ಮಹಿಳೆಯರಿಗೆ ಹೊಲಿಗೆ ಯಂತ್ರಗಳ ವಿತರಣೆ

| Published : Oct 20 2024, 01:53 AM IST

ಸಾರಾಂಶ

ಗ್ರಾಮೀಣ ಭಾಗದ ಜನರ ಸ್ವಾವಲಂಬಿ ಬದುಕಿಗೆ ಆಸರೆಯಾಗುವ ಉಪಕರಣಗಳನ್ನು ೮೦ ಮಂದಿ ಫಲಾನುಭವಿಗಳಿಗೆ ವಿತರಣೆ ಮಾಡಿ ಮಾತನಾಡಿದ ಶಾಸಕರು, ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿದೆ. ತಾಲೂಕು ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಔದ್ಯಮಿಕ ಕೇಂದ್ರ ಯೋಜನೆ ಮತ್ತು ವೃತ್ತಿಪರ ಕುಶಲಕರ್ಮಿಗಳ ಸುಧಾರಿತ ಉಪಕರಣಗಳ ವಿತರಣೆ ಯೋಜನೆಯಡಿ, ಇಲಾಖೆ ವತಿಯಿಂದ ಸ್ವ ಉದ್ಯೋಗ ಮಾಡಬಯಸುವ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಶಾಸಕ ಸಿ. ಎನ್. ಬಾಲಕೃಷ್ಣ ವಿತರಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಔದ್ಯಮಿಕ ಕೇಂದ್ರ ಯೋಜನೆ ಮತ್ತು ವೃತ್ತಿಪರ ಕುಶಲಕರ್ಮಿಗಳ ಸುಧಾರಿತ ಉಪಕರಣಗಳ ವಿತರಣೆ ಯೋಜನೆಯಡಿ, ಇಲಾಖೆ ವತಿಯಿಂದ ಸ್ವ ಉದ್ಯೋಗ ಮಾಡಬಯಸುವ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಶಾಸಕ ಸಿ. ಎನ್. ಬಾಲಕೃಷ್ಣ ವಿತರಿಸಿದರು.

ತಾಲೂಕಿನ ಗ್ರಾಮೀಣ ಭಾಗದ ಜನರ ಸ್ವಾವಲಂಬಿ ಬದುಕಿಗೆ ಆಸರೆಯಾಗುವ ಉಪಕರಣಗಳನ್ನು ೮೦ ಮಂದಿ ಫಲಾನುಭವಿಗಳಿಗೆ ವಿತರಣೆ ಮಾಡಿ ಮಾತನಾಡಿದ ಶಾಸಕರು, ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿದೆ. ಇಂದು ಹಲವು ಯುವಕ ಯುವತಿಯರು ಕರಕುಶಲ ಹಾಗೂ ಇನ್ನಿತರ ಕೌಶಲ್ಯ ಹೊಂದಿದ್ದು, ಅಂತಹವರು ಸ್ವ ಉದ್ಯೋಗದ ಮೂಲಕ ಜೀವನ ರೂಪಿಸಿಕೊಳ್ಳಲು ಸರ್ಕಾರ ನೀಡುವ ಇಂತಹ ಉಪಕರಣಗಳು ಅತಿ ಉಪಯುಕ್ತವಾಗಿವೆ. ಫಲಾನುಭವಿಗಳು ಜಿಲ್ಲಾಪಂಚಾಯಿತಿ ಮೂಲಕ ವಿತರಿಸಲಾಗುವ ಇಂತಹ ಉಪಕರಣಗಳ ಸದ್ಬಳಕೆಯಿಂದ ಜೀವನ ರೂಪಿಸಿಕೊಳ್ಳಬೇಕೆಂದು ಅವರು ಕರೆ ನೀಡಿದರು.

೨೦೨೪-೨೫ ನೇ ಸಾಲಿನಲ್ಲಿ ಜಿಲ್ಲಾ ಔದ್ಯಮಿಕ ಕೇಂದ್ರ ಯೋಜನೆಯಡಿಯಲ್ಲಿ ಹಾಸನ ಜಿಲ್ಲೆಯ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಮಹಿಳಾ ಫಲಾನುಭವಿಗಳಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆಯಂತ್ರಗಳನ್ನು ಹಾಗೂ ವೃತ್ತಿನಿರತ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಗಳ ವಿತರಣೆ ಯೋಜನೆಯಡಿ ಗ್ರಾಮೀಣ ಕುಶಲಕರ್ಮಿಗಳಿಗೆ ಮರಗೆಲಸ, ಗಾರೆಕೆಲಸ, ಎಲೆಕ್ಟಿಕಲ್ ರಿಪೇರಿ, ಬೋರ್‌ವೆಲ್ ರಿಪೇರಿ, ಮೋಟರ್‌ ವೈಂಡಿಂಗ್ ಉಪಕರಣಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಅರ್ಜಿ ದಿನಾಂಕವನ್ನು ಅಕ್ಟೋಬರ್‌ ೧೫ರಿಂದ ೩೧ರವರೆಗೆ ಮುಂದೂಡಲಾಗಿದೆ. ಅರ್ಜಿ ಸಲ್ಲಿಸಿದ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಆಯ್ಕೆ ಮಾಡಲಾಗುವುದು. ತರಬೇತಿದಾರ ಕುಶಲಕರ್ಮಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ಈ ವೇಳೆ ಕೈಗಾರಿಕೆ ಇಲಾಖೆ ಅಧಿಕಾರಿ ಆನಂದ್ ಮತ್ತು ವಿಸ್ತರಣಾಧಿಕಾರಿ ಇದ್ದರು.