ಪೂರಕ ಪೌಷ್ಟಿಕ ಆಹಾರ ವಿತರಣೆಗೆ ಚಾಲನೆ

| Published : Feb 25 2024, 01:49 AM IST

ಸಾರಾಂಶ

ರಾಗಿ ಮಾಲ್ಟ್‌ನಲ್ಲಿ ಮಕ್ಕಳ ಬೆಳವಣಿಗೆಗೆ ಬೇಕಾದ ಅಗತ್ಯ ಪೌಷ್ಟಿಕಾಂಶಗಳು ದೊರೆಯುತ್ತವೆ. ರಾಗಿ ತಿಂದವನಿಗೆ ರೋಗವಿಲ್ಲ ಎಂಬಂತೆ ರಾಗಿ ಸೇವಿಸಿದರೆ ದೈಹಿಕ ಸದೃಢವಾಗಿರಲು ಸಾಧ್ಯ.

ಕನ್ನಡಪ್ರಭ ವಾರ್ತೆ ಸುರಪುರ

ಮಧ್ಯಾಹ್ನ ಉಪಾಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ 1ರಿಂದ 10ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ನೂತನ ಕಾರ್ಯಕ್ರಮವಾದ ಪೂರಕ ಪೌಷ್ಟಿಕ ಆಹಾರ ವಿತರಣೆಗೆ ನಗರದ ಸರ್ಕಾರಿ ಕನ್ಯಾ ಮಾದರಿಯ ಪ್ರಾಥಮಿಕ ಶಾಲೆ ದರಬಾರಿನಲ್ಲಿ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ರಾಜಾ ಕುಮಾರ ನಾಯಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ರಾಗಿ ಮಾಲ್ಟ್‌ನಲ್ಲಿ ಮಕ್ಕಳ ಬೆಳವಣಿಗೆಗೆ ಬೇಕಾದ ಅಗತ್ಯ ಪೌಷ್ಟಿಕಾಂಶಗಳು ದೊರೆಯುತ್ತವೆ. ರಾಗಿ ತಿಂದವನಿಗೆ ರೋಗವಿಲ್ಲ ಎಂಬಂತೆ ರಾಗಿ ಸೇವಿಸಿದರೆ ದೈಹಿಕ ಸದೃಢವಾಗಿರಲು ಸಾಧ್ಯವಾಗುತ್ತದೆ. ರಾಜ್ಯ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಹಾಗೂ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮತ್ತು ಕೆಎಂಎಫ್ ಸಂಸ್ಥೆ ಸಹಭಾಗಿತ್ವದಲ್ಲಿ ಆರಂಭಗೊಂಡಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ದೊರೆಯಲಿ ಎಂದು ಹಾರೈಸಿದರು.

ಪ್ರಭಾರಿ ಬಿಸಿಯೂಟ ಸಹಾಯಕ ನಿರ್ದೇಶಕ ಪಂಡಿತ ನಿಂಬೂರೆ, ಬಿಆರ್‌ಪಿ ಖಾದರ ಪಟೇಲ್ ಮಾತನಾಡಿದರು. ಶಾಲೆಯ ಮುಖ್ಯಶಿಕ್ಷಕ ಸೋಮರೆಡ್ಡಿ ಮಂಗಿಹಾಳ ಅಧ್ಯಕ್ಷತೆ ವಹಿಸಿದ್ದರು. ಇಸಿಓ ಸಣ್ಣ ಹಣಮಂತ, ಶಿವುಕುಮಾರ ಹಿರೇಮಠಸಿ. ಎಸ್‌ಡಿಎಂಸಿ ಅಧ್ಯಕ್ಷ ಆರ್.ಪಿ.ಸಜ್ಜನ್ ಕುಮಾರ ಸೇರಿ ಇತರರಿದ್ದರು.