ಸಾರಾಂಶ
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು ಮತ್ತು ಸಾಂಕೇತಿಕವಾಗಿ ಉಚಿತ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಿದರು.
ಕನ್ನಡಪ್ರಭ ವಾರ್ತೆ ಕಾಪು
ಇಲ್ಲಿನ ಉದ್ಯಾವರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ, ಉಚಿತ ಪುಸ್ತಕ ಮತ್ತು ಸಮವಸ್ತ್ರ ವಿತರಣೆ ಕಾರ್ಯಕ್ರಮ ಶನಿವಾರ ನಡೆಯಿತು.ಈ ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು ಮತ್ತು ಸಾಂಕೇತಿಕವಾಗಿ ಉಚಿತ ಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಮಾಡಿ, ಅವುಗಳನ್ನು ಬಳಸಿಕೊಂಡು ಉತ್ತಮ ಶಿಕ್ಷಣ ಪಡೆಯುವಂತೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಉದ್ಯಾವರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲಿನಿ ಸಾಲ್ಯಾನ್, ಉಪಾಧ್ಯಕ್ಷ ರಾಜೇಶ್ ಕುಂದರ್, ಪಂಚಾಯಿತಿ ಸದಸ್ಯರಾದ ಜಿತೇಂದ್ರ ಶೆಟ್ಟಿ, ಸೀನಿಯರ್ ಚೇಂಬರ್ ಇಂಟರ್‌ನ್ಯಾಷನ್ ಉಡುಪಿ ಟೆಂಪಲ್ ಸಿಟಿ ರೀಜನ್ ಅಧ್ಯಕ್ಷ ಸಂತೋಷ್ ಕುಮಾರ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಿಜಯ್ ಕುಮಾರ್ ಉದ್ಯಾವರ, ಸದಸ್ಯ ಯು. ಅಜಿತ್ ಕುಮಾರ್ ಶಣೈ, ಪಂಚಾಯಿತಿ ಕಾರ್ಯದರ್ಶಿ ಶಿವರಾಜ್, ಪ್ರಾಂಶುಪಾಲ ಕೃಷ್ಣ ಮೂರ್ತಿ, ಹೈಸ್ಕೂಲ್ ವಿಭಾಗದ ಮುಖ್ಯಸ್ಥೆ ಆಶಲತಾ ಕುಮಾರಿ, ಪ್ರಾಥಮಿಕ ಶಾಲಾ ಮುಖ್ಯಸ್ಥ ಗುರುಪ್ರಸಾದ್ ಉಪಸ್ಥಿತರಿದ್ದರು.