ಕನ್ನಡಪ್ರಭ ವಾರ್ತೆ ಗುಬ್ಬಿ

ವಿಕಲಚೇತನರ ಕಲ್ಯಾಣಕ್ಕಾಗಿ ಕಾಯ್ದಿರಿಸುವ ಶೇ. 5ರಷ್ಟು ನಿಧಿಯನ್ನು ಬಳಸಿಕೊಂಡು ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಬೈಕ್‌ಗಳನ್ನು ಶಾಸಕ ಎಸ್.ಆರ್.ಶ್ರೀನಿವಾಸ್ ವಿತರಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾವಲಂಬನೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕೆಲಸಕ್ಕೆ ಹೋಗುವವರು, ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ವಯಂ ಉದ್ಯೋಗ ಮಾಡುವ ಅರ್ಹ ವಿಕಲಚೇತನರಿಗೆ ಮೊದಲ ಆದ್ಯತೆ ನೀಡಿ ವಾಹನ ವಿತರಿಸಲಾಗಿದೆ. ಮುಂದಿನ ದಿನದಲ್ಲಿ ತಾಲೂಕಿನಲ್ಲಿ ಸರ್ವೆ ಮಾಡಿ ಉಳಿದವರಿಗೆ ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ಶಾಸಕರ ಅನುದಾನದಲ್ಲಿ ತಾಲೂಕಿನಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ತ್ರಿಚಕ್ರ ಮೋಟಾರು ಬೈಕ್ ಗಳನ್ನು ವಿತರಿಸಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಕೆ.ಆರ್.ವೆಂಕಟೇಶ್, ಶಿವಾಜಿ, ಸತೀಶ್, ರಾಜಣ್ಣ, ಶಿವನಂಜಪ್ಪ, ರಮೇಶ್, ತಾಲೂಕು ಪಂಚಾಯಿತಿ ಇಒ ಜೆ.ಬಿ.ರಂಗನಾಥ್, ತಾಲೂಕು ಯೋಜನಾಧಿಕಾರಿ ಜಗನ್ನಾಥ್ ಗೌಡ, ದಿವ್ಯಾಂಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಯರಾಮಯ್ಯ, ಬಿ.ಟಿ ಗಿರೀಶ್ ಕುಮಾರ್, ನಟರಾಜು, ಗೋವಿಂದ್, ಫಲಾನುಭವಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.