ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಆಲಮಟ್ಟಿ ಜಲಾಶಯದಿಂದ ಮುಳುಗಡೆ ಸಂತ್ರಸ್ತರಿಗೆ ಯುನಿಟ್-1 ಮತ್ತು 2ರಲ್ಲಿ 163 ಇ-ಖಾತಾ ಹಾಗೂ ಹಕ್ಕುಪತ್ರ ಉತಾರಗಳನ್ನು ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ವಿತರಿಸಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಆಲಮಟ್ಟಿ ಜಲಾಶಯದಿಂದ ಮುಳುಗಡೆ ಸಂತ್ರಸ್ತರಿಗೆ ಯುನಿಟ್-1 ಮತ್ತು 2ರಲ್ಲಿ 163 ಇ-ಖಾತಾ ಹಾಗೂ ಹಕ್ಕುಪತ್ರ ಉತಾರಗಳನ್ನು ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ವಿತರಿಸಿದರು.ಈ ವೇಳೆ ಮಾತನಾಡಿದ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಅವರು, ಮುಳುಗಡೆ ಸಂತ್ರಸ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಇ-ಖಾತಾ ಉತಾರಗಳು ಹಾಗೂ ಹಕ್ಕುಪತ್ರಗಳನ್ನು ವಿತರಿಸಲು ಪ್ರಾಧಿಕಾರ ಕ್ರಮ ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಇದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಇ-ಖಾತಾ ಉತಾರ ಹಾಗೂ ಹಕ್ಕುಪತ್ರ ವಿತರಿಸಲಾಗುವುದು ಎಂದು ತಿಳಿಸಿದರು. ದಾಖಲೆ ಪಡೆದ ಸಂತ್ರಸ್ತರು ಸಂತಸ ವ್ಯಕ್ತಪಡಿಸಿ, ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ದಾಖಲೆಗಳ ವಿತರಣೆಯಿಂದ ಅನುಕೂಲವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಾಧಿಕಾರದ ಮುಖ್ಯ ಇಂಜಿನಿಯರ್ ಚಂದ್ರಹಾಸ ಬಂಡಿ, ಅಧೀಕ್ಷಕ ಅಭಿಯಂತರ ಎಸ್.ಎಸ್. ಕರಗಾರ, ಕಾರ್ಯನಿರ್ವಾಹಕ ಅಭಿಯಂತರರು, ವಿಭಾಗ-2ರ ಅಧಿಕಾರಿಗಳು ಹಾಗೂ ಸಿಬ್ಬಂದಿ, ಅಧ್ಯಕ್ಷರ ಆಪ್ತ ಸಹಾಯಕ ಎನ್.ಬಿ.ಅಕಂದ, ಪುಟ್ಟು ಕುಲಕರ್ಣಿ, ಶ್ರೀನಿವಾಸ ಬಳ್ಳಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.