ಗ್ಯಾರಂಟಿ ಯೋಜನೆ ಜಾರಿಗೊಳಿಸದಿದ್ದರೆ ಸಂಕಷ್ಟದ ಪರಿಸ್ಥಿತಿ: ಸಚಿವ ಚಲುವರಾಯಸ್ವಾಮಿ

| Published : Feb 11 2024, 01:49 AM IST

ಗ್ಯಾರಂಟಿ ಯೋಜನೆ ಜಾರಿಗೊಳಿಸದಿದ್ದರೆ ಸಂಕಷ್ಟದ ಪರಿಸ್ಥಿತಿ: ಸಚಿವ ಚಲುವರಾಯಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಭೀಕರ ಬರಗಾಲದ ನಡುವೆಯೂ ಸರ್ಕಾರ ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸದಿದ್ದರೆ ಸಂಕಷ್ಟದ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಬಿಂಡಿಗನವಿಲೆಯಲ್ಲಿ ನೂತನ ವಾಣಿಜ್ಯ ಮಳಿಗೆ ಕಟ್ಟಡ ಉದ್ಘಾಟನೆ

ಕನ್ನಡಪ್ರಭ ವಾರ್ತೆ ನಾಗಮಂಗಲಭೀಕರ ಬರಗಾಲದ ನಡುವೆಯೂ ಸರ್ಕಾರ ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸದಿದ್ದರೆ ಸಂಕಷ್ಟದ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ತಾಲೂಕಿನ ಬಿಂಡಿಗನವಿಲೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಿರ್ಮಿಸಿರುವ ನೂತನ ವಾಣಿಜ್ಯ ಮಳಿಗೆ ಕಟ್ಟಡ ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಆದರೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಲೋಕಸಭೆಯಲ್ಲಿ ಈ ಗ್ಯಾರಂಟಿ ಯೋಜನೆಗಳು ಅವಶ್ಯಕತೆ ಇತ್ತೆ. ಯಾಕೆ ಕೊಟ್ಟಿರಿ ಎಂದು ಪ್ರಶ್ನೆ ಮಾಡುತ್ತಾರೆ. ಈ ಯೋಜನೆಗಳನ್ನು ನಾವು ಕೊಡದಿದ್ದರೆ ರಾಜ್ಯದ ಜನರ ಪರಿಸ್ಥಿತಿ ಏನೆಂಬುದನ್ನು ಯೋಚಿಸಬೇಕಲ್ಲವೇ ಎಂದರು.

ಕಳೆದ 2006ರಲ್ಲಿ ಎಂಡಿಸಿಸಿ ಬ್ಯಾಂಕ್ ವತಿಯಿಂದ ತಾಲೂಕಿಗೆ 2 ಕೋಟಿ ಸಾಲ ನೀಡಲಾಗಿತ್ತು. ಆದರೆ, ಈಗ ಬಿಂಡಿಗನವಿಲೆ ಸಹಕಾರ ಸಂಘವೊಂದಕ್ಕೆ ಬಡ್ಡಿ ರಹಿತವಾಗಿ 14 ಕೋಟಿ ಸಾಲ ನೀಡಲಾಗಿದೆ. ರೈತರಿಗೆ ನೀಡಿರುವ ಈ ಸಾಲದ ಬಡ್ಡಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಾವತಿಸುತ್ತಿದೆ ಎಂದರು.ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿಗೌಡ, ಬಿಂಡಿಗನವಿಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿಕ್ಕೋನಹಳ್ಳಿ ಮಂಜೇಗೌಡ, ಮುಖ್ಯಕಾರ್ಯನಿರ್ವಹಣಾಧಿಕಾರಿ ಮೋಹನ್‌ಕುಮಾರ್ ಮಾತನಾಡಿದರು.

ದೊಡ್ಡಾಬಾಲ ಗ್ರಾಪಂ ಅಧ್ಯಕ್ಷೆ ಸಿ.ಲತಾ, ಜಿಪಂ ಮಾಜಿ ಸದಸ್ಯ ಎಂ.ಪ್ರಸನ್ನ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಚ್.ಆರ್.ನಾಗಭೂಷಣ್, ಸಂಘದ ಮಾಜಿ ಅಧ್ಯಕ್ಷ ಎಂ.ಬಿ.ತಿಮ್ಮೇಗೌಡ, ಉಪಾಧ್ಯಕ್ಷ ಪುಟ್ಟಸ್ವಾಮಿ, ನಿರ್ದೇಶಕ ಕೃಷ್ಣೇಗೌಡ, ನಂಜುಂಡೇಗೌಡ, ಕಂಚಹಳ್ಳಿ ಜಯರಾಮೇಗೌಡ, ಕುಮಾರ್ ಇದ್ದರು. 10ಕೆಎಂಎನ್ ಡಿ24ನಾಗಮಂಗಲ ತಾಲೂಕಿನ ಬಿಂಡಿಗನವಿಲೆಯಲ್ಲಿ ನೂತನ ವಾಣಿಜ್ಯ ಮಳಿಗೆ ಕಟ್ಟಡವನ್ನು ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದರು.