ಜಿಲ್ಲೆಯ 30 ಸಾವಿರ ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಣೆ: ಅಪ್ಪಚ್ಚು ರಂಜನ್ ನೆರವು

| Published : Feb 18 2025, 12:33 AM IST

ಜಿಲ್ಲೆಯ 30 ಸಾವಿರ ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಣೆ: ಅಪ್ಪಚ್ಚು ರಂಜನ್ ನೆರವು
Share this Article
  • FB
  • TW
  • Linkdin
  • Email

ಸಾರಾಂಶ

ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ೧೩ ಸಾವಿರ, ವೀರಾಜಪೇಟೆಗೆ ೯, ಮಡಿಕೇರಿ ತಾಲೂಕಿನಲ್ಲಿ ೮ ಸಾವಿರ ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಣೆ ಮಾಡಲಾಗುವುದು. ಉತ್ತಮ ಗುಣಮಟ್ಟದ ಸ್ವೆಟರ್‌ಗಳನ್ನು ನೀಡಲಾಗುತ್ತಿದ್ದು, ಮಳೆ ಹಾಗೂ ಚಳಿಗಾಲದಲ್ಲಿ ಮಕ್ಕಳಿಗೆ ಉಪಯೋಗಕ್ಕೆ ಬರಲಿದೆ.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಜಿಲ್ಲೆಯ 30 ಸಾವಿರ ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಿಸುವ ಕಾರ್ಯಕ್ರಮಕ್ಕೆ ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಕುಂಬೂರು ಸರ್ಕಾರಿ ಶಾಲೆಯಲ್ಲಿ ಚಾಲನೆ ನೀಡಿದರು.ರಂಜನ್ ಅವರು ತಮ್ಮ ಸ್ನೇಹಿತರೋರ್ವರ ಸಹಕಾರದಿಂದ ೩೦ ಸಾವಿರ ಸ್ವೆಟರ್‌ಗಳನ್ನು ದೆಹಲಿಯಿಂದ ತರಿಸಿದ್ದು, ಜಿಲ್ಲೆಯ ಮೂರು ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ವಿತರಿಸಲು ಕ್ರಮ ಕೈಗೊಂಡಿದ್ದಾರೆ.ಅದರಂತೆ ಸೋಮವಾರ ಸುಮಾರು ೨ ಸಾವಿರ ಸ್ವೆಟರ್‌ಗಳನ್ನು ಸೋಮವಾರಪೇಟೆ ಭಾಗದಲ್ಲಿ ವಿತರಿಸಲಾಯಿತು. ತಾಲೂಕಿನ ಕುಂಬೂರು, ಹೊಸತೋಟ, ಐಗೂರು, ಕಾಜೂರು, ಬಜೆಗುಂಡಿ, ಚೌಡ್ಲು, ದೊಡ್ಡಮಳ್ತೆ ಸೇರಿದಂತೆ ಸೋಮವಾರಪೇಟೆ ಪಟ್ಟಣ ವ್ಯಾಪ್ತಿಯ ಸರ್ಕಾರಿ ಶಾಲೆಗಳ ೨ ಸಾವಿರ ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಿಸಲಾಯಿತು.ಫೆ.೧೮ರಂದು ಗೌಡಳ್ಳಿ, ಶನಿವಾರಸಂತೆ, ಕೊಡ್ಲಿಪೇಟೆ, ಬೆಸೂರು, ಹಂಡ್ಲಿ, ನಿಡ್ತ, ಆಲೂರು ಸಿದ್ದಾಪುರ, ಹೆಬ್ಬಾಲೆ, ಶಿರಂಗಾಲ, ತೊರೆನೂರು, ಕೂಡ್ಲೂರು, ಕೂಡುಮಂಗಳೂರು, ಮುಳ್ಳುಸೋಗೆ ಸೇರಿದಂತೆ ಇತರ ಭಾಗದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಸ್ವೆಟರ್ ವಿತರಣೆ ಮಾಡಲಾಗುವುದು ಎಂದು ರಂಜನ್ ತಿಳಿಸಿದ್ದಾರೆ.ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ೧೩ ಸಾವಿರ, ವೀರಾಜಪೇಟೆಗೆ ೯, ಮಡಿಕೇರಿ ತಾಲೂಕಿನಲ್ಲಿ ೮ ಸಾವಿರ ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಣೆ ಮಾಡಲಾಗುವುದು. ಉತ್ತಮ ಗುಣಮಟ್ಟದ ಸ್ವೆಟರ್‌ಗಳನ್ನು ನೀಡಲಾಗುತ್ತಿದ್ದು, ಮಳೆ ಹಾಗೂ ಚಳಿಗಾಲದಲ್ಲಿ ಮಕ್ಕಳಿಗೆ ಉಪಯೋಗಕ್ಕೆ ಬರಲಿದೆ ಎಂದು ಹೇಳಿದರು.ಈ ಸಂದರ್ಭ ಪ್ರಮುಖರಾದ ಎಂ.ಬಿ. ಅಭಿಮನ್ಯು ಕುಮಾರ್, ಎಸ್.ಆರ್. ಸೋಮೇಶ್, ಶರತ್‌ಚಂದ್ರ, ದರ್ಶನ್, ಮಹೇಶ್, ಆದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.