ಪಾಂಡವಪುರದಲ್ಲಿ ವಿಶ್ವ ಹಾಲು ದಿನಾಚರಣೆ
ಕನ್ನಡಪ್ರಭ ವಾರ್ತೆ ಪಾಂಡವಪುರ ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ಪಟ್ಟಣದಲ್ಲಿ ಮನ್‌ಮುಲ್ ನಿರ್ದೇಶಕ ಸಿ.ಶಿವಕುಮಾರ್ ಅವರು ಪುರಸಭೆಯ ಪೌರಕಾರ್ಮಿಕರು, ಆಸ್ಪತ್ರೆಯ ರೋಗಿಗಳು, ವೈದ್ಯರು, ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಪಶು ಆಸ್ಪತ್ರೆ ವೈದ್ಯರು, ಸಿಬ್ಬಂದಿ ಹಾಗೂ ಪತ್ರಕರ್ತರಿಗೆ ಹಾಲು ಮತ್ತು ಹಾಲಿನ ಉತ್ಪನ್ನಗಳ ಕಿಟ್‌ಗಳನ್ನು ವಿತರಣೆ ಮಾಡಿದರು.ಪುರಸಭೆಯ ಆವರಣದಲ್ಲಿ ಪುರಸಭೆಯ ಪೌರಕಾರ್ಮಿಕರು, ಸಿಬ್ಬಂದಿಗೆ ಕಿಟ್ ವಿತರಿಸಿ, ಸಾರ್ವಜನಿಕ ಆಸ್ಪತ್ರೆ ಒಳ ಹಾಗೂ ಹೊರರೋಗಿಗಳಿಗೆ, ವೈದ್ಯರು, ಸಿಬ್ಬಂದಿಗೆ ವಿತರಣೆ ಮಾಡಿ ಬಳಿಕ ಪಟ್ಟಣದ ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವಿತರಣೆ ಮಾಡಿದರು. ನಂತರ ಪಶು ವೈದ್ಯಕೀಯ ಆಸ್ಪತ್ರೆ ಸಿಬ್ಬಂದಿಗೆ ಹಾಗೂ ಪತ್ರಕರ್ತರಿಗೆ ಕಿಟ್ ವಿತರಣೆ ಮಾಡಿದರು.
ಬಳಿಕ ಮಾತನಾಡಿದ ಮನ್‌ಮುಲ್ ನಿರ್ದೇಶಕ ಸಿ.ಶಿವಕುಮಾರ್, ವಿಶ್ವಹಾಲು ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಪುರಸಭೆಯ ಪೌರಕಾರ್ಮಿಕರು, ಆಸ್ಪತ್ರೆಯ ರೋಗಿಗಳಿಗೆ ಹಾಗೂ ಪಶು ವೈದ್ಯಕೀಯ ಆಸ್ಪತ್ರೆಯ ಸಿಬ್ಬಂದಿಗೆ ಹಾಲು ಮತ್ತು ಹಾಲಿನ ಉತ್ಪನ್ನಗಳ ಕಿಟ್‌ನ್ನು ವಿತರಣೆ ಮಾಡಿದ್ದೇವೆ. ಸಾರ್ವಜನಿಕರು, ರೈತರು ನಮ್ಮ ಕೆಎಂಎಫ್ ಒಕ್ಕೂಟದ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.ರಾಜ್ಯದಲ್ಲಿ ಲಕ್ಷಾಂತರ ರೈತರು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಎಂಎಫ್‌ನ ನಂದಿನ ಬ್ರ್ಯಾಂಡ್ ನ ಮೂಲಕ ವಿವಿಧ ರಾಜ್ಯಗಳಿಗೆ ಹಾಲು ಪೂರೈಕೆ ಮಾಡಲಾಗುತ್ತಿದೆ. ಹೆಚ್ಚು ಮಂದಿ ರೈತರು, ಸಾರ್ವಜನಿಕರು ನಂದಿನಿ ಹಾಲನ್ನು ಹೆಚ್ಚು ಖರೀದಿಸಿ ಬಳಕೆ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಸಂದರ್ಭದಲ್ಲಿ ಮನ್‌ಮುಲ್ ಉಪವ್ಯವಸ್ಥಾಪಕ ಆರ್.ಪ್ರಸಾದ್, ಹಾಲು ಮಾರಾಟ ವ್ಯವಸ್ಥಾಪಕಿ ಶಶಿಕಲಾ, ಡಾ.ಸಂತೋಷ್, ಮಾರ್ಗ ವಿಸ್ತರ್ಣಾಧಿಕಾರಿ ಉಷಾ, ಮಧುಶಂಕರ್, ನಾಗೇಂದ್ರ, ಪ್ರಜ್ವಲ್, ಟೆಕ್ನಿಷಿಯನ್ ಆನಂದ್, ಪುರಸಭೆಯ ಮಾಜಿ ಸದಸ್ಯರಾದ ಆರ್.ಸೋಮಶೇಖರ್, ಗಿರೀಶ್, ಬಿ.ಎಸ್.ಜಯರಾಮು, ಜ್ಯೋತಿಲಕ್ಷ್ಮೀ, ಶಿವಣ್ಣ, ಆರುಮುಗಂ, ಚಂದ್ರು, ಜಯರಾಮು, ಹಾರೋಹಳ್ಳಿ ಉಮೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಚಿಕ್ಕಾಡೆಗಿರೀಶ್, ನಿರ್ದೇಶಕ ಪಿ.ಎಲ್.ಆದರ್ಶ, ಬಿಜೆಪಿ ಮುಖಂಡ ಮಂಜುನಾಥ್, ಗುರು ಸೇರಿ ಹಾಲು ಮಾರಾಟಗಾರರು, ಹಲವು ಮುಖಂಡರು ಹಾಜರಿದ್ದರು.