ಕುತ್ಲೂರು ಸರ್ಕಾರಿ ಶಾಲೆ ಮಕ್ಕಳಿಗೆ ಸಮವಸ್ತ್ರ ವಿತರಣೆ

| Published : Oct 29 2024, 12:54 AM IST / Updated: Oct 29 2024, 12:55 AM IST

ಕುತ್ಲೂರು ಸರ್ಕಾರಿ ಶಾಲೆ ಮಕ್ಕಳಿಗೆ ಸಮವಸ್ತ್ರ ವಿತರಣೆ
Share this Article
  • FB
  • TW
  • Linkdin
  • Email

ಸಾರಾಂಶ

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಎಂಸಿಎಫ್ ಸಂಸ್ಥೆಯ ಸಿಎಸ್ಆರ್ ನಿಧಿಯ ಮೂಲಕ ಕುತ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸೋಮವಾರ ಸಮವಸ್ತ್ರ ವಿತರಿಸಲಾಯಿತು. ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಮವಸ್ತ್ರ ವಿತರಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಎಂಸಿಎಫ್ ಸಂಸ್ಥೆಯ ಸಿಎಸ್ಆರ್ ನಿಧಿಯ ಮೂಲಕ ಕುತ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸೋಮವಾರ ಸಮವಸ್ತ್ರ ವಿತರಿಸಲಾಯಿತು.

ಸಮವಸ್ತ್ರ ವಿತರಿಸಿ ಮಾತನಾಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ., ಗ್ರಾಮೀಣ ಭಾಗದ ಜನರ ಸಮಸ್ಯೆಗಳ ನಿವಾರಣೆಗೆ ಮಾಧ್ಯಮ ರಂಗ ನಿರಂತರವಾಗಿ ಪ್ರಯತ್ನಿಸುತ್ತಿರುವುದು ಮಾದರಿಯಾಗಿದೆ ಎಂದು ಹೇಳಿದರು.

ಇದೇ ಸಂದರ್ಭ ಕುತ್ಲೂರು ಗ್ರಾಮದ ಸಾಹಸ ಪ್ರವಾಸೋದ್ಯಮ ಸಾಕ್ಷ್ಯ ಚಿತ್ರದ ಮೂಲಕ ಪ್ರಶಸ್ತಿ ಪಡೆದ ಕುತ್ಲೂರು ಗ್ರಾಮದ ಪ್ರತಿನಿಧಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಸನ್ಮಾನಿಸಿದರು.

ಎಂಸಿಎಫ್‌ನ ಚೀಫ್ ಪ್ರೊಡಕ್ಷನ್ ಆಫೀಸರ್ ಗಿರೀಶ್ ಮಾತನಾಡಿ, ಕುತ್ಲೂರು ಗ್ರಾಮಾಂತರ ಪ್ರದೇಶ ಸೇರಿದಂತೆ ಸಂಸ್ಥೆಯ ಸಿಎಸ್ಆರ್ ನಿಧಿಯಿಂದ ಸುಮಾರು 350 ಮಕ್ಕಳಿಗೆ ಈ ಬಾರಿ ಸಮವಸ್ತ್ರ ನೀಡಲು ಸಂತೋಷಪಡುವುದಾಗಿ ಹೇಳಿದರು.

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಎಂಸಿಎಫ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಅವಿನಂದನ್, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಕುತ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಇದ್ದರು. ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ನಿರೂಪಿಸಿದರು. ಪ್ರದಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.