ಸಾರಾಂಶ
ಚಿಕ್ಕಮಗಳೂರು: ಕೇರಳದ ವಯನಾಡಿನಲ್ಲಿ ಪ್ರಕೃತಿ ವಿಕೋಪದಿಂದ ಕುಟುಂಬ ಕಳೆದುಕೊಂಡು, ಹಸಿವಿನಿಂದ ಬಳಲುತ್ತಿರುವವರಿಗೆ ಕಾಂಗ್ರೆಸ್ ಕಿಸಾನ್ ರಾಜ್ಯ ಸಂಚಾಲಕ ಸಿ.ಎನ್. ಅಕ್ಮಲ್ 70ಕ್ಕೂ ಹೆಚ್ಚು ಆಹಾರ ಕಿಟ್‌ಗಳನ್ನು ವಾಹನದಲ್ಲಿ ಕಳುಹಿಸಿಕೊಟ್ಟು ನೆರವಾಗಿದ್ದಾರೆ.ಬಳಿಕ ಮಾತನಾಡಿದ ಸಿ.ಎನ್.ಅಕ್ಮಲ್ ಪ್ರವಾಹ ಹಾಗೂ ಗುಡ್ಡ ಕುಸಿತದಿಂದ ಕೇರಳದ ವಯನಾಡು ಜನತೆ ಜೀವನ ಕಳೆದುಕೊಂಡು ದುಸ್ಥಿತಿಯಲ್ಲಿದ್ದಾರೆ. ಇವರಿಗೆ ದಿನನಿತ್ಯ ಊಟೋಪಚಾರಕ್ಕೆ ಬಹಳಷ್ಟು ಸಮಸ್ಯೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಕೈಲಾದ ಅಳಿಲು ಸೇವೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.ಆಹಾರ ಕಿಟ್‌ನಲ್ಲಿ ಅಕ್ಕಿ, ಬೇಳೆ, ಸಾಂಬಾರು ಎಣ್ಣೆ, ಮೈದಾಹಿಟ್ಟು, ಬಿಸ್ಕೆಟ್ ಸೇರಿದಂತೆ ದಿನಸಿ ಪದಾರ್ಥಗಳನ್ನು ವಾಹನದಲ್ಲಿ ಕೇರಳದ ಟ್ರಸ್ಟ್‌ಗೆ ಕಳುಹಿಸಲಾಗಿದೆ. ಹೀಗಾಗಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಮಾನವೀಯತೆ ದೃಷ್ಟಿಯಿಂದ ಸಹಾಯಹಸ್ತ ಚಾಚಬೇಕು ಎಂದರು.ಇತ್ತೀಚಿನ ಸ್ವಾರ್ಥ ಪ್ರಪಂಚದಲ್ಲಿ ಅವರ ವೈಯಕ್ತಿಕ ಜೀವನಕ್ಕೆ ಜನ ಸೀಮಿತವಾಗಿದ್ದಾರೆ. ಹಾಗಾಗಿ ಇಂಥ ಸಂದರ್ಭದಲ್ಲಿ ನೆರೆ ಸಂತ್ರಸ್ಥರ ಸ್ಥಳಕ್ಕೆ ತೆರಳಲು ಆಗದಿದ್ದರೂ ಕನಿಷ್ಠ ಆಹಾರ ಪೂರೈಸುವ ಕಾರ್ಯದಲ್ಲಿ ಸ್ವಯಂಪ್ರೇರಿತವಾಗಿ ನಿರತರಾದರೆ ಮನುಷ್ಯನಾಗಿ ಹುಟ್ಟಿದಕ್ಕೂ ಸಾರ್ಥಕ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಫೈರೋಜ್, ರಿಜ್ವಾನ್ ಹಾಜರಿದ್ದರು.ಪೋಟೋ ಫೈಲ್ ನೇಮ್ 9 ಕೆಸಿಕೆಎಂ 1ಕೇರಳದ ವಯನಾಡಿನಲ್ಲಿ ಪ್ರಕೃತಿ ವಿಕೋಪದಿಂದ ಕುಟುಂಬ ಕಳೆದುಕೊಂಡು ಹಸಿವಿನಿಂದ ಬಳಲುತ್ತಿರುವವರಿಗೆ ಕಾಂಗ್ರೆಸ್ ಕಿಸಾನ್ ರಾಜ್ಯ ಸಂಚಾಲಕ ಸಿ.ಎನ್. ಅಕ್ಮಲ್ 70ಕ್ಕೂ ಹೆಚ್ಚು ಆಹಾರ ಕಿಟ್‌ಗಳನ್ನು ವಾಹನದಲ್ಲಿ ಕಳುಹಿಸಿಕೊಟ್ಟರು.