ಫಲಾನುಭವಿಗಳಿಗೆ ವಸತಿ ನಿರ್ಮಾಣ ಕಾರ್ಯಾದೇಶ ಪತ್ರ ವಿತರಣೆ

| Published : Jul 10 2025, 12:49 AM IST

ಫಲಾನುಭವಿಗಳಿಗೆ ವಸತಿ ನಿರ್ಮಾಣ ಕಾರ್ಯಾದೇಶ ಪತ್ರ ವಿತರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಸಾರ್ವಜನಿಕರು ಮನೆ ನಿರ್ಮಾಣ ಮಾಡಿ ಸರ್ಕಾರದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಸಾರ್ವಜನಿಕರು ಮನೆ ನಿರ್ಮಾಣ ಮಾಡಿ ಸರ್ಕಾರದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಡಿಕೇರಿ ತಾಲೂಕು ಶಾಸಕ ಡಾ.ಮಂತರ್ ಗೌಡ ಹೇಳಿದರು.

ಸಮೀಪದ ಹೊದ್ದೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯ್ಕೆಯಾದ ಬಸವ ವಸತಿ ಯೋಜನೆ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿ 26 ಫಲಾನುಭವಿಗಳಿಗೆ ವಸತಿ ನಿರ್ಮಾಣ ಕಾರ್ಯಾದೇಶ ಪತ್ರವನ್ನು ವಿತರಿಸಿ ಮಾತನಾಡಿದರು.

ಹೆಚ್ಚುವರಿ ಮನೆ ಮಂಜೂರು ಮಾಡಲು ಸಹಕರಿಸಿದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ರನ್ನು ಸ್ಮರಿಸಿಕೊಂಡ ಶಾಸಕರು ಪಾರದರ್ಶಕವಾಗಿ ಮನೆ ನೀಡಲಾಗಿದೆ. ಸರಕಾರದ ಉಚಿತ ವಸತಿ ಯೋಜನೆಗೆ ಯಾವುದೇ ಹಣ ಯಾರಿಗೂ ಫಲಾನುಭವಿಗಳು ನೀಡುವ ಅಗತ್ಯವಿಲ್ಲ ಎಂದರು.

ಗ್ರಾಮ ಪಂಚಾಯಿತಿ ಅನುದಾನದಲ್ಲಿ 5 ಅಂಗನವಾಡಿ ಕೇಂದ್ರಗಳಿಗೆ ಸ್ಮಾರ್ಟ್ ಟಿವಿ ವಿತರಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಚ್ಎ ಹಂಸ, ಸದಸ್ಯರಾದ ಮೊಣ್ಣಪ್ಪ, ಕುಸುಮಾವತಿ, ಚೌರಿರ ಅನಿತಾ, ಮೈದು ಕೊಟ್ಟಮುಡಿ, ಎಂ ಬಿ ಹಮೀದ್ ಕಬಡಕೇರಿ, ತಾಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಕೋಚನ ಹರಿಪ್ರಸಾದ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಶೇಖರ್ , ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾ ಲಕ್ಷ್ಮೀ, ಸಹಾಯಕ ಕಾರ್ಯ ಪಾಲಕ ಅಭಿಯಂತರರು ಲೋಕೋಪಯೋಗಿ ಪಂಚಾಯತಿ ರಾಜ್ ಇಲಾಖೆ, ಪಿಡಿಒ ಅಬ್ದುಲ್ಲಾ, ಕಂದಾಯ ನಿರೀಕ್ಷಕರು ಚಂದ್ರ ಪ್ರಸಾದ್, ಗ್ರಾಮ ಆಡಳಿತ ಅಧಿಕಾರಿ ಸಂತೋಷ್ ಪಾಟೀಲ್ ವಿವಿಧ ಇಲಾಖೆಯ ಅಧಿಕಾರಿಗಳು ಪಂಚಾಯಿತಿ ಸಿಬ್ಬಂದಿ ಗ್ರಾಮಸ್ಥರು ಹಾಜರಿದ್ದರು.