ಇಂದು ಗಣೇಶ ಮೂರ್ತಿಗಳ ವಿಸರ್ಜನೆ

| Published : Sep 17 2024, 12:46 AM IST

ಸಾರಾಂಶ

ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಸೆ.17ರಂದು ಬೆಳಗಾವಿಯಲ್ಲಿ ನಡೆಯಲಿದ್ದು, ಈ ಮೂಲಕ ಗಣೇಶೋತ್ಸವಕ್ಕೆ ಅದ್ಧೂರಿ ತೆರೆಬೀಳಲಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಸೆ.17ರಂದು ಬೆಳಗಾವಿಯಲ್ಲಿ ನಡೆಯಲಿದ್ದು, ಈ ಮೂಲಕ ಗಣೇಶೋತ್ಸವಕ್ಕೆ ಅದ್ಧೂರಿ ತೆರೆಬೀಳಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಗಣೇಶ ಮೂರ್ತಿಗೆ ಪೂಜೆ ನೆರವೇರಿಸುವ ಮೂಲಕ ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆಗೆ ಚಾಲನೆ ನೀಡುವರು. ಮೆರವಣಿಗೆ ನರಗುಂದಕರ ಭಾವೆ ಚೌಕದಿಂದ ಪ್ರಾರಂಭವಾಗಿ ಮಾರುತಿ ಗಲ್ಲಿ, ಹುತಾತ್ಮ ಚೌಕ್‌, ರಾಮದೇವ ಗಲ್ಲಿ, ಸಮಾದೇವಿ ಗಲ್ಲಿ, ಯಂಡೆಕೂಟ್‌, ಧರ್ಮವೀರ ಸಂಭಾಜಿ ಚೌಕ್‌ (ಬೋಗಾರವೇಸ್), ರಾಮಲಿಂಗಖಿಂಡ ಗಲ್ಲಿ ರಸ್ತೆ, ಟಿಳಕಚೌಕ್‌, ಹೇಮುಕಲಾನಿ ಚೌಕ್‌ (ಶಿವಭವನ), ಶನಿ ಮಂದಿರ, ಕಪಿಲೇಶ್ವರ ಮೇಲ್ಸುತುವೆ ರಸ್ತೆ, ರೇಣುಕಾ ಹೊಟೇಲ್ ಕ್ರಾಸ್ ಮೂಲಕ ಕಪಿಲೇಶ್ವರ ಮಂದಿರ ಬಳಿ ಮುಕ್ತಾಯಗೊಳ್ಳಲಿದೆ. ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ.

ಸಂಚಾರ ಮಾರ್ಗದಲ್ಲಿ ಬದಲಾವಣೆ: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದ್ದು, ಪರ್ಯಾಯ ಮಾರ್ಗದಲ್ಲಿ ಸಂಚರಿಸಬಹುದಾಗಿದೆ.

ಅಶೋಕ ವೃತ್ತ-ಆರ್‌ಟಿಒ-ಚನ್ನಮ್ಮ ಸರ್ಕಲ್ ಮಾರ್ಗವಾಗಿ ಕಾಲೇಜು ರಸ್ತೆ ಮುಖಾಂತರ ಖಾನಾಪುರ ಕಡೆಗೆ ಸಾಗುವ ವಾಹನಗಳ ಸವಾರರು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಹಳೆಯ ಪಿಬಿ ರಸ್ತೆ ಮಾರ್ಗವಾಗಿ ಕೃಷ್ಣದೇವರಾಯ ವೃತ್ತ, ವೈ-ಜಂಕ್ಷಣ, ಸದಾಶಿವ ನಗರ ಲಕ್ಷ್ಮೀ ಕಾಂಪ್ಲೆಕ್ಸ್, ವಿಶ್ವೇಶ್ವರಯ್ಯ ನಗರ, ಬಾಚಿ ಕ್ರಾಸ್, ಗಾಂಧಿ ಸರ್ಕಲ , ಶೌರ್ಯ ಚೌಕ, ಕೇಂದ್ರೀಯ ವಿದ್ಯಾಲಯ ನಂ.೨, ಶರ್ಕತ್ ಪಾರ್ಕ್‌, ಗ್ಲೋಬ್ ಥಿಯೇಟರ್ ಸರ್ಕಲ್ ಮೂಲಕ ಖಾನಾಪೂರ ರಸ್ತೆಗೆ ಸೇರಿ ಮುಂದೆ ಸಾಗುವುದು.

ಖಾನಾಪುರ ಕಡೆಯಿಂದ ನಗರ ಭಾಗದಿಂದ ರಾಷ್ಟ್ರೀಯ ಹೆದ್ದಾರಿಗೆ ಸೇರುವ ಮತ್ತು ಗೋಗಟೆ ಸರ್ಕಲ್ ಕಡೆಯಿಂದ ರೇಲ್ವೆ ಸ್ಟೇಶನ್‌, ಸ್ಟೇಶನ್ ರಸ್ತೆ, ಹೆಡ್ ಪೋಸ್ಟ್ ಆಫೀಸ್ ಸರ್ಕಲ್ ಮೂಲಕ ಶನಿ ಮಂದಿರ ಕಡೆಗೆ ಸಂಚರಿಸುವ ವಾಹನಗಳು ಗ್ಲೋಬ್ ಥಿಯೇಟರ್ ಸರ್ಕಲ್‌ದಲ್ಲಿ ಎಡ ತಿರುವು ಪಡೆದುಕೊಂಡು ಶರ್ಕತ್ ಪಾರ್ಕ್‌, ಕೇಂದ್ರೀಯ ವಿದ್ಯಾಲಯ ನಂ.2, ಶೌರ್ಯ ಚೌಕ, ಗಾಂಧಿ ಸರ್ಕಲ್, ಗಣೇಶ ಮಂದಿರ, ಹಿಂಡಲಗಾ ರಸ್ತೆ, ಹನುಮಾನ ನಗರ ಡಬಲ್ ರಸ್ತೆ ಮೂಲಕ ಬಾಕ್ಸೈಟ್ ರಸ್ತೆ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಸೇರಿ ಮುಂದೆ ಸಂಚರಿಸುವುದು.

ಜೀಜಾಮಾತಾ ಸರ್ಕಲ್ ದಿಂದ ದೇಶಪಾಂಡೆ ಪೆಟ್ರೋಲ್ ಪಂಪ್, ನರಗುಂದಕರ ಭಾವೆ ಚೌಕ/ಕಂಬಳಿ ಕೂಟ, ಪಿಂಪಳ ಕಟ್ಟಾ, ಪಾಟೀಲ ಗಲ್ಲಿ ಕಡೆಗೆ ಸಂಚರಿಸುವ ವಾಹನಗಳು ಜೀಜಾಮಾತಾ ಸರ್ಕಲ್‌ದಿಂದ ನೇರವಾಗಿ ಕೇಂದ್ರ ಬಸ್ ನಿಲ್ದಾಣ/ಪ್ಯಾಟ್ಟನ್ ಶೋ ರೂಂ, ಹಳೇ ಪಿಬಿ ರಸ್ತೆ ಮೂಲಕ ಮುಂದೆ ಸಂಚರಿಸುವುದು.

ನಾಥ ಪೈ ಸರ್ಕಲ್ ಕಡೆಯಿಂದ ಬ್ಯಾಂಕ ಆಫ್ ಇಂಡಿಯಾ, ಎಸ್‌ಪಿಎಂ ರಸ್ತೆ ಮಾರ್ಗವಾಗಿ ಕಪಿಲೇಶ್ವರ ಪ್ಲೈ ಓವರ್ ರಸ್ತೆ ಕಡೆಗೆ ಸಂಚರಿಸುವ ವಾಹನಗಳು ಬ್ಯಾಂಕ್ ಆಫ್ ಇಂಡಿಯಾ ವೃತ್ತದಿಂದ ಹಳೇ ಪಿಬಿ ರಸ್ತೆ ಸೇರಿ ಮುಂದೆ ಸಂಚರಿಸುವುದು. ಹಳೇ ಪಿಬಿ ರಸ್ತೆ, ವಿ.ಆರ್.ಎಲ್ ಲಾಜಿಸ್ಟಿಕ್, ಭಾತಕಾಂಡೆ ಸ್ಕೂಲ್ ಮಾರ್ಗವಾಗಿ ಕಪಿಲೇಶ್ವರ ಫ್ಲೈ ಓವರ್ ರಸ್ತೆ ಕಡೆಗೆ ಸಂಚರಿಸುವ ವಾಹನಗಳು ಸಂಭಾಜಿ ರಸ್ತೆ ಬಳಸಿಕೊಂಡು ಬಸವೇಶ್ವರ ವೃತ್ತ ಖಾಸಬಾಗ, ನಾಥ ಪೈ ಸರ್ಕಲ್ ಮೂಲಕ ಸಂಚರಿಸುವುದು. ಹಳೇ ಪಿಬಿ ರಸ್ತೆ, ಯಶ್ ಆಸ್ಪತ್ರೆ, ಮಹಾದ್ವಾರ ರಸ್ತೆ, ಕಪಿಲೇಶ್ವರ ಮಂದಿರ ಕಡೆಗೆ ಸಾಗುವ ವಾಹನಗಳು ಯಶ್ ಆಸ್ಪತ್ರೆ ಹತ್ತಿರ ಎಡ ತಿರುವು ಪಡೆದುಕೊಂಡು ವಿ.ಆರ್.ಎಲ್ ಲಾಜಿಸ್ಟಿಕ್ ಮೂಲಕ ಹಳೇ ಪಿಬಿ ರಸ್ತೆ ಸೇರಿ ಮುಂದೆ ಸಂಚರಿಸುವುದು.

ಗೂಡ್ಸ್ ಶೆಡ್ ರಸ್ತೆ ಮೂಲಕ ಕಪಿಲೇಶ್ವರ ಫ್ಲೈ ಓವರ್ ರಸ್ತೆ ಕಡೆಗೆ ಸಂಚರಿಸುವ ವಾಹನಗಳು ಎಸ್‌ಪಿಎಂ ರಸ್ತೆ ಕಡೆಗೆ ಸಂಚರಿಸದೇ ಮರಾಠ ಮಂದಿರ, ಗೋವಾ ವೇಸ್ ಸರ್ಕಲ್ ಕಡೆಗೆ ಸಂಚರಿಸುವುದು. ಮೆರವಣಿಗೆ ಮಾರ್ಗದಲ್ಲಿ ಎರಡು ಕ್ಯಾರೇಜ್ ವೇ ಇದ್ದ ಕಡೆಗಳಲ್ಲಿ ಒಂದು ಮಾರ್ಗವನ್ನು ಹಾಗೂ ಒಂದು ಕ್ಯಾರೇಜ್ ವೇ ಇದ್ದ ರಸ್ತೆಯನ್ನು ಸಂಪೂರ್ಣವಾಗಿ ಮೆರವಣಿಗೆಗೆ ಉಪಯೋಗಿಸಲಾಗುತ್ತಿದೆ. ಮಧ್ಯಾಹ್ನ 2 ಗಂಟೆಯಿಂದ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಮುಕ್ತಾಯವಾಗುವರಗೆ ಎಲ್ಲ ದಿಕ್ಕುಗಳಿಂದ ನಗರ ಪ್ರವೇಶಸುವ ವಾಹನಗಳ ಸಂಚಾರ ನಗರದಲ್ಲಿ ನಿಷೇಧಿಸಲಾಗಿದೆ.

ಚನ್ನಮ್ಮ ವೃತ್ತದಿಂದ ಮೆರವಣಿಗೆ ಸೇರುವ ಮಾರ್ಗ ಕಾಕತಿವೇಸ್ ರಸ್ತೆ, ಶನಿವಾರ ಕೂಟ, ಗಣಪತಿ ಗಲ್ಲಿ ರಸ್ತೆ, ಕಂಬಳಿ ಕೂಟ ಹಾಗೂ ಮುಖ್ಯ ಮೆರವಣೆಗೆ ಸಾಗುವ ಮಾರ್ಗವಾದ ನರಗುಂದಕರ ಭಾವೆ ಚೌಕ, ಮಾರುತಿ ಗಲ್ಲಿ, ಹುತಾತ್ಮ ಚೌಕ, ರಾಮದೇವ ಗಲ್ಲಿ, ಸಮಾದೇವಿ ಗಲ್ಲಿ, ಯಂಡೇಕೂಟ, ಧರ್ಮವೀರ ಸಂಭಾಜಿ ಚೌಕ , ರಾಮಲಿಂಗಖಿಂಡ ಗಲ್ಲಿ ರಸ್ತೆ, ಟಿಳಕಚೌಕ, ಹೇಮುಕಾಲನಿ ಚೌಕ, ಶನಿಮಂದಿರ, ಕಪಿಲೇಶ್ವರ ಪ್ಲೈ ಓವರ್ ರಸ್ತೆ, ಕಪಿಲೇಶ್ವರ ಮಂದಿರದ ಎರಡೂ ಬದಿಯ ರಸ್ತೆಗಳಲ್ಲಿ ಮತ್ತು ಕ್ಯಾಂಪ್ ಪ್ರದೇಶ ವ್ಯಾಪ್ತಿಯ ಹ್ಯಾವಲಾಕ್ ರಸ್ತೆ, ಕ್ಯಾಟಲ್ ರೋಡ್, ಯಂಡೇಕೂಟ ದಿಂದ ದೇಶಪಾಂಡೆ ಕೂಟ ಹಾಗೂ ಪವನ ಹೊಟೇಲ್ ವರೆಗಿನ ರಸ್ತೆಗಳಲ್ಲಿ ಎಲ್ಲ ಮಾದರಿಯ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.