ರಾಯಚೂರು: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಇದೇ ಅ.26ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ತಿಳಿಸಿದರು.

ಸ್ಥಳೀಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚುನಾವಣಾ ನೀತಿ ಸಂಹಿತೆ ನಿಯಮ ಪಾಲಿಸಿಕೊಂಡು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಅಥವಾ ವಾಲ್ಮೀಕಿ ಭವನದಲ್ಲಿ ಜಯಂತಿ ಆಚರಿಸಲು ಹಾಗೂ ಮೆರವಣಿಗೆ ಮಾಡುವ ಕುರಿತು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ. ವಾಲ್ಮೀಕಿ ಅವರ ಜೀವನ, ಆದರ್ಶ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆ ಸ್ಮರಿಸಲು ಆದ್ಯತೆ ನೀಡಲಾಗುವುದು ಎಂದರು.

ಅಂದು ಬೆಳಿಗ್ಗೆ 7.30ಕ್ಕೆ ಲಿಂಗಸುಗೂರು ರಸ್ತೆಯ ವಾಲ್ಮೀಕಿ ವೃತ್ತದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುತ್ತದೆ. ಬೆಳಿಗ್ಗೆ 11.30ಕ್ಕೆ ಮಹರ್ಷಿ ವಾಲ್ಮೀಕಿ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಸಿದ್ಧತೆಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಹರೀಶ್, ಜಿಪಂ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ ಸೇರಿ ವಾಲ್ಮೀಕಿ ಸಮಾಜದ ಮುಖಂಡರು, ವಕೀಲರು, ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ ವರ್ಗದವರು ಇದ್ದರು.