ಸಾರಾಂಶ
- ಸಾಹಿತಿ ಡಾ.ಎ.ಬಿ. ರಾಮಚಂದ್ರಪ್ಪ ಸಮ್ಮೇಳನಾಧ್ಯಕ್ಷತೆ - - - ಕನ್ನಡಪ್ರಭ ವಾರ್ತೆ ಜಗಳೂರು
ಪಟ್ಟಣದಲ್ಲಿ ಜ.11 ಮತ್ತು 12ರಂದು ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. 11ರಂದು ಬೆಳಗ್ಗೆ 8 ಗಂಟೆಗೆ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ರಾಷ್ಟ್ರ ಧ್ವಜಾರೋಹಣ ನೆರೆವೇರಿಸುವರು.ಜಿಲ್ಲಾ ಕಸಾಪ ಅಧ್ಯಕ್ಷ ಬಿ. ವಾಮದೇವಪ್ಪ ಪರಿಷತ್ತಿನ ಧ್ವಜಾರೋಹಣ ನೆರೆವೇರಿಸುವರು. ತಹಸೀಲ್ದಾರ್ ಸೈಯದ್ ಕಲೀಂ ಉಲ್ಲಾ ನಾಡ ಧ್ವಜಾರೋಹಣ ನೆರೆವೇರಿಸುವರು. ನವಚೇತನ ಶಾಲೆ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆ, ನಾಡಗೀತೆ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಜಿಲ್ಲಾ ಎಸ್‌ಪಿ ಉಮಾ ಪ್ರಶಾಂತ್ ಅವರು ತಾಯಿ ಭುವನೇಶ್ವರಿ ಮತ್ತು ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡುವರು.
ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಲೋಕಮ್ಮ, ಜೆ.ಸಿ. ಓಬಣ್ಣ, ಡಿಡಿಪಿಯು ಕರಿಸಿದ್ದಪ್ಪ ಎಸ್.ಜಿ., ಡಿಡಿಪಿಐ ಕೋಟ್ರೇಶ್ ಜಿ., ಜಗಳೂರು ವೃತ್ತ ನಿರೀಕ್ಷಕ ಶ್ರೀನಿವಾಸ ರಾವ್, ತಾಪಂ ಇಒ ಕೆಂಚಪ್ಪ, ಜಗಳೂರು ಬಿಇಒ ಹಾಲಮೂರ್ತಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೀರೇಂದ್ರ ಕುಮಾರ್ ಭಾಗವಹಿಸುವರು.ಜಾನಪದ ಕಲಾತಂಡಗಳು, ಎತ್ತಿನಗಾಡಿಗಳ ಮೆರವಣಿಗೆ, ಮಹಿಳೆಯರಿಂದ ಪೂರ್ಣಕುಂಭ, ಇಲಾಖೆಗಳ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಲಿದೆ. 11 ಗಂಟೆಗೆ ಸಮ್ಮೇಳನ ಉದ್ಘಾಟನಾ ಸಮಾರಂಭವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಹಾಗೂ ಸಾಹಿತಿ ಡಾ.ಪುರುಷೋತ್ತಮ ಬಿಳಿಮಲೆ ಉದ್ಘಾಟಿಸುವರು. ಜಗಳೂರು ಶಾಸಕ ಬಿ.ದೇವೆಂದ್ರಪ್ಪ ಅಧ್ಯಕ್ಷತೆ ವಹಿಸುವರು. ಸಂಸ್ಕೃತಿ ಚಿಂತಕ, ಸಾಹಿತಿ ಡಾ. ಎ.ಬಿ. ರಾಮಚಂದ್ರಪ್ಪ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ ಆಶಯ ನುಡಿಗಳಾನ್ನಾಡುವರು. ಜಿಲ್ಲಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮಹಲಿಂಗರಂಗ ವೇದಿಕೆ ಉದ್ಘಾಟಿಸುವರು. ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಿನ್ನಹಗರಿಯ ನುಡಿತೇರು ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡುವರು. ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅವರು ಜೆ.ಎಂ. ಇಮಾಮ್ ಮಹಾದ್ವಾರ ಉದ್ಘಾಟಿಸುವರು. ಕ.ಸಾ.ಪ ಅಧ್ಯಕ್ಷ, ನಾಡೋಜ ಡಾ.ಮಹೇಶ ಜೋಶಿ ಅವರು ವಿದ್ಯಾರತ್ನ ಡಾ. ಟಿ.ತಿಪ್ಪೇಸ್ವಾಮಿ ಸಭಾಂಗಣ ಉದ್ಘಾಟಿಸುವರು. ನಿಕಟಪೂರ್ವ ಸಮ್ಮೇಳಧ್ಯಕ್ಷ ಪ್ರೊ. ಸಿ.ವಿ. ಪಾಟೀಲ್ ಕನ್ನಡ ಧ್ವಜ ಹಸ್ತಾಂತರ ಮಾಡುವರು. ಜಗಳೂರು ಕ್ಷೇತ್ರದ ಮಾಜಿ ಶಾಸಕರಾದ ಟಿ.ಗುರುಸಿದ್ದನಗೌಡ, ಎಸ್.ವಿ. ರಾಮಚಂದ್ರಪ್ಫ, ಎಚ್.ಪಿ. ರಾಜೇಶ್ ಕೃತಿಗಳ ಲೋಕಾರ್ಪಣೆ ಮಾಡುವರು.ವಿಧಾನ ಪರಿಷತ್ತು ಸದಸ್ಯರಾದ ಅಬ್ದುಲ್ ಜಬ್ಬಾರ್ ಪ್ರೊ. ಎಸ್.ಬಿ. ರಂಗನಾಥ್ ಪುಸ್ತಕ ಮಳಿಗೆ ಉದ್ಘಾಟಿಸುವರು. ಜಗಳೂರು ಪಟ್ಟಣದ ಅಧ್ಯಕ್ಷರಾದ ಕೆ.ಎಸ್. ನವೀನ್ ಕುಮಾರ್ ಡಾ. ಎಂ.ಜಿ. ಈಶ್ವರಪ್ಪ ವಸ್ತು ಪ್ರದರ್ಶನ ಮಳಿಗೆ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಶಾಸಕರು ಸೇರಿದಂತೆ ವಿವಿಧ ಗಣ್ಯರು, ಸಂಘ ಸಂಸ್ಥೆಗಳ ಮುಖಂಡರು ಪಾಲ್ಗೊಳ್ಳುವರು. ಮಧ್ಯಾಹ್ನ ಗೋಷ್ಠಿಗಳು ಸಂಜೆ ಸನ್ಮಾನ, ಹಾಸ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ.- - - (ಸಾಂದರ್ಭಿಕ ಚಿತ್ರ)