ಸರ್ಕಾರಿ ಶಾಲಾ ಮಕ್ಕಳಿಗೆ ಶಾಸಕ ಎಸ್‌.ಪಿ.ಸ್ವರೂಪ್‌ರಿಂದ ಸಮವಸ್ತ್ರ ವಿತರಣೆ

| Published : Mar 10 2024, 01:30 AM IST / Updated: Mar 10 2024, 01:31 AM IST

ಸರ್ಕಾರಿ ಶಾಲಾ ಮಕ್ಕಳಿಗೆ ಶಾಸಕ ಎಸ್‌.ಪಿ.ಸ್ವರೂಪ್‌ರಿಂದ ಸಮವಸ್ತ್ರ ವಿತರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಹಾಸನದ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಹಿಂಬಾಗದ ರವೀಂದ್ರ ನಗರ ಸರ್ಕಾರಿ ಶಾಲೆಯಲ್ಲಿ ಸಧ್ಭಕ್ತ ಬಳಗ ಹಾಗೂ ರೋಟರಿ ಕ್ಲಬ್ ಆಫ್ ಕ್ವಾಂಟಾ ವತಿಯಿಂದ ಆಯೋಜಿಸಿದ್ದ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮಠದ ಸ್ವಾಮೀಜಿ ಜನ್ಮದಿನ ಪ್ರಯುಕ್ತ ಸಮವಸ್ತ್ರವನ್ನು ಶಾಸಕ ಎಚ್.ಪಿ. ಸ್ವರೂಪ್ ವಿತರಿಸಿದರು.

ಶಂಭುನಾಥ ಸ್ವಾಮೀಜಿ ಜನ್ಮದಿನದ ಪ್ರಯುಕ್ತ ಆಯೋಜನೆ ಕನ್ನಡಪ್ರಭ ವಾರ್ತೆ ಹಾಸನ

ನಗರದ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಹಿಂಬಾಗದ ರವೀಂದ್ರ ನಗರ ಸರ್ಕಾರಿ ಶಾಲೆಯಲ್ಲಿ ಸಧ್ಭಕ್ತ ಬಳಗ ಹಾಗೂ ರೋಟರಿ ಕ್ಲಬ್ ಆಫ್ ಕ್ವಾಂಟಾ ವತಿಯಿಂದ ಆಯೋಜಿಸಿದ್ದ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮಠದ ಸ್ವಾಮೀಜಿ ಜನ್ಮದಿನ ಪ್ರಯುಕ್ತ ಸಮವಸ್ತ್ರವನ್ನು ಶಾಸಕ ಎಚ್.ಪಿ. ಸ್ವರೂಪ್ ವಿತರಿಸಿದರು.

ನಂತರ ಮಾತನಾಡಿದ ಶಾಸಕರು, ಶ್ರೀ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಮಾಡುತ್ತಿರುವುದು ಉತ್ತಮವಾಗಿದೆ. ಸ್ವಾಮೀಜಿ ಆಶೀರ್ವಾದದಿಂದ ಎಲ್ಲಾರಿಗೂ ಒಳ್ಳೆಯದಾಗಲಿ. ಸ್ವಾಮೀಜಿ ಅವರು ಹಾಕಿಕೊಟ್ಟ ದಾರಿಯಲ್ಲಿ, ಮಾರ್ಗದರ್ಶನದಲ್ಲಿ ನಡೆದುಕೊಂಡು ಬರಲಾಗುತ್ತಿದೆ ಎಂದರು.

ರೋಟರಿ ಕ್ಲಬ್ ಆಫ್ ಕ್ವಾಂಟಾ ಅಧ್ಯಕ್ಷ ಬೊಮ್ಮೇಗೌಡ ಮಾತನಾಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರವೀಂದ್ರ ನಗರ ಇಲ್ಲಿಗೆ ಹೆಚ್ಚಿನ ನೆರವು ಅಗತ್ಯವಿದೆ. ಶ್ರೀ ಶಂಭುನಾಥ ಸ್ವಾಮೀಜಿ ಸರ್ಕಾರಿ ಶಾಲೆ ಬಗ್ಗೆ ಹೆಚ್ಚಿನ ಗಮನ ನೀಡಿ ಈ ವರ್ಷದ ಶಾಲಾ ವಾರ್ಷಿಕೋತ್ಸವವನ್ನು ತಮ್ಮ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಉಚಿತವಾಗಿ ಕಾರ್ಯಕ್ರಮ ನಡೆಸಲು ಅವಕಾಶ ಕೊಟ್ಟಿರುವುದು ಉತ್ತಮವಾಗಿದೆ ಎಂದು ಹೇಳಿದರು.

ರೋಟರಿ ಕ್ಲಬ್ ಆಫ್ ಕ್ವಾಂಟಾ ಕಾರ್ಯದರ್ಶಿ ನಾಗೇಶ್, ಸದಸ್ಯರಾದ ಪ್ರಕಾಶ್ ಮೇಗಳಕೇರಿ ,ಶರತ್, ಸತ್ಯಮಂಗಲ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸುಮಂತ್, ರತನ್, ದಿಲೀಪ್ ಶಾಲೆಯ ಸಿಬ್ಬಂದಿ ಇದ್ದರು.

ಶಂಭುನಾಥ ಸ್ವಾಮೀಜಿಗಳ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಶಾಸಕ ಎಚ್‌.ಪಿ.ಸ್ವರೂಪ್‌ ಉಚಿತವಾಗಿ ಸಮವಸ್ತ್ರ ವಿತರಣೆ ಮಾಡಿದರು.