ಉದ್ಯೋಗ ಖಾತ್ರಿ ಕೆಲಸ ನೀಡುವಲ್ಲಿ ಜಿಲ್ಲಾಡಳಿತ ವಿಫಲ

| Published : May 17 2024, 12:38 AM IST

ಸಾರಾಂಶ

ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಯಕ್ತಾಪೂರ ಗ್ರಾಮ ಪಂಚಾಯಿತಿ ನರೇಗಾದಡಿ ಕೆಲಸ ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಸುರಪುರ

ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಸಮರ್ಪಕವಾಗಿ ಕೆಲಸ ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ತಾಲೂಕಿನ ಕೆಂಭಾವಿ ಸಮೀಪದ ಯಕ್ತಾಪುರ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಚನ್ನಪ್ಪ ಆನೆಗುಂದಿ ಮಾತನಾಡಿ, ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ನಮ್ಮ ಅನ್ನದಾತರ ಬದುಕು ಬರಡಾಗಿದೆ. ಜಿಲ್ಲೆಯಲ್ಲಿ ಭೂರಹಿತ ಬಡವರು ತಮ್ಮ ಮನೆ, ಮಠ ತೊರೆದು ವಲಸೆ ಹೋಗುತ್ತಿದ್ದರೂ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ನೀಡಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಕ್ತಾಪುರ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಖಾತ್ರಿಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದ್ದು, ಶ್ರಮವಹಿಸಿ ಕೂಲಿ ಮಾಡಿದ ವ್ಯಕ್ತಿಗೆ ಸಿಗಬೇಕಾದ ಕನಿಷ್ಠ ಕೂಲಿ ನೀಡದೆ ಪ್ರಭಾವಿ ವ್ಯಕ್ತಿಗಳಿಗೆ ಕೂಲಿ ಹಣ ಸಂದಾಯವಾಗುತ್ತಿದೆ. ಇದನ್ನು ತಡೆಗಟ್ಟಲು ಅಧಿಕಾರಿಗಳೂ ಸಂಪೂರ್ಣ ವಿಫಲರಾಗಿದ್ದಾರೆ ಎಂದರು.

ಕೂಲಿ ಹಣ ಪಾವತಿ ಮಾಡುವಾಗ ಕೂಲಿ ಹಣ ಕಡಿತಗೊಳಿಸದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಎಲ್ಲ ಕೂಲಿ ಕಾರ್ಮಿಕರಿಗೆ ಸರಿಸಮಾನ ವೇತನ ನೀಡಬೇಕು, ಬೇಸಿಗೆಯಲ್ಲಿ ಕೂಲಿ ಧನ ಹೆಚ್ಚಳ ಮಾಡಬೇಕು ಅಥವಾ ಸಮಯ ಕಡಿತಗೊಳಿಸಬೇಕು, ಕೆಲಸ ನಡೆಯುವ ಸ್ಥಳದಲ್ಲಿ ಕುಡಿವ ನೀರಿನ ಮತ್ತು ನೆರಳಿನ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ನಂತರ ಸರುಪುರ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ್‌ ಅವರ ಮೂಲಕ ಜಿಪಂ ಸಿಇಒ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ವೇಳೆ ರಾಮನಗೌಡ ಗೂಗಲ್, ರಾಮಯ್ಯ ಆಲ್ದಾಳ, ಶಿವಶಂಕರ ಹೊಸಮನಿ, ಸಿದ್ದು ನಾಯ್ಕೋಡಿ, ಮಡಿವಾಳಪ್ಪ ಆಲಗೂರ, ಈರಗಂಟೆಪ್ಪ, ವೀರೇಶ ನಾಯ್ಕೋಡಿ, ವೀರೇಶ ಕುಂಬಾರರೇಣ ಕಾಚಾರ್ಯ, ಸುರೇಶ ಮಾಳೂರ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

-----

ಚಿತ್ರ: 16ವೈಡಿಆರ್14

ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಯಕ್ತಾಪೂರ ಗ್ರಾಮ ಪಂಚಾಯಿತಿ ನರೇಗಾದಡಿ ಕೆಲಸ ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಯಕ್ತಾಪೂರ ಗ್ರಾಮ ಪಂಚಾಯಿತಿ ನರೇಗಾದಡಿ ಕೆಲಸ ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.