ಸಂತಮೇರಿ ಆಂಗ್ಲ ಮಾಧ್ಯಮ ಶಾಲಾ 14ರ ವಯೋಮಾನದ ಬಾಲಕಿಯರ ತಂಡವು ಜಿಲ್ಲಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಸಂತಮೇರಿ ಆಂಗ್ಲ ಮಾಧ್ಯಮ ಶಾಲಾ 14ರ ವಯೋಮಾನದ ಬಾಲಕಿಯರ ತಂಡವು ಜಿಲ್ಲಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.ಸೋಮವಾರ ಜಿಲ್ಲಾ ಮಟ್ಟದ 14ರ ವಯೋಮಾನದವರಿಗೆ ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು ಕೊಡಗರಹಳ್ಳಿ ಶಾಂತಿನಿಕೇತನ ಶಾಲೆಯಲ್ಲಿ ಆಯೋಜಿಸಲಾಗಿದ್ದು, ಪಂದ್ಯಾವಳಿಯಲ್ಲಿ ಜಿಲ್ಲೆಯ 5 ತಾಲೂಕು ತಂಡಗಳು ಭಾಗವಹಿಸಿದ್ದು ಸಂತ ಮೇರಿ ಆಂಗ್ಲ ಮಾಧ್ಯಮ ಬಾಲಕಿಯರ ತಂಡವು ಮಡಿಕೇರಿ ತಾಲೂಕು ತಂಡವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಪಡೆದು ವಿಭಾಗಿಯ ಮಟ್ಟಕ್ಕೆ ಆಯ್ಕೆಗೊಂಡಿತು.