ಅಮಿತ್ ಶಾ ವಿರುದ್ಧ ಜಿಲ್ಲಾ ವಕೀಲರ ಸಂಘ ಪ್ರತಿಭಟನೆ

| Published : Dec 22 2024, 01:32 AM IST

ಅಮಿತ್ ಶಾ ವಿರುದ್ಧ ಜಿಲ್ಲಾ ವಕೀಲರ ಸಂಘ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯಸಭೆಯಲ್ಲಿ ಡಾ.ಬಿ.ಆ‌ರ್.ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿಶ್ ಶಾ ವಿರುದ್ಧ ಜಿಲ್ಲಾ ವಕೀಲರ ಸಂಘದ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆ‌ರ್.ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿಶ್ ಶಾ ವಿರುದ್ಧ ಜಿಲ್ಲಾ ವಕೀಲರ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ವಕೀಲರ ಸಂಘದ ಸಭಾಂಗಣದಲ್ಲಿ ಸಭೆ ಸೇರಿದ ವಕೀಲರು ನ್ಯಾಯಾಲಯದ ಕಲಾಪದಿಂದ ಹೊರಗುಳಿಯಲು ತೀರ್ಮಾನಿಸಿದರು. ಬಳಿಕ ಅಲ್ಲಿಂದ ಬೈಕ್ ರ್‍ಯಾಲಿ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಲ್ಲಾ ವಕೀಲರ ಸಂಘದ ಜಿಲ್ಲಾಧ್ಯಕ್ಷ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ನಂಜಯ್ಯ ಮಾತನಾಡಿ, ರಾಜ್ಯಸಭೆಯಲ್ಲಿ ಡಾ.ಅಂಬೇಡ್ಕರ್‌ರನ್ನು ಅವಮಾನಿಸುವಂತಹ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿಶ್ ಶಾ ಅವರ ವಿರುದ್ಧ ಕ್ರಮ ವಹಿಸದಿರುವುದು ಕೇಂದ್ರ ಸರ್ಕಾರಕ್ಕೆ ಒಂದು ಕಪ್ಪು ಚುಕ್ಕಿಯಾಗಿದೆ. ಅವರನ್ನು ಕೇಂದ್ರ ಸಚಿವ ಸಂಪುಟ, ಸಂಸದ ಸ್ಥಾನದಿಂದ ವಜಾಗೊಳಿಸಿ ದೇಶದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ದೊಡ್ಡಮೋಳೆ ರಂಗಸ್ವಾಮಿ, ಮಾಜಿ ಅಧ್ಯಕ್ಷ ಪುಟ್ಟಸ್ವಾಮಿ ರಾಮಸಮುದ್ರ, ವಕೀಲರಾದ ದಲಿತ್‌ರಾಜ್, ನೋಟರಿ ನಾಗಣ್ಣ, ಮಾದೇಶ್, ಪೃಥ್ವಿ ನಾಗಾರ್ಜುನ, ಸುಂದರ್,ಶ್ರೀನಿವಾಸ, ಮಹೇಂದ್ರ, ವನಜಾಕ್ಷಿ, ಶ್ವೇತ, ಮಲ್ಲು, ಜಗದೀಶ್, ಮಾದೇಶ್ ಇತರರು ಭಾಗವಹಿಸಿದ್ದರು.