ಸಾರಾಂಶ
ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ ಆಯಾ ರಾಜ್ಯಗಳಿಗೆ ಈ ಪರೀಕ್ಷೆಗಳನ್ನು ನಡೆಸಲು ಅಧಿಕಾರ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಚಾಮರಾನಗರದ ಜಿಲ್ಲಾಡಳಿತ ಭವನದಲ್ಲಿ ಉಪ ಕಾರ್ಯದರ್ಶಿ ಲಕ್ಷ್ಮೀ ಅವರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಆಯಾ ರಾಜ್ಯಗಳಿಗೆ ಈ ಪರೀಕ್ಷೆಗಳ ನಡೆಸಲು ಅಧಿಕಾರ ನೀಡುವಂತೆ ಆಗ್ರಹಿಸಿ ಮನವಿ ಸಲ್ಲಿಕೆಕನ್ನಡಪ್ರಭ ವಾರ್ತೆ ಚಾಮರಾಜನಗರ
ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ನಡೆಸಲಾಗುತ್ತಿರುವ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ ಆಯಾ ರಾಜ್ಯಗಳಿಗೆ ಈ ಪರೀಕ್ಷೆಗಳನ್ನು ನಡೆಸಲು ಅಧಿಕಾರ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾಪಡೆ ವತಿಯಿಂದ ನಗರದ ಜಿಲ್ಲಾಡಳಿತ ಭವನದಲ್ಲಿ ಉಪ ಕಾರ್ಯದರ್ಶಿ ಲಕ್ಷ್ಮೀ ಅವರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಹಿಂದೆ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸುತ್ತಿದ್ದು ಪರೀಕ್ಷೆಗಳು ಆಯಾ ರಾಜ್ಯ ಸಂಬಂಧಪಟ್ಟದ್ದಾಗಿದ್ದವು. ಕಳೆದ ದಶಕಗಳಿಂದ ಕೇಂದ್ರ ಸರ್ಕಾರವು ನೀಟ್ ಎಂಬ ಹೆಸರಿನಲ್ಲಿ ವೈದ್ಯಕೀಯ ಶಿಕ್ಷಣ ಪರೀಕ್ಷೆಗಳನ್ನು ದೇಶಾದ್ಯಂತ ನಡೆಸುತ್ತಿರುವುದು ಸರಿಯಷ್ಟೆ ಆದರೆ ಈ ಸಾರಿಯ ನೀಟ್ ಪರೀಕ್ಷೆಯಲ್ಲಿ ಭಾರಿ ತಾಂತ್ರಿಕ ದೋಷವಾಗಿ ಲಕ್ಷಾಂತರ ಅರ್ಹ ವಿದ್ಯಾರ್ಥಿಗಳು ಈ ವೈದ್ಯಕೀಯ ಶಿಕ್ಷಣ ಪ್ರವೇಶದಿಂದ ವಂಚಿತರಾಗಿದ್ದಾರೆ ಎಂದು ದೂರಿದರು.
ಈಗಾಗಲೇ ಇದರ ಸಂಬಂಧ ನಮ್ಮ ಕರ್ನಾಟಕ ರಾಜ್ಯದ ನೀಟ್ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಮತ್ತು ಈ ಸಾರಿಯ ನೀಟ್ ಪರೀಕ್ಷೆಯಲ್ಲಿ ಭಾರಿ ಮಟ್ಟದ ಭ್ರಷ್ಟಾಚಾರ ನಡೆದಿರುವ ಶಂಕೆ ಇದೆ. ಮತ್ತು ಇದು ಇದೇ ರೀತಿ ಮುಂದುವರೆದರೆ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಬಹಳ ತೊಂದರೆಯಾಗಲಿದೆ. ಮತ್ತು ಅವರು ಶಾಶ್ವತವಾಗಿ ಈ ವೈದ್ಯಕೀಯ ಶಿಕ್ಷಣ ಪ್ರವೇಶದಿಂದ ಹೊರಗುಳಿಯಲಿದ್ದಾರೆ. ಈಗಾಗಲೇ ಈ ನೀಟ್ ಪರೀಕ್ಷೆಯನ್ನು ಕರ್ನಾಟಕ, ತಮಿಳುನಾಡು ರಾಜ್ಯವು ಸೇರಿದಂತೆ ಹಲವಾರು ರಾಜ್ಯಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದೆ. ಆದ್ದರಿಂದ ರಾಷ್ಟ್ರಪತಿಗಳಾದ ತಾವು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಈ ರಾಷ್ಟ್ರಮಟ್ಟದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ ಈ ಪರೀಕ್ಷೆಗಳನ್ನು ನಡೆಸಲು ಆಯಾ ರಾಜ್ಯಗಳಿಗೆ ಅಧಿಕಾರ ನೀಡಬೇಕು. ಇದಕ್ಕೆ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಸಲ್ಲಿಸಿರುವ ಮನವಿಯಲ್ಲಿ ಚಾ.ರಂ. ಶ್ರೀನಿವಾಸಗೌಡ ಒತ್ತಾಯಿಸಿದರು.ಈ ಸಂದರ್ಭದಲ್ಲಿ ನಿಜಧ್ವನಿ ಗೋವಿಂದರಾಜು, ಪಣ್ಯದಹುಂಡಿ ರಾಜು, ಮಹೇಶ್ ಗೌಡ, ಗು.ಪುರುಷೋತ್ತಮ,ಚಾ.ರಾ.ಕುಮಾರ್, ನಂಜುಂಡಶೆಟ್ಟಿ, ರಾಜಪ್ಪ, ಲಿಂಗರಾಜು, ಚಾ.ಸಿ.ಸಿದ್ದರಾಜು, ಇತರರು ಹಾಜರಿದ್ದರು.