ಸಾರಾಂಶ
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಯಶವಂತ್.ವಿ.ಗುರುಕರ್ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣಾಧಿಕಾರಿಯಾಗಿ ಉಪ ವಿಭಾಗಾಧಿಕಾರಿ ಬಿನೋಯ್ ಅವರನ್ನು ನಿಯೋಜಿಸಲಾಗಿದ್ದು, ಮಂಗಳವಾರ ಸಂಜೆಯಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ತಂಡಗಳನ್ನು ರಚಿಸಲಾಗಿದೆ ಎಂದರು.16 ಚೆಕ್ ಪೋಸ್ಟ್ ಗಳ ಸ್ಥಾಪನೆ :
ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ 16 ಕಡೆ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 9, ಮಾಗಡಿ ತಾಲೂಕಿನಲ್ಲಿ 4, ರಾಮನಗರ ತಾಲೂಕಿನಲ್ಲಿ 2 ಹಾಗೂ ಕನಕಪುರ ತಾಲೂಕಿನಲ್ಲಿ 1 ಚೆಕ್ ಪೋಸ್ಟ್ ಅನ್ನು ಸ್ಥಾಪಿಸಲಾಗಿದೆ. ಜಿಲ್ಲಾಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿದ್ದು, ತಮಿಳುನಾಡಿನಿಂದ ಸಂಪರ್ಕ ಕಲ್ಪಿಸುವ ಕನಕಪುರ ತಾಲೂಕಿನ ಗಡಿ ಪ್ರದೇಶದಲ್ಲಿ ಒಂದು ಅಂತರಾಜ್ಯ ಗಡಿ ಚೆಕ್ ಪೋಸ್ಟ್ ಸ್ಥಾಪಿಸಿರುವುದಾಗಿ ತಿಳಿಸಿದರು.ಕಟ್ಟನಿಟ್ಟಾಗಿ ನೀತಿ ಸಂಹಿತೆ ಜಾರಿಗೆ ತರುವ ಉದ್ದೇಶದಿಂದ, ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ 22 ತಂಡ 16 ಎಸ್ಎಸ್ಟಿ ತಂಡ,7 ಎಫ್ಎಸ್ಟಿ ತಂಡಗಳನ್ನು ರಚಿಸಲಾಗಿದೆ. ಈ ತಂಡ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಕಣ್ಗಾವಲಿರಿಸಲಿದೆ ಎಂದು ಹೇಳಿದರು.
ಸಭೆ ಸಮಾರಂಭಕ್ಕೆ ಅನುಮತಿ ಕಡ್ಡಾಯ:ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಸಭೆ ಸಮಾರಂಭ ನಡೆಸಲು ಅನುಮತಿ ಕಡ್ಡಾಯವಾಗಿರುತ್ತದೆ. ಸಾರ್ವಜನಿಕ ಸಮಾರಂಭಗಳನ್ನು ನಡೆಸಿ ಯಾವುದೇ ಉಡುಗೊರೆ, ಬಹುಮಾನ ವಿತರಿಸುವಂತಿಲ್ಲ. ಮದುವೆ ಮೊದಲಾದ ಕೌಟುಂಬಿಕ ಕಾರ್ಯಕ್ರಮಗಳಿಗೆ ಅವಕಾಶವಿದ್ದು, ಬಾಡೂಟ ಆಯೋಜಿಸಬೇಕಾದಲ್ಲಿ ಚುನಾವಣಾಧಿಕಾರಿಯಿಂದ ಅನುಮತಿ ಪಡೆಯಬಹುದಾಗಿದೆ. ಸಾರ್ವಜನಿಕವಾಗಿ ಬಾಡೂಟ ವಿತರಣೆ ಮಾಡಿದರೆ ಕ್ರಮ ಜರುಗಿಸಲಾಗುವುದು ಎಂದು ಯಶವಂತ್ ಎಚ್ಚರಿಸಿದರು.
5 ಮತಗಟ್ಟೆ ಹೆಚ್ಚಳ:ಲೋಕಸಭಾ ಚುನಾವಣೆಯ ಸಮಯದಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 271 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಈಬಾರಿ 276 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಮತದಾರರ ಸಂಖ್ಯೆಯನ್ನು ಆಧರಿಸಿ 5 ಹೊಸ ಮತಗಟ್ಟೆಗಳನ್ನು ರಚನೆ ಮಾಡಲಾಗಿದೆ. ಚನ್ನಪಟ್ಟಣ ನಗರಪ್ರದೇಶದಲ್ಲಿ 62 ಮತಗಟ್ಟೆಗಳು,214 ಮತಗಟ್ಟೆಗಳು ಗ್ರಾಮಾಂತರ ಭಾಗದಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಿದರು.
2.32 ಲಕ್ಷ ಮತದಾರರು:ಚನ್ನಪಟ್ಟಣ ಉಪಚುನಾವಣೆಯಲ್ಲಿ ಈಬಾರಿ 2,32,836 ಮಂದಿ ನೋಂದಾಯಿತ ಮತದಾರರಿದ್ದು, ಇವರಲ್ಲಿ 1,12,271 ಮಂದಿ ಪುರುಷರು,1,20,557 ಮಂದಿ ಮಹಿಳೆಯರು, 8 ಮಂದಿ ಇತರ ಮದಾರರು ಒಳಗೊಂಡಿದ್ದಾರೆ. 85 ವರ್ಷಕ್ಕೆ ಮೇಲ್ಪಟ್ಟ1613 ಮಂದಿ ಹಿರಿಯ ಮತದಾರರು, 3011 ಮಂದಿ ವಿಶೇಷ ಚೇತನ ಮತದಾರರು, 8338 ಮಂದಿ 19 ವರ್ಷದೊಳಗಿನ ಯುವ ಮತದಾರರು, 47 ಮಂದಿ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾಮತದಾರರು ಇದ್ದಾರೆ ಎಂದು ಯಶವಂತ್ ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಹಾಜರಿದ್ದರು.ಕೋಟ್............
ಸಾಮಾಜಿಕ ಜಾಲತಾಣಗಳಿಗೆ ಎಚ್ಚರಿಕೆಉಪಚುನಾವಣೆಯಲ್ಲಿ ಕೆಲ ಸಾಮಾಜಿಕ ಜಾಲತಾಣಗಳು, ಯೂಟೂಬ್ ಚಾನಲ್ ಗಳು ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡುವುದು ಮೊದಲಾದ ಕಾರ್ಯಗಳಲ್ಲಿ ತೊಡಗಿಕೊಂಡಲ್ಲಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಮಾಧ್ಯಮಗಳಲ್ಲಿ ಜಾಹೀರಾತು ರೂಪದ ಸುದ್ದಿ ಪ್ರಕಟಿಸಬೇಕಾದಲ್ಲಿ ಜಿಲ್ಲಾ ಮಾಧ್ಯಮ ಸಮಿತಿಯ ಅನುಮತಿ ಪಡೆದು ಪ್ರಕಟಿಸಬೇಕು.
- ಯಶವಂತ್ ವಿ.ಗುರುಕರ್ , ಜಿಲ್ಲಾ ಚುನಾವಣಾಧಿಕಾರಿ, ರಾಮನಗರಬಾಕ್ಸ್.............
ಜಿಲ್ಲೆಯಿಂದ 17 ಮಂದಿ ಗಡಿಪಾರು: ಎಸ್ಪಿ ಕಾರ್ತಿಕ್ ರೆಡ್ಡಿರಾಮನಗರ: ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ರೌಡಿಶೀಟರ್ ಗಳ ಪೆರೇಡ್ ನಡೆಸಲು ಸೂಚಿಸಿದ್ದು, 17 ಮಂದಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡಲು ಸೂಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಇಬ್ಬರು ಬೀದರ್ ಜಿಲ್ಲೆಗೆ ಗಡಿಪಾರಾಗಿದ್ದು, ಉಳಿದ 15 ಮಂದಿ ಗಡೀಪಾರಿಗೆ ಆದೇಶ ನೀಡುವಂತೆ ಜಿಲ್ಲಾಧಿಕಾರಿಗೆ ಶಿಫಾರಸ್ಸು ಮಾಡಲಾಗಿದೆ. ಈಗಾಗಲೇ ಗಡಿಪಾರು ಅವಧಿ ಇನ್ನು 15 ದಿನ ಇರುವಾಗಲೇ ಜಿಲ್ಲೆಗ ಪ್ರವೇಶಿಸಿದ್ದ ಒಬ್ಬ ವ್ಯಕ್ತಿಯ ವಿರುದ್ಧ ಶಿಸ್ತುಕ್ರಮ ಜರುಗಿಸಿ ಮತ್ತೆ 6 ತಿಂಗಳ ಕಾಲ ಜಿಲ್ಲೆಯಿಂದ ಗಡೀಪಾರು ಮಾಡಲಾಗಿದೆ ಎಂದರು.15 ಪ್ರಕರಣ ದಾಖಲು:
ಕಳೆದ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ 15 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಇದರಲ್ಲಿ ಒಂದು ಪ್ರಕರಣಕ್ಕೆ ಮಾತ್ರ ಎಫ್ಎಸ್ಎಲ್ ವರದಿ ಬರಬೇಕಿದೆ. ಉಳಿದಂತೆ 11 ಪ್ರಕರಣಗಳ ದೂಷಾರೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. 1 ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋಟ್ ಸಲ್ಲಿಸಿದ್ದು, ಇನ್ನು ಎರಡು ಪ್ರಕರಣದಲ್ಲಿ ಸಿ ರಿಪೋರ್ಟ್ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.ಜಿಲ್ಲೆಯಲ್ಲಿ ಶಸ್ತ್ರಾಸ್ತ್ರಗಳನ್ನು ಹೊಂದಿರುವವರು ಹಿಂತಿರುಗಿಸಬೇಕಿದ್ದು, ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ ಕೂಡಲೇ ಹಿಂಪಡೆಯಲಾಗುವುದು. ವಿವಿಧ ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ಗಳಲ್ಲಿರುವ ಶಸ್ತ್ರಾಸ್ತ್ರಗಳನ್ನ ಪಡೆದುಕೊಳ್ಳಲು ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯಲ್ಲಿ ಇದಕ್ಕೆ ಅನುಮತಿ ಪಡೆಯಬೇಕಿದೆ ಎಂದು ತಿಳಿಸಿದರು.
ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಈ ಅವಧಿಯಲ್ಲಿ ವ್ಯಕ್ತಿಯೊಬ್ಬರು ಗರಿಷ್ಠ 50,000 ರು.ಗಳ ನಗದನ್ನು ಸಾಗಿಸಬಹುದಾಗಿದೆ. ಅದಕ್ಕೂ ಹೆಚ್ಚಿನ ಮೊತ್ತ ಕೊಂಡೊಯ್ಯಬೇಕಾದರೆ ಅಗತ್ಯ ದಾಖಲಾತಿಗಳನ್ನು ಹೊಂದಿರಬೇಕು. ಜಿಲ್ಲೆಯಲ್ಲಿ ಈಗಾಗಲೇ 10 ಪ್ಯಾರಾ ಮಿಲಿಟರಿ ಫೋರ್ಸ್ ನಿಯೋಜಿಸುವಂತೆ ಮನವಿ ಸಲ್ಲಿಸಲಾಗಿದ್ದು, 650 ಜನ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಕಾರ್ತಿಕ್ ರೆಡ್ಡಿ ಹೇಳಿದರು.16ಕೆಆರ್ ಎಂಎನ್ 3.ಜೆಪಿಜಿ
ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸುದ್ದಿಗೋಷ್ಠಿ ನಡೆಸಿದರು.