ಸಾರಾಂಶ
ಜಿಲ್ಲೆಯ ಕೈಗಾರಿಕಾ ಘಟಕಗಳ ಮೂಲಸೌಕರ್ಯಗಳು, ಕೈಗಾರಿಕೋದ್ಯಮಿಗಳ ಕುಂದುಕೊರತೆ, ಕೈಗಾರಿಕಾ ಪ್ರದೇಶಕ್ಕೆ ಸಂಬಂಧಿಸಿದ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಹಕಾರ ಸದಾ ಇರುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ದಾವಣಗೆರೆಯಲ್ಲಿ ಹೇಳಿದ್ದಾರೆ.
- ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಡಿಸಿ ಗಂಗಾಧರ ಸ್ವಾಮಿ- - - ಕನ್ನಡಪ್ರಭ ವಾರ್ತೆ ದಾವಣಗೆರೆ
ಜಿಲ್ಲೆಯ ಕೈಗಾರಿಕಾ ಘಟಕಗಳ ಮೂಲಸೌಕರ್ಯಗಳು, ಕೈಗಾರಿಕೋದ್ಯಮಿಗಳ ಕುಂದುಕೊರತೆ, ಕೈಗಾರಿಕಾ ಪ್ರದೇಶಕ್ಕೆ ಸಂಬಂಧಿಸಿದ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಹಕಾರ ಸದಾ ಇರುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದರು.ಡಿಸಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಚ್‌ಪಿಸಿ ಎಕೋ ರಿಸೈಕ್ಲೀನರ್ ಘಟಕವು ನಗರದ ಘನತ್ಯಾಜ್ಯ ವಸ್ತುಗಳಾದ ಸಾವಯವ ತ್ಯಾಜ್ಯ, ಪ್ಲಾಸ್ಟಿಕ್, ಚಪ್ಪಲಿ ತ್ಯಾಜ್ಯ, ಗಾಜಿನ ಬಾಟಲಿಗಳಂತಹ ವಸ್ತುಗಳನ್ನು ಮರುಬಳಕೆಗೆ ಹೆಚ್ಚಿನ ಪ್ರಮಾಣದಲ್ಲಿ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಕೈಗಾರಿಕೋದ್ಯಮಿಗಳು ಮಾತನಾಡಿ, ಲೋಕಿಕೆರೆ ರಸ್ತೆಯ ಕೆಎಸ್ಎಸ್ಐಡಿಸಿ ಕೈಗಾರಿಕಾ ವಸಹಾತು 2003ರಲ್ಲಿ ನಗರಸಭೆಗೆ ಹಸ್ತಾಂತರಗೊಂಡಿದೆ. ಅಂದಿನಿಂದಲೂ ನಗರಸಭೆ, ಮಹಾನಗರ ಪಾಲಿಕೆಗೆ ನಾವು ಕಂದಾಯ ಪಾವತಿಸುತ್ತಿದ್ದೇವೆ. ಹಸ್ತಾಂತರಗೊಂಡು 21 ವರ್ಷಗಳಾದರೂ ಮೂಲ ಸೌಕರ್ಯಗಳಾದ ರಸ್ತೆ, ಬೀದಿ ದೀಪ, ಒಳಚರಂಡಿ, ಇನ್ನಿತರೆ ಸಮಸ್ಯೆಗಳು ಬಗೆಹರಿದಿಲ್ಲ ಎಂದರು. ಆಗ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿ, ಸೂಕ್ತ ಕ್ರಮವಹಿಸಲು ತಿಳಿಸಲಾಗುವುದು ಎಂದು ಡಿಸಿ ಭರವಸೆ ನೀಡಿದರು. ಈ ಬಾರಿ ಪ್ರಸ್ತಾಪ ಆಗಿರುವ ಎಲ್ಲ ಸಮಸ್ಯೆಗಳಿಗೆ ಮುಂದಿನ ಸಭೆ ವೇಳೆಗೆ ಪರಿಹಾರ ಹುಡುಕಿಕೊಂಡು ಬರುವಂತೆಯೂ ಸೂಚಿಸಿದರು.ಸಭೆಯಲ್ಲಿ ಪಾಲಿಕೆ ಆಯುಕ್ತರಾದ ರೇಣುಕಾ, ಜಿಪಂ ಉಪ ಕಾರ್ಯದರ್ಶಿ ಕೃಷ್ಣನಾಯ್ಕ, ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
- - - -10ಕೆಡಿವಿಜಿ38ಃ:ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆ ನಡೆಯಿತು.