ಸಾರಾಂಶ
ಕಂಬಿಬಾಣೆ ಅತ್ತೂರು ನಲ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸರ್ಕಾರದ ವತಿಯಿಂದ ನೀಡಲಾಗುವ ಶೂ ಮತ್ತು ಸಾಕ್ಸ್‌ಳನ್ನು ವಿತರಿಸಲಾಯಿತು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಕಂಬಿಬಾಣೆ ಅತ್ತೂರು ನಲ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸರ್ಕಾರದ ವತಿಯಿಂದ ನೀಡಲಾಗುವ ಶೂ ಮತ್ತು ಸಾಕ್ಸ್‌ಳನ್ನು ವಿತರಿಸಲಾಯಿತು.ಕಂಬಿಬಾಣೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾದ ಆರ್.ಆರ್. ಮೋಹನ್ ಅವರು ಅತ್ತೂರು ನಲ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 66 ಮಕ್ಕಳಿಗೆ ಶೂ, ಸಾಕ್ಸ್ ಅನ್ನು ವಿತರಿಸಿ ಮಾತನಾಡಿ, ಸರ್ಕಾರವು ಪ್ರತಿಯೊಬ್ಬ ಮಕ್ಕಳು ಶಿಕ್ಷಣವನ್ನು ಪಡೆಯಲೇಬೇಕೆಂಬ ಮುಖ್ಯಉದ್ದೇಶವನ್ನು ಇರಿಸಿಕೊಂಡು ಮಕ್ಕಳ ಶಿಕ್ಷಣಕ್ಕಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅದನ್ನು ಪಡೆದುಕೊಂಡು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುವ ಮೂಲಕ ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭ ಶಾಲಾ ಮುಖ್ಯೋಪಾದ್ಯಾಯಿನಿ ನಯನಾ ಹಾಗೂ ಸಹಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.