ಸಾರಾಂಶ
ನನ್ನ ಹುಟ್ಟುಹಬ್ಬದ ಪ್ರಯುಕ್ತ ಒಂಟಗೋಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಿಸಿದ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಹಾಲಿಂಗಪ್ಪ ತಟ್ಟಿಮನಿ ಅವರ ಕಾರ್ಯ ಶ್ಲಾಘನೀಯವಾದುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ
ನನ್ನ ಹುಟ್ಟುಹಬ್ಬದ ಪ್ರಯುಕ್ತ ಒಂಟಗೋಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಿಸಿದ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಹಾಲಿಂಗಪ್ಪ ತಟ್ಟಿಮನಿ ಅವರ ಕಾರ್ಯ ಶ್ಲಾಘನೀಯವಾದುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.ಆರ್.ಬಿ. ತಿಮ್ಮಾಪುರ ಅವರ ಜನ್ಮದಿನ ಪ್ರಯುಕ್ತ ತಾಪಂ ಮಾಜಿ ಅಧ್ಯಕ್ಷ ಮಹಾಲಿಂಗಪ್ಪ ತಟ್ಟಿಮನಿ ಹಮ್ಮಿಕೊಂಡಿದ್ದ ಒಂಟಗೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಾಳ, ಒಂಟಗೋಡಿ, ಮಿರ್ಜಿ, ಮಲ್ಲಾಪುರ ಪಿಜೆ ಗ್ರಾಮಗಳ ಸರ್ಕಾರಿ ಪ್ರೌಢ ಶಾಲೆ ಮತ್ತು ಪ್ರಾಥಮಿಕ ಶಾಲೆಗಳ ೯೦೦ಕ್ಕೂ ಅಧಿಕ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಬಡ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡುವ ಮಹಾಲಿಂಗಪ್ಪ ತಟ್ಟಿಮನಿಯವರ ಗುಣ ಮಾದರಿ ಮತ್ತು ಅನುಕರಣನೀಯ. ಇಡೀ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಶಾಲೆಯ ಮಕ್ಕಳ ಮುಖದಲ್ಲಿ ಮಂದಹಾಸ ಕಂಡು ನನ್ನ ಜನ್ಮ ಸಾರ್ಥಕವಾಯಿತು ಎನಿಸುತ್ತದೆ. ಖಾಸಗಿ ಶಾಲೆಗಳ ಹಾವಳಿ ಮಧ್ಯೆಯೂ ಇಂಥ ಕಾರ್ಯ ನಡೆದಿರುವುದು ಉತ್ತಮ ಬೆಳವಣಿಗೆ. ಇಂತಹ ಶ್ರೇಷ್ಠ ಕಾರ್ಯಗಳನ್ನು ಮಾಡಿ ದಿನಾಚರಣೆಗಳನ್ನು ಸ್ಮರಣೀಯ ಮತ್ತು ಸಾರ್ಥಕವಾಗಿಸಬಹುದು ಎಂದರು. ಬಿಇಒ ಎಸ್.ಎಂ.ಮುಲ್ಲಾ, ಮುಖಂಡರು, ಪಾಲಕರು, ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
;Resize=(128,128))
;Resize=(128,128))