ನೇಹಾ ಹತ್ಯೆ ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ

| Published : Apr 23 2024, 01:47 AM IST

ನೇಹಾ ಹತ್ಯೆ ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣದ ತನಿಖೆ ಇನ್ನೂ ಪ್ರಗತಿಯ ಹಂತದಲ್ಲಿರುವಾಗಲೇ ಮುಖ್ಯಮಂತ್ರಿ, ಗೃಹ ಮಂತ್ರಿ ಅದಕ್ಕೆ ಬೇರೆ ರೀತಿಯ ಬಣ್ಣ ಹಚ್ಚುವ ಕೆಲಸ ಮಾಡಿ, ತನಿಖೆಯ ದಾರಿ ತಪ್ಪಿಸಿ, ಒಂದು ಕೋಮಿನ ಜನರನ್ನು ಓಲೈಕೆ ಮಾಡುತ್ತಿರುವುದು ಹೇಯಕೃತ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಗದಗ

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ದುರಾಡಳಿತ ಮತ್ತು ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಗದಗ ನಗರದ ಕಾರ್ಯಪ್ಪ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಲಾಯಿತು.

ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣದ ತನಿಖೆ ಇನ್ನೂ ಪ್ರಗತಿಯ ಹಂತದಲ್ಲಿರುವಾಗಲೇ ಮುಖ್ಯಮಂತ್ರಿ, ಗೃಹ ಮಂತ್ರಿ ಅದಕ್ಕೆ ಬೇರೆ ರೀತಿಯ ಬಣ್ಣ ಹಚ್ಚುವ ಕೆಲಸ ಮಾಡಿ, ತನಿಖೆಯ ದಾರಿ ತಪ್ಪಿಸಿ, ಒಂದು ಕೋಮಿನ ಜನರನ್ನು ಓಲೈಕೆ ಮಾಡುತ್ತಿರುವುದು ಹೇಯಕೃತ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ 8 ಕೊಲೆಗಳಾಗಿವೆ. ಈ ಘಟನೆಗಳು ರಾಜ್ಯದ ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ರಾಜ್ಯದ ಜನರು ಭಯದಲ್ಲಿ ಕಾಲ ಕಳೆಯುತ್ತಿದ್ದಾರೆ. ಕಾನೂನು ಕೈಗೆ ತೆಗೆದುಕೊಳ್ಳುವವರನ್ನು ಸರ್ಕಾರ ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ಮಾಡುವ ಮೂಲಕ ಪರೋಕ್ಷವಾಗಿ ಅವರ ಬೆನ್ನಿಗೆ ನಿಲ್ಲುತ್ತಿರುವುದರಿಂದಾಗಿ ಈ ರೀತಿಯ ಘೋರ ಘಟನೆಗಳು ನಡೆಯುತ್ತಿವೆ.

ಅಲ್ಪ ಸಂಖ್ಯಾತರ ತುಷ್ಟೀಕರಣ, ಹಿಂದೂಗಳ ಮೇಲಿನ ನಿರಂತರ ಹಲ್ಲೆಗಳು, ದ್ವೇಷದ ರಾಜಕಾರಣಕ್ಕೆ ಅಮಾಯಕ ಹಿಂದೂ ಹೆಣ್ಣು ಮಕ್ಕಳ ಬಲಿ, ಜೈ ಶ್ರೀರಾಮ ಘೋಷಣೆ ಕೂಗಿದವರ ಮೇಲೆ ಹಲ್ಲೆ, ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದರೆ ಅವರಿಗೆ ಪುರಸ್ಕಾರ ಹೀಗೆ ಮತೀಯ ಭಾವನೆಯನ್ನು ಸರ್ಕಾರವೇ ಮುಂದು ನಿಂತು ಕೆರಳಿಸುತ್ತಿದ್ದು, ಇದನ್ನು ಬಿಜೆಪಿ ಉಗ್ರವಾಗಿ ಖಂಡಿಸುತ್ತದೆ ಎಂದರು.

ಕಾನೂನು ಸುವ್ಯವಸ್ಥೆ ಪಾಲಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದರಿಂದ ಜನರು ನಿತ್ಯವೂ ಭಯದಲ್ಲಿಯೇ ಬದುಕುವಂತಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಈ ಸಂದರ್ಭದಲ್ಲಿ ಹಲವಾರು ಮುಖಂಡರು, ಕಾರ್ಯಕರ್ತರು, ಮಹಿಳಾ ಪದಾಧಿಕಾರಿಗಳು, ನಗರಸಭೆಯ ಸದಸ್ಯರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಆನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅನಿಲ ಮೆಣಸಿನಕಾಯಿ, ಬಸವರಾಜ ಇಟಗಿ, ಜಿಲ್ಲಾ ವಕ್ತಾರ ಎಂ.ಎಂ. ಹಿರೇಮಠ, ರಾಜು ಕುಲಕರ್ಣಿ, ನಿಕಟ ಪೂರ್ವ ಅಧ್ಯಕ್ಷ, ಎಂ.ಎಸ್. ಕರಿಗೌಡರ, ಅನಿಲ ಅಬ್ಬಿಗೇರಿ, ಜಗನ್ನಾಥಸಾ ಭಾಂಡಗೆ, ಸುರೇಶ ಚಿತ್ತರಗಿ, ಭದ್ರೇಶ ಕುಸ್ಲಾಪುರ, ಬಾಬು ಸುಂಕದ, ದ್ಯಾಮಣ್ಣ ನೀಲಗುಂದ, ಪ್ರಧಾನ ಕಾರ್ಯದರ್ಶಿಗಳಾದ ಲಿಂಗರಾಜ ಪಾಟೀಲ, ಆರ್.ಕೆ. ಚವ್ವಾಣ, ಫಕ್ಕಿರೇಶ ರಟ್ಟಿಹಳ್ಳಿ, ವೀರಣ್ಣ ಅಂಗಡಿ, ಸಂತೋಷ ಅಕ್ಕಿ, ಪುನೀತ್ ಬೆನಕನವಾರಿ, ರವಿ ನೆರೆಗಲ್, ರವಿ ದಂಡಿನ, ಮಾಧ್ಯಮ ಸಂಚಾಲಕ ರಾಜೇಂದ್ರಪ್ರಸಾದ ಹೊನ್ನಗಲ್, ಕಾನೂನು ಪ್ರಕೋಷ್ಠದ ಜಿಲ್ಲಾ ಸಂಚಾಲಕ ಕೆ.ಪಿ. ಕೋಟಿಗೌಡರ, ಡಿ.ಬಿ. ಕರೀಗೌಡ್ರ, ಅಶೋಕ ಕರೂರ, ರಾಘವೇಂದ್ರ ಯಳವತ್ತಿ, ಮಂಜುನಾಥ ಶಾಂತಗೇರಿ, ನಿಂಗಪ್ಪ ಹುಗ್ಗಿ, ವಂದನಾ ವರ್ಣೇಕರ್, ಶಶಿಧರ ದಿಂಡೂರ, ವಿಜಯಲಕ್ಷ್ಮೀ ಮಾನ್ವಿ, ಅಶ್ವಿನಿ ಜಗತಾಪ, ರೇಖಾ ಬಂಗಾರಶೆಟ್ಟರ, ನಿರ್ಮಲಾ ಕೊಳ್ಳಿ, ಸ್ವಾತಿ ಅಕ್ಕಿ, ಉಷಾ ದಾಸರ, ಪದ್ಮಾ ಮುತ್ತಲದಿನ್ನಿ, ರವಿ ವಗ್ಗನವರ, ರಮೇಶ ಸಜ್ಜಗಾರ, ಅಮರನಾಥ ಬೆಟಗೇರಿ, ಅಶ್ವಿನಿ ಅಂಕಲಕೋಟಿ, ಪವಿತ್ರಾ ಕಲ್ಕುಟರ, ಜ್ಯೋತಿ ಪಾಯಪ್ಪಗೌಡ್ರ, ಪಾರ್ವತಿ ಪಟ್ಟಣಶೆಟ್ಟಿ, ಕಮಲಾಕ್ಷಿ ಗೊಂದಿ, ವಿದ್ಯಾವತಿ ಗಡಗಿ, ಪಾರ್ವತಿ ಪಟ್ಟಣಶೆಟ್ಟಿ, ರತ್ನಾ ಕುರಗೊಡ, ಸುಧೀರ ಕಾಟಿಗಾರ, ವಿನಾಯಕ ಹಬೀಬ, ನಾಗರಾಜ ತಳವಾರ, ವಿನೋದ ಹೌಸನೂರು ಇದ್ದರು.