೃಷ್ಣ, ಕೃಷ್ಣಪ್ಪ ರಾಠೋಡ್, ಸಿದ್ಧು ಹೂಗಾರ ಭಾಗವಹಿಸಿದ್ದರು.
-----ಫೋಟೋ:
18ಕೆ.ಪಿ.ಎಸ್.ಎನ್.ಡಿ.3: ಸಿಂಧನೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ವಂದೇ ಮಾತರಂ ಗೀತೆಗೆ ಅಗೌರವ ತೋರಿಸಿದನ್ನು ಪ್ರತಿಭಟಿಸಿ ಪ್ರವಾಸಿ ಮಂದಿರದಿಂದ ಮಹಾತ್ಮಗಾಂಧಿ ವೃತ್ತದವರೆಗೆ ಮೆರವಣಿಗೆ ನಡೆಸಿದರು-----