ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ

| Published : Jul 14 2024, 01:36 AM IST

ಸಾರಾಂಶ

ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ೨೦೨೩ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲಾಯಿತು.

ಕೊರಟಗೆರೆ: ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ೨೦೨೩ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲಾಯಿತು. ಸರ್ಕಾರಿ ಪ್ರೌಢಶಾಲೆಯಲ್ಲಿ ಅಭ್ಯಾಸ ಮಾಡಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಕೊರಟಗೆರೆ ಸರ್ಕಾರಿ ಜೂನಿಯರ್ ಕಾಲೇಜಿನ ಹರ್ಷವರ್ಧನ್ (೬೦೪), ಬಾಲಕಿಯರ ಸರ್ಕಾರಿ ಪೌಢಶಾಲೆಯ ಬಾನು.ಜಿ.ಎನ್ (೬೦೧), ವಂದನ.ಕೆ.ಎರ್ (೫೯೭), ಜೂನಿಯರ್ ಕಾಲೇಜಿನ ಚರಣ್.ಕೆ.ಆರ್ (೫೯೭) ವಿದ್ಯಾರ್ಥಿಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯವರು ಪ್ರೋತ್ಸಾಹಕವಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ವಿ.ನಟರಾಜು ಲ್ಯಾಪ್ ಟಾಪ್‌ ನೀಡಿದರು. ಅನುಷ್ಠಾನಾಧಿಕಾರಿ, ಪೋಷಕರು, ಶಿಕ್ಷಕರು ಹಾಜರಿದ್ದರು.