ಸಾರಾಂಶ
ಸಿರವಾರ ತಾಲೂಕಿನ ಮಲ್ಲಟ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ ಹಿಂಗಾರು ಹಂಗಾಮಿನ ಬೆಳೆ ಬೆಳೆಯಲು ಕಡಲೆ ಮತ್ತು ಜೋಳದ ಬೀಜಗಳನ್ನು ವಿತರಿಸಲಾಯಿತು.
ಕನ್ನಡಪ್ರಭ ವಾರ್ತೆ ಸಿರವಾರ
ಹಿಂಗಾರು ಹಂಗಾಮಿನ ಬೆಳೆ ಬಿತ್ತನೆ ಮಾಡಲು ಕಡಲೆ ಮತ್ತು ಜೋಳದ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಿಸುತ್ತಿದ್ದು, ಅಗತ್ಯ ದಾಖಲೆಗಳನ್ನು ನೀಡಿ ಬೀಜಗಳನ್ನು ಪಡೆಯಿರಿ ಎಂದು ಕೃಷಿ ಅಧಿಕಾರಿ ಮಾರುತಿ ನಾಯಕ ರೈತರಿಗೆ ಸಲಹೆ ನೀಡಿದರು.ತಾಲೂಕಿನ ಮಲ್ಲಟ ರೈತ ಸಂಪರ್ಕ ಕೇಂದ್ರದಲ್ಲಿ ಹಿಂಗಾರು ಹಂಗಾಮಿನ ಬೆಳೆ ಬೆಳೆಯಲು ಕಡಲೆ ಮತ್ತು ಜೋಳದ ಬೀಜಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.ರಿಯಾಯತಿ ದರದಲ್ಲಿ ಕಡಲೆ ಮತ್ತು ಜೋಳದ ಬೀಜಗಳನ್ನು ವಿತರಣೆ ಮಾಡುತ್ತಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ 90% ರಿಯಾಯತಿ ಹಾಗೂ ಸಾಮಾನ್ಯ ರೈತರಿಗೆ 50% ರಿಯಾಯತಿಯಲ್ಲಿ ಲಭ್ಯವಿದೆ. ರೈತರು ಆಧಾರ್ ಕಾರ್ಡ್, ಪಹಣಿ, ಜಾತಿ ಪ್ರಮಾಣ ನೀಡಿ ಬೀಜಗಳನ್ನು ಪಡೆದುಕೊಳ್ಳಬೇಕು, ಮುಂಗಾರು ಹಂಗಾಮಿನಲ್ಲಿ ತೊಗರಿ ತೆಗೆದುಕೊಂಡ ರೈತರಿಗೆ ಕಡಲೆ ಮತ್ತು ಜೋಳದ ಬೀಜಗಳನ್ನು ನೀಡಲು ಬರುವುದಿಲ್ಲ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ತಾಪಂ ಮಾಜಿ ಸದಸ್ಯ ಮಲ್ಲಿಕಾರ್ಜುನ ವಾಲ್ಮೀಕಿ, ಸಹಾಯಕ ತಾಂತ್ರಿಕ ವ್ಯವಸ್ಥಾಪಕ ನಾಗರಾಜ ಕಂಬಾರ, ಲೆಕ್ಕ ಹಾಯಕ ಸುನೀಲ ಬಲ್ಲಟಗಿ, ರಾಜಾಭಕ್ಷ, ಬುಡ್ಡಪ್ಪ, ಹನುಮೇಶ ಸೇರಿ ಮಲ್ಲಟ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯ ರೈತರು ಭಾಗವಹಿಸಿದ್ದರು.