ಸಾರಾಂಶ
ಹಾವೇರಿ: ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಬಡವರು, ಹಿಂದುಳಿದವರು, ಕಾರ್ಮಿಕರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ. ಕಟ್ಟಡ ಕಾರ್ಮಿಕರ ಕೆಲಸಕ್ಕೆ ಅನುಕೂಲಕ್ಕಾಗಿ ಸರ್ಕಾರದ ವತಿಯಿಂದ ಕಿಟ್ ವಿತರಿಸಲಾಗುತ್ತಿದ್ದು, ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಕಾರ್ಮಿಕ ಇಲಾಖೆಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಿಸಿ ಅವರು ಮಾತನಾಡಿದರು. ಕಾರ್ಮಿಕ ಇಲಾಖೆಯಿಂದ ವಿತರಿಸುತ್ತಿರುವ ಕಟ್ಟಡ ನಿರ್ಮಾಣದ ಕಾಮಗಾರಿಗೆ ಸಹಾಯಕವಾಗುವ ಕಿಟ್‌ಗಳ ಸದುಪಯೋಗ ಪಡೆಸಿಕೊಂಡು ಉತ್ತಮ ವಾಗಿ ಕೆಲಸ ನಿರ್ವಹಿಸಬೇಕು. ಜೊತೆಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಕಿಟ್ ವಿತರಿಸಬೇಕು ಎಂದು ಸಲಹೆ ನೀಡಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ ಮಾತನಾಡಿ, ಸರ್ಕಾರದಿಂದ ವಿತರಿಸುತ್ತಿರುವ ಕಿಟ್‌ಗಳು ನಿಜವಾದ ಫಲಾನುಭವಿಗೆ ತಲುಪಿದಾಗ ಈ ಯೋಜನೆ ಸಾರ್ಥಕವಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ ನಿಜವಾದ ಕಾರ್ಮಿಕರನ್ನು ಗುರುತಿಸಿ ಅವರಿಗೆ ಕಿಟ್ ವಿತರಿಸಬೇಕು. ಕಾರ್ಮಿಕರಿಗೆ ಸರ್ಕಾರದಿಂದ ದೊರಕಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದರು.ಸರ್ಕಾರ ಕಾರ್ಮಿಕರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಇದರಲ್ಲಿ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಸಹ ಮಾಡಲಾಗುತ್ತಿದ್ದು, ಶೀಘ್ರದಲ್ಲಿ ಲ್ಯಾಪ್‌ಟಾಪ್‌ಗಳನ್ನು ಸಹ ವಿತರಿಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಎಂ.ಎಂ.ಮೈದೂರ, ಪ್ರಭು ಬಿಷ್ಟನಗೌಡ್ರ, ಎಂ.ಎ.ಗಾಜೀಗೌಡ್ರ, ಕಾರ್ಮಿಕ ಇಲಾಖೆ ಅಧಿಕಾರಿಗಳು ಇದ್ದರು.