ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಶಿಕ್ಷಣ ಮತ್ತು ಪೂರಕ ವಾತಾವರಣ ಕಲ್ಪಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ನಗರಸಭಾ ಸದಸ್ಯ ಎಸ್ ಎಲ್ ರಂಗನಾಥ್ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ

ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಶಿಕ್ಷಣ ಮತ್ತು ಪೂರಕ ವಾತಾವರಣ ಕಲ್ಪಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ನಗರಸಭಾ ಸದಸ್ಯ ಎಸ್ ಎಲ್ ರಂಗನಾಥ್ ಹೇಳಿದರು.

ಮಕ್ಕಳ ದಿನಾಚರಣೆಯ ಅಂಗವಾಗಿ ನಗರದ ಕಾಳಿದಾಸನಗರ ಅಂಗನವಾಡಿ ಕೇಂದ್ರದಲ್ಲಿ ಎಸ್ ಎಲ್ ಆರ್ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು ಅಂಗನವಾಡಿ ಕೇಂದ್ರಗಳು ಮಕ್ಕಳ ಕಲಿಕೆಯ ಮೊದಲ ಮೆಟ್ಟಿಲುಗಳಾಗಿದ್ದು, ಇಲ್ಲಿಗೆ ಬರುವ ಮಕ್ಕಳಲ್ಲಿ ಸಮಾನತೆ ಮತ್ತು ಆತ್ಮವಿಶ್ವಾಸ ಮೂಡಿಸಲು ಸಮವಸ್ತ್ರ ವಿತರಿಸಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಸಿದ್ದಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆ ಯಶೋದಮ್ಮ, ಅಂಗನವಾಡಿ ಸಹಾಯಕರು, ಪೋಷಕರು, ಫೌಂಡೇಶನ್ ನ ಪದಾಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.