ರೈತರಿಗೆ ಬಿತ್ತನೆ ರಾಗಿ ವಿತರಣೆ, ರೈತರ ರತ್ನ ಪ್ರಶಸ್ತಿ ಪ್ರದಾನ

| Published : Aug 03 2024, 12:41 AM IST

ರೈತರಿಗೆ ಬಿತ್ತನೆ ರಾಗಿ ವಿತರಣೆ, ರೈತರ ರತ್ನ ಪ್ರಶಸ್ತಿ ಪ್ರದಾನ
Share this Article
  • FB
  • TW
  • Linkdin
  • Email

ಸಾರಾಂಶ

ವೇದಿಕೆಯಲ್ಲಿ ಅರ್ಹ ರೈತ ಫಲಾನುಭವಿಗಳಿಗೆ ಉಚಿತವಾಗಿ ಬಿತ್ತನೆ ರಾಗಿ ವಿತರಿಸಲಾಯಿತು. ತಾಲೂಕಿನ ಹುರಳಿಗಂಗನಹಳ್ಳಿ ರಮೇಶ್ ಮತ್ತು ಎ.ನಾಗತಿಹಳ್ಳಿ ರಾಧಾಮಣಿ ಅವರಿಗೆ ರೈತ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ನಂತರ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ ತಾಲೂಕಿನ ಸುಖಧರೆ ಗ್ರಾಮದ ರೈತ ರಾಮೇಗೌಡರ ಪತ್ನಿ ರಾಧ ಅವರಿಗೆ ಸರ್ಕಾರದ ವತಿಯಂದ 5 ಲಕ್ಷ ರು. ಪರಿಹಾರ ಮಂಜೂರಾತಿ ಪತ್ರ ನೀಡಲಾಯಿತು.

ಕನ್ನಡಪ್ರಭ ವಾರ್ತೆ ನಾಗಮಂಗಲ

ಪ್ರಕೃತಿಯ ಮೇಲೆ ಮಾನವನ ದಾಳಿಯಿಂದ ಇಂತಹ ವೈಪರೀತ್ಯಗಳು ನಡೆಯುತ್ತಿವೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದರು.

ಪಟ್ಟಣದ ಎಪಿಎಂಸಿ ಆವರಣದಲ್ಲಿ ಜಿಎಸ್ ಎಫ್ ಫೌಂಡೇಷನ್, ಭೂ ಸಿರಿ ರೈತ ಉತ್ಪಾದಕರ ಕಂಪನಿ, ಕಂದಾಯ, ಕೃಷಿ, ಅರಣ್ಯ ಇಲಾಖೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಬಿತ್ತನೆ ರಾಗಿ ವಿತರಣೆ ಹಾಗೂ ರೈತರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಅನಾವೃಷ್ಟಿಗಿಂತ ಅತಿವೃಷ್ಟಿಯಾದಾಗಲೇ ಸಾರ್ವಜನಿಕರಿಗೆ ಹೆಚ್ಚು ತೊಂದರೆಗಳು ಆಗುತ್ತವೆ. ಆಸ್ತಿ- ಪಾಸ್ತಿಗಳು, ಸಾವು- ನೋವು ಘಟಿಸುತ್ತವೆ. ಪ್ರಕೃತಿಯನ್ನು ಬದಲಿಸಲು ನಮ್ಮಿಂದ ಸಾಧ್ಯವಿಲ್ಲ. ಪ್ರಕೃತಿಯೇ ನಮ್ಮ ಮೇಲೆ ಕೃಪೆ ತೋರಬೇಕು. ಸಮತೋಲನ ಪ್ರಕೃತಿಗಾಗಿ ಹಾಗೂ ಪ್ರಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಸಲಹೆ ನೀಡಿದರು.

ಕಡಿಮೆ ಇಳುವರಿ ಹೊಂದಿರುವ ಪ್ರದೇಶದಲ್ಲಿ ಸುಮಾರು 4 ಸಾವಿರ ರೈತರನ್ನು ಆಯ್ಕೆ ಮಾಡಿದ್ದು, ಅವರನ್ನು ಪ್ರೋತ್ಸಾಹಿಸಲು ಪ್ರತಿ ಹೆಕ್ಟೇರ್ ಜಮೀನಿಗೆ 6 ಸಾವಿರ ರು. ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಅದರಲ್ಲಿ 4.5 ಸಾವಿರ ಪರಿಕರ ಹಾಗೂ 1.5 ಸಾವಿರ ಹಣ ನೇರವಾಗಿ ರೈತರ ಖಾತೆಗೆ ಹಣ ಜಮೆಯಾಗುತ್ತಿದೆ. ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸದೃಢವಾಗುವಂತೆ ತಿಳಿಸಿದರು.

ವೇದಿಕೆಯಲ್ಲಿ ಅರ್ಹ ರೈತ ಫಲಾನುಭವಿಗಳಿಗೆ ಉಚಿತವಾಗಿ ಬಿತ್ತನೆ ರಾಗಿ ವಿತರಿಸಲಾಯಿತು. ತಾಲೂಕಿನ ಹುರಳಿಗಂಗನಹಳ್ಳಿ ರಮೇಶ್ ಮತ್ತು ಎ.ನಾಗತಿಹಳ್ಳಿ ರಾಧಾಮಣಿ ಅವರಿಗೆ ರೈತ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ನಂತರ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ ತಾಲೂಕಿನ ಸುಖಧರೆ ಗ್ರಾಮದ ರೈತ ರಾಮೇಗೌಡರ ಪತ್ನಿ ರಾಧ ಅವರಿಗೆ ಸರ್ಕಾರದ ವತಿಯಂದ 5 ಲಕ್ಷ ರು. ಪರಿಹಾರ ಮಂಜೂರಾತಿ ಪತ್ರ ನೀಡಲಾಯಿತು.

ನಂತರ ಎಪಿಎಂಸಿ ಮುಂಭಾಗದ ರೈತರ ಜಮೀನಿನಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಸ್ವತಃ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಟ್ರ್ಯಾಕ್ಟರ್‌ ಚಾಲಿತ ಕೂರಿಗೆ ರಾಗಿ ಬಿತ್ತನೆ ಮಾಡಿ ಅರ್ಹ ರೈತ ಫಲಾನುಭವಿಗಳಿಗೆ ಕೃಷಿ ಪರಿಕರ ವಿತರಿಸಿದರು.

ಉದ್ಯಮಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷ ಮಂಜುನಾಥ್‌ಗೌಡ, ಜಂಟಿ ನಿರ್ದೇಶಕ ವಿ.ಎಸ್.ಅಶೋಕ್. ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್, ಕೃಷಿ ಅಧಿಕಾರಿ ಯುವರಾಜ್, ತಾಲೂಕು ಕಸಾಪ ಅಧ್ಯಕ್ಷ ಸಿ.ಆರ್.ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಚ್.ಟಿ.ಕೃಷ್ಣೇಗೌಡ, ಭೂ ಸಿರಿ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ತಮ್ಮಣ್ಣಗೌಡ, ಉಪಾಧ್ಯಕ್ಷೆ ಚೌಡಾಮಣಿ, ಪ್ರಧಾನ ಕಾರ್ಯದರ್ಶಿ ಎಸ್.ವೆಂಕಟೇಶ್, ಮುಖಂಡರಾದ ಅಲ್ಪಹಳ್ಳಿ ಡಿ.ಕೃಷ್ಣೇಗೌಡ, ಆರ್.ಕೃಷ್ಣೇಗೌಡ, ಕೆ.ಸಂಪತ್‌ಕುಮಾರ್, ಮಹೇಶ್‌ಪೂಜಾರ್, ಎಸ್.ಬಿ.ರಮೇಶ್ ಸೇರಿದಂತೆ ಪ್ರಗತಿಪರ ರೈತರು, ಕೃಷಿ. ಅರಣ್ಯ. ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಇದ್ದರು.