ಸಾದಹಳ್ಳಿ ಸರ್ಕಾರಿ ಶಾಲಾ ಮಕ್ಕಳಿಗೆ ಲೇಖನ ಸಾಮಗ್ರಿ ವಿತರಣೆ

| Published : Aug 22 2025, 12:00 AM IST

ಸಾದಹಳ್ಳಿ ಸರ್ಕಾರಿ ಶಾಲಾ ಮಕ್ಕಳಿಗೆ ಲೇಖನ ಸಾಮಗ್ರಿ ವಿತರಣೆ
Share this Article
  • FB
  • TW
  • Linkdin
  • Email

ಸಾರಾಂಶ

ದೇವನಹಳ್ಳಿ: ಯಾವುದೇ ದೇಶ ಮತ್ತು ರಾಜ್ಯ ಮತ್ತು ಗ್ರಾಮ ಅಭಿವೃದ್ಧಿ ಹೊಂದಬೇಕಾದರೆ ಅದು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಸಮಾಜ ಸೇವಕ ಕಿಶೋರ್ ಕುಮಾರ್ ತಿಳಿಸಿದರು.

ದೇವನಹಳ್ಳಿ: ಯಾವುದೇ ದೇಶ ಮತ್ತು ರಾಜ್ಯ ಮತ್ತು ಗ್ರಾಮ ಅಭಿವೃದ್ಧಿ ಹೊಂದಬೇಕಾದರೆ ಅದು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಸಮಾಜ ಸೇವಕ ಕಿಶೋರ್ ಕುಮಾರ್ ತಿಳಿಸಿದರು.

ತಾಲೂಕಿನ ಸಾದಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಲೇಖನ ಸಾಮಗ್ರಿ ವಿತರಿಸಿ ಮಾತನಾಡಿದ ಅವರು, ಗ್ರಾಮೀಣ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ನೋಟ್ ಪುಸ್ತಕಗಳನ್ನು ನೀಡಲಾಗುತ್ತಿದೆ. ಮಕ್ಕಳು ಉತ್ತಮ ವಿದ್ಯಾಭ್ಯಾಸ ಮಾಡಬೇಕು. ಇಂದಿನ ವಿದ್ಯಾರ್ಥಿಗಳು ಓದಿನ ಕಡೆ ಆಸಕ್ತಿ ವಹಿಸಬೇಕು. ಮನುಷ್ಯನಿಗೂ ವಿದ್ಯೆ ಬಹಳ ಮುಖ್ಯ. ನಾವು ಮುಂದಿನ ದಿನಗಳಲ್ಲಿ ಅಥವಾ ಸಮಾಜದಲ್ಲಿ ಅತ್ಯುತ್ತಮ ಸ್ಥಾನಕ್ಕೆ ಬೆಳೆಯಬೇಕಾದರೆ ವಿದ್ಯೆ ಬಹಳ ಮುಖ್ಯ. ವಿದ್ಯಾರ್ಥಿಗಳು ನಿಮ್ಮ ಓದಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಪುಸ್ತಕ ಹಾಗೂ ಲೇಖನ ಸಾಮಗ್ರಿಗಳು ಅತ್ಯವಶ್ಯಕ ಎಂದು ಹೇಳಿದರು.

ಮಕ್ಕಳು ಶಿಕ್ಷಣ ಸಂಸ್ಕಾರ ಕಲಿತು ದೇಶದ ಆಸ್ತಿಯಾಗಬೇಕು. ಪೋಷಕರು ತಮ್ಮ ಮಕ್ಕಳಿಗೆ ಕೋಟಿ ಕೋಟಿ ಆಸ್ತಿ ಮಾಡುವ ಬದಲು ಶಿಕ್ಷಣವೆಂಬ ದೊಡ್ಡ ಆಸ್ತಿ ಮಕ್ಕಳಿಗೆ ನೀಡಬೇಕು. ಅದು ಕೊನೆವರೆಗೂ ಮಕ್ಕಳನ್ನು ಕಾಯುತ್ತದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಯಾವುದೇ ಖಾಸಗಿ ಶಾಲೆಗಿಂತಲೂ ಕಡಿಮೆ ಇಲ್ಲದ ರೀತಿ ಸರ್ಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಹೇಳಿದರು.

ಈ ವೇಳೆ ತಾಪಂ ಮಾಜಿ ಉಪಾಧ್ಯಕ್ಷ ಎಸ್.ಎಂ.ನಾರಾಯಣಸ್ವಾಮಿ, ಮುಖಂಡ ವೆಂಕಟೇಶ್ ದಾಸ್, ಕನ್ನಮಂಗಲ ಗ್ರಾಪಂ ಮಾಜಿ ಸದಸ್ಯ ಸೋಮಶೇಖರ್, ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.

೨೧ ದೇವನಹಳ್ಳಿ ಚಿತ್ರಸುದ್ದಿ ೦೩:

ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಮಾಜ ಸೇವಕ ಕಿಶೋರ್ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಲೇಖನ ಸಾಮಗ್ರಿಯನ್ನು ಸಮಾಜ ಸೇವಕ ಕಿಶೋರ್ ಕುಮಾರ್ ವಿತರಿಸಿದರು.