ಸಾರಾಂಶ
ಸರ್ಕಾರಿ ಶಾಲೆ ಅಭಿವೃದ್ಧಿ ಆಗುವುದರಿಂದ ಬಡವರ ಮಕ್ಕಳಿಗೂ ಶಿಕ್ಷಣಕ್ಕೆ ಅನುವುಮಾಡಿಕೊಟ್ಟಂತೆ ಆಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಸರ್ಕಾರ ಸಂಘ–ಸಂಸ್ಥೆಗಳು ನೀಡುವ ಅನುದಾನದ ಪ್ರೋತ್ಸಾಹದಿಂದ ಹೆಚ್ಚಿನ ಶಾಲೆಗಳು ಅಭಿವೃದ್ಧಿಗೊಳ್ಳಲಿವೆ.
ಕನ್ನಡಪ್ರಭ ವಾರ್ತೆ ಪಿರಿಯಾಪಟ್ಟಣ
ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಸಹಕಾರ ಮತ್ತು ಪ್ರೋತ್ಸಾಹ ನೀಡಲು ಸಿದ್ಧರಿದ್ದೇವೆ ಎಂದು ಗ್ರಾಪಂ ಅಧ್ಯಕ್ಷ ಎಚ್.ಎನ್. ಕಾಮರಾಜ್ ಹೇಳಿದರು.ಪಟ್ಟಣದ ಸರ್ಕಾರಿ ಹಿರಿಯ ತಾಲೂಕಿನ ಹಿಟ್ನೆಹೆಬ್ಬಾಗಿಲು ಗ್ರಾಪಂಯಿಂದ ಪ್ರೌಢಶಾಲಾ ಹಾಗೂ ಸರ್ಕಾರಿ ಹಿರಿಯ ಶಾಲೆಗಳಿಗೆ ಡ್ರಮ್ ಸಟ್ , ಕ್ರೀಡಾ ಸಾಮಾಗ್ರಿಗಳು ಹಾಗೂ ಲೇಖನಿ ಸಾಮಾಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು. ರಣೆ
ಸರ್ಕಾರಿ ಶಾಲೆ ಅಭಿವೃದ್ಧಿ ಆಗುವುದರಿಂದ ಬಡವರ ಮಕ್ಕಳಿಗೂ ಶಿಕ್ಷಣಕ್ಕೆ ಅನುವುಮಾಡಿಕೊಟ್ಟಂತೆ ಆಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಸರ್ಕಾರ ಸಂಘ–ಸಂಸ್ಥೆಗಳು ನೀಡುವ ಅನುದಾನದ ಪ್ರೋತ್ಸಾಹದಿಂದ ಹೆಚ್ಚಿನ ಶಾಲೆಗಳು ಅಭಿವೃದ್ಧಿಗೊಳ್ಳಲಿವೆ. ಶಾಲಾ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ, ಶೌಚಾಲಯ ನಿರ್ಮಾಣ, ಶಾಲಾ ಕಾಂಪೌಂಡ್, ಅಡುಗೆ ಮನೆ ನಿರ್ಮಾಣ, ಆಟದ ಮೈದಾನ ಸೇರಿದಂತೆ ರಾಜ್ಯದ ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಹಲವು ಸೌಕರ್ಯಗಳನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಪಂಗಳಿಗೆ ಅವಕಾಶ ಕಲ್ಪಿಸಿ, ಮಕ್ಕಳ ಭವಿಷ್ಯಕ್ಕೆ ಆಶಾದಾಯಕವಾಗಿ ಎಂದರು.ಕೆಪಿಸಿಸಿ ಸದಸ್ಯ ಅನಿಲ್ ಕುಮಾರ್ ಮಾತನಾಡಿ, ಶಿಕ್ಷಣವು ಮಕ್ಕಳನ್ನು ರೂಪಿಸು ಅಡಿಗಲ್ಲು ಇದ್ದಂತೆ, ವ್ಯಕ್ತಿತ್ವದ ಸಮಗ್ರ ಅಭಿವೃದ್ಧಿಯ ಗುರಿಯನ್ನು ಹೊಂದಿರುವ ಶೈಕ್ಷಣಿಕ ವ್ಯವಸ್ಥೆಗೆ ಸಮಾಜದ ವಿವಿಧ ಸಂಘಸಂಸ್ಥೆಗಳು ಶಿಕ್ಷಣ ಇಲಾಖೆಯ ಜೊತೆಗೆ ಕೈಜೋಡಿಸುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಬಲಪಡಿಸಬೇಕು ಎಂದರು.
ಪ್ರೌಢಶಾಲಾ ಮುಖ್ಯ ಶಿಕ್ಷಕ ಶ್ರೀನಿವಾಸ್ ಮಾತನಾಡಿ, ಶಾಲೆಗಳು ಮತ್ತು ಸಮುದಾಯದ ಬಾಂಧವ್ಯ ವೃದ್ಧಿಗೆ ಗ್ರಾಪಂ ಸಹಕಾರವಾಗುತ್ತದೆ ಎಂಬುದಕ್ಕೆ ಇಲ್ಲಿನ ಗ್ರಾಪಂ ಶಿಕ್ಷಣ ವ್ಯವಸ್ಥೆಗೆ ನೀಡಿರುವ ಸಹಕಾರ ಸಾಕ್ಷಿಯಾಗಿದೆ. ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಬೇಕೆಂದು ಅಪೇಕ್ಷಿಸುವ ಪ್ರತಿಯೊಬ್ಬರು ಉತ್ತಮ ಶಾಲೆಯ ನಿರ್ಮಾಣಕ್ಕೆ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.ಗ್ರಾಪಂ ಉಪಾಧ್ಯಕ್ಷೆ ಸಾಕಮ್ಮ, ಮಾಜಿ ಅಧ್ಯಕ್ಷೆ ಮೀನಾಕ್ಷಮ್ಮ, ಪಿಡಿಒ ರಾಮಕೃಷ್ಣ, ಸದಸ್ಯರಾದ ವಿಜಯಕುಮಾರ್, ಮಹಾದೇವ್, ರವಿಕುಮಾರ್, ಸುಧಾ, ಯಶೋದಮ್ಮ, ಶಾಲಾ ಮುಖ್ಯೋಪಾಧ್ಯಾಯ ಸೋಮೇಶ್, ಶಿಕ್ಷಕರಾದ ರುದ್ರಪ್ಪ, ತಾಂಡವಮೂರ್ತಿ, ಮಂಗಳಾ, ಸುಧಾ, ಮಹಾದೇವಿ , ಮಮತಾ ಇದ್ದರು.