ಸಾರಾಂಶ
ಗ್ರಾಮಾಡಳಿತ ಅಧಿಕಾರಿಗಳ ಅನಿರ್ದಿಷ್ಠಾವಧಿ ಮುಷ್ಕರದಿಂದ ವಿದ್ಯಾರ್ಥಿ ವೇತನ ಸೇರಿದಂತೆ ಸರ್ಕಾರದ ಸೌಲಭ್ಯಕ್ಕೆ ಜಾತಿ ಪ್ರಮಾಣ ಪತ್ರ ಪಡೆಯಲು ಶಾಲಾ-ಕಾಲೇಜು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಸಕಾಲದಲ್ಲಿ ಜಾತಿ ಪ್ರಮಾಣ ಪತ್ರ ನೀಡಿ, ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಶಾಸಕ ಕೆ.ಎಸ್.ಬಸವಂತಪ್ಪ ಮನವಿ ಮಾಡಿದ್ದಾರೆ.
ದಾವಣಗೆರೆ: ಗ್ರಾಮಾಡಳಿತ ಅಧಿಕಾರಿಗಳ ಅನಿರ್ದಿಷ್ಠಾವಧಿ ಮುಷ್ಕರದಿಂದ ವಿದ್ಯಾರ್ಥಿ ವೇತನ ಸೇರಿದಂತೆ ಸರ್ಕಾರದ ಸೌಲಭ್ಯಕ್ಕೆ ಜಾತಿ ಪ್ರಮಾಣ ಪತ್ರ ಪಡೆಯಲು ಶಾಲಾ-ಕಾಲೇಜು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಸಕಾಲದಲ್ಲಿ ಜಾತಿ ಪ್ರಮಾಣ ಪತ್ರ ನೀಡಿ, ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಶಾಸಕ ಕೆ.ಎಸ್.ಬಸವಂತಪ್ಪ ಮನವಿ ಮಾಡಿದ್ದಾರೆ.
ಗ್ರಾಮಾಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ, ಗುಣಮಟ್ಟದ ಟೇಬಲ್, ಖುರ್ಚಿ, ಅಲ್ಮೇರಾ, ಮೊಬೈಲ್, ಪ್ರಿಂಟರ್, ಸ್ಕ್ಯಾನರ್ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಕಳೆದ ಐದಾರು ದಿನಗಳಿಂದ ಅನಿರ್ದಿಷ್ಠಾವಧಿ ಮುಷ್ಕರ ನಡೆಸುತ್ತಿದ್ದಾರೆ. ಮುಷ್ಕರ ಪರಿಣಾಮ ಜಿಲ್ಲೆಯಲ್ಲಿ ಸರ್ಕಾರಿ ಸೌಲಭ್ಯ ಪಡೆಯಲು ಜಾತಿ ಪ್ರಮಾಣ ಪತ್ರ ಪಡೆಯಲು ಸಮಸ್ಯೆಯಾಗುತ್ತಿದೆ. ಸೌಲಭ್ಯಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜಾತಿ ಪ್ರಮಾಣ ಪತ್ರ ಸಕಾಲದಲ್ಲಿ ಸಿಗದೇ ಜನರು ಪರಿತಪಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಗ್ರಾಮಾಡಳಿತ ಅಧಿಕಾರಿಗಳು ಜಾತಿ ಪ್ರಮಾಣ ಪತ್ರದ ಅರ್ಜಿಗಳನ್ನು ಸಕಾಲದಲ್ಲಿ ವಿಲೇ ಮಾಡಬೇಕೆಂದು ಕೋರಿದ್ದಾರೆ.ಜಿಲ್ಲಾಧಿಕಾರಿ ಮಧ್ಯೆ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಗೆ ಸ್ಪಂದಿಸಿ, ಸಕಾಲದಲ್ಲಿ ಜಾತಿ ಪ್ರಮಾಣ ಪತ್ರಗಳು ಲಭ್ಯವಾಗುವಂತೆ ಕ್ರಮ ತೆಗೆದುಕೊಳ್ಳಬೇಕು. ಗ್ರಾಮಾಡಳಿತ ಅಧಿಕಾರಿಗಳು ಸ್ಪಂದಿಸದಿದ್ದರೆ ತಹಸೀಲ್ದಾರ್ ಮೂಲಕ ಜಾತಿ ಪ್ರಮಾಣ ಪತ್ರ ತ್ವರಿತ ವಿತರಣೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.- - - -14ಕೆಡಿವಿಜಿ32: ಕೆ.ಎಸ್.ಬಸವಂತಪ್ಪ