ಸಾರಾಂಶ
ಭಾರತೀನಗರ: ಕಪರೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬೀಟ್ ಪೊಲೀಸರಿಂದ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.ಬೀಟ್ ಪೊಲೀಸ್ ಸಿಬ್ಬಂದಿ ಪ್ರಭುಸ್ವಾಮಿ ಮಾತನಾಡಿ, ಪೊಲೀಸರು ಎಂದರೆ ಭಯ ಪಡುತ್ತಾರೆ. ನಾವು ಜನಸ್ನೇಹಿ ಪೊಲೀಸರಾಗಿ ಕೆಲಸ ನಿರ್ವಹಿಸುತ್ತಿದ್ದೇವೆ. ಕಾನೂನು ಬಾಹಿರ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರೆ ಅಂತಹವರ ಹೆಸರನ್ನು ಗೌಪ್ಯವಾಗಿ ಇಡುತ್ತೇವೆ ಎಂದರು. ಬೀಟ್ ಗ್ರಾಮಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಬಡ ಮಕ್ಕಳ ಶಿಕ್ಷಣಕ್ಕೆ ಒತ್ತುನೀಡಿ ಅವರನ್ನು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಸರ್ಕಾರಿ ಶಾಲಾ ಮಕ್ಕಳನ್ನು ಕಲಿಕೆಗೆ ಉತ್ತೇಜಿಸಲು ಅಳಿಲು ಸೇವೆಯನ್ನು ಮಾಡಿದ್ದೇವೆ ಎಂದು ತಿಳಿಸಿದರು. ಬೀಟ್ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಕಾಡುಕೊತ್ತನಹಳ್ಳಿ, ಭುಜುವಳ್ಳಿ, ಕಪರೆಕೊಪ್ಪಲು ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದರು. ಬಿಟ್ ಪೊಲೀಸ್ ಸಿಬ್ಬಂದಿ ಸುಬ್ರಮಣಿ, ಮುಖ್ಯಶಾಲಾ ಶಿಕ್ಷಕ ಗುರುಲಿಂಗಯ್ಯ ಸೇರಿ ಹಲವರು ಉಪಸ್ಥಿತರಿದ್ದರು.