ವಿಶ್ವ ಪರಿಸರ ದಿನಾಚರಣೆ: ಬಂಟ್ವಾಳ ಕಂದಾಯ ಇಲಾಖಾ ಸಿಬ್ಬಂದಿಗೆ ಸಸಿ ವಿತರಣೆ

| Published : Jun 06 2024, 12:30 AM IST

ವಿಶ್ವ ಪರಿಸರ ದಿನಾಚರಣೆ: ಬಂಟ್ವಾಳ ಕಂದಾಯ ಇಲಾಖಾ ಸಿಬ್ಬಂದಿಗೆ ಸಸಿ ವಿತರಣೆ
Share this Article
  • FB
  • TW
  • Linkdin
  • Email

ಸಾರಾಂಶ

ತಹಸೀಲ್ದಾರ್ ಡಿ. ಅರ್ಚನಾ ಭಟ್ ಸಸಿ ನೆಟ್ಟು ಪರಿಸರ ದಿನಾಚರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಜನಸಂಖ್ಯೆ ಹೆಚ್ಚಾದಂತೆಲ್ಲಾ ನೈಸರ್ಗಿಕ ಸಂಪನ್ಮೂಲಗಳ ಬಳಕೆ ಹೆಚ್ಚಾಗುತ್ತದೆ. ಅದರ ಮೇಲೆ ಒತ್ತಡ ಹೆಚ್ಚಾದಾಗ ಸಹಜವಾಗಿಯೇ ಪರಿಸರ ಮಲಿನವಾಗುತ್ತದೆ. ಸಸ್ಯಗಳು ಮತ್ತು ಪ್ರಾಣಿಗಳ ಸಂತತಿ ಅಳಿಯುತ್ತದೆ. ಈ ನಿಟ್ಟಿನಲ್ಲಿ ಪರಿಸರದ ಬಗ್ಗೆ ಕಾಳಜಿ ವಹಿಸಬೇಕು. ಪರಿಸರ ಸಂರಕ್ಷಣೆ ಮಾಡಬೇಕು ಎಂದು ಬಂಟ್ವಾಳ ತಹಸೀಲ್ದಾರ್ ಡಿ. ಅರ್ಚನಾ ಭಟ್‌ ಹೇಳಿದರು.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬುಧವಾರ ಬಂಟ್ವಾಳ ತಾಲೂಕಾಡಳಿತ ಸೌಧದಲ್ಲಿ ಕಂದಾಯ ಇಲಾಖಾ ಸಿಬ್ಬಂದಿಗೆ ಸಸಿಗಳನ್ನು ವಿತರಿಸಿ ಅವರು ಮಾತನಾಡಿದರು.

ಕಂದಾಯ ಇಲಾಖಾ ಸಿಬ್ಬಂದಿ ಪರಿಸರ ದಿನಾಚರಣೆಯ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವಗ್ಗ ಎಂಬಲ್ಲಿ ಆಲಂಪುರಿ ಟೀಪಾರ್ಕ್ ಬಳಿ ವಲಯ ಅರಣ್ಯಾಧಿಕಾರಿ ಪ್ರಫುಲ್ ರೈ ಮತ್ತು ಉಪವಲಯ ಅರಣ್ಯಾಧಿಕಾರಿ ಅನಿಲ್ ಮತ್ತು ಅರಣ್ಯ ಇಲಾಖಾ ಸಿಬ್ಬಂದಿ ಉಪಸ್ಥಿತಿಯಲ್ಲಿ ತಹಸೀಲ್ದಾರ್ ಡಿ. ಅರ್ಚನಾ ಭಟ್ ಸಸಿ ನೆಟ್ಟು ಪರಿಸರ ದಿನಾಚರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.