ನಲ್ಲೂರಮ್ಮ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 2 ಲಕ್ಷ ರು. ಸಹಾಯ ಧನ ವಿತರಣೆ

| Published : May 07 2025, 12:47 AM IST

ನಲ್ಲೂರಮ್ಮ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 2 ಲಕ್ಷ ರು. ಸಹಾಯ ಧನ ವಿತರಣೆ
Share this Article
  • FB
  • TW
  • Linkdin
  • Email

ಸಾರಾಂಶ

ನಲ್ಲೂರಮ್ಮ ಮತ್ತು ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ವತಿಯಿಂದ ಮಂಜೂರಾದ 2 ಲಕ್ಷ ಡಿಡಿಯ ಮಂಜೂರಾತಿ ಪತ್ರವನ್ನು ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಗ್ರಾಮಸ್ಥರಿಗೆ ವಿತರಿಸಿದರು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ತಾಲೂಕಿನ ಶಿರಂಗಾಲ ವಿಭಾಗದ ನಲ್ಲೂರಮ್ಮ ಹಾಗೂ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ವತಿಯಿಂದ ಮಂಜೂರಾದ 2 ಲಕ್ಷ ಡಿ.ಡಿ.ಯ ಮಂಜೂರಾತಿ ಪತ್ರವನ್ನು ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಗ್ರಾಮಸ್ಥರಿಗೆ ವಿತರಿಸಿದರು.

ನಂತರ ಅವರು ಮಾತನಾಡಿ, ಶ್ರೀ ಕ್ಷೇತ್ರದಿಂದ ಸಮಾಜಮುಖಿಯಾಗಿ ಕೈಗೊಂಡ ಕಾರ್ಯಕ್ರಮಗಳಾದ ಶಿಕ್ಷಣ ಕ್ಷೇತ್ರದಲ್ಲಿ ಶಾಲೆಗಳಿಗೆ ಪೀಠೋಪಕರಣ, ಜ್ಞಾನದೀಪ ಶಿಕ್ಷಕರ ನೇಮಕ ಮಾಡುವುದು, ಉನ್ನತ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ನೀಡುವುದರ ಮೂಲಕ ಬಡ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ನೆರವಾಗುತ್ತಿದ್ದಾರೆ ಎಂದರು.

ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ದಿ, ಗ್ರಾಮೀಣ ರೈತರಿಗೆ ಅನುಕೂಲವಾಗುವಂತೆ ಹಾಲು ಉತ್ಪಾದಕರ ಸಂಘಗಳಿಗೆ ಅನುದಾನ, ನಿರ್ಗತಿಕರಿಗೆ ಮಾಶಾಸನ, ವಿಶೇಷಚೇತನರಿಗೆ ಪರಿಕರಗಳ ವಿತರಣೆ ಸೇರಿದಂತೆ ಶ್ರೀ ಕ್ಷೇತ್ರದ ಕಾರ್ಯಕ್ರಮಗಳ ಮಾಹಿತಿ ನೀಡಿದರು.

ಈ ಸಂದರ್ಭ ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಚೇತನ್, ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಇದ್ದರು.