ಸಾರಾಂಶ
ಸರ್ದಾರ್ ವಲ್ಲಭಬಾಯಿ ಪಟೇಲ್ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ
ಕನ್ನಡಪ್ರಭ ವಾರ್ತೆ ಮೈಸೂರು
ಜಿಲ್ಲಾ ಬ್ರಾಹ್ಮಣ ಮಹಾಸಭಾ, ಸಂಧ್ಯಾ ಸುರಕ್ಷಾ ಟ್ರಸ್ಟ್, ಶಾಕಾಂಬರಿ ಧಾರ್ಮಿಕ ಶ್ರದ್ಧಾಕೇಂದ್ರ ಹಾಗೂ ಕರ್ನಾಟಕ ಬ್ರಾಹ್ಮಣ ಹಿರಿಯ ನಾಗರೀಕರ ವೇದಿಕೆ ಸಂಯುಕ್ತವಾಗಿ ಆ.15ರ ಬೆಳಗ್ಗೆ 11ಕ್ಕೆ ಶ್ರೀರಾಂಪುರ ಹುಣಸೆ ಮರದ ಹತ್ತಿರದ ದೇವಯ್ಯನಹುಂಡಿ ಮುಖ್ಯ ರಸ್ತೆಯ ಭಾರತ ಮಾತಾ ಧ್ವಜಕಟ್ಟೆಯಲ್ಲಿ 77ನೇ ಸ್ವಾತಂತ್ರ್ಯ ದಿನ ಆಚರಿಸಲಾಗುವುದು ಎಂದು ಹಿರಿಯ ಸಮಾಜ ಸೇವಕ ಕೆ. ರಘುರಾಂ ತಿಳಿಸಿದರು.ಈ ವೇಳೆ ನಿವೃತ್ತ ಲೋಕಾಯುಕ್ತ ಸಂತೋಷ್ ಎನ್. ಹೆಗ್ಡೆ ಅವರಿಗೆ ಸರ್ದಾರ್ ವಲ್ಲಭಬಾಯಿ ಪಟೇಲ್ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಶಾಸಕ ಟಿ.ಎಸ್. ಶ್ರೀವತ್ಸ, ವಿಶ್ರಾಂತ ಕುಲಪತಿ ಡಾ.ಎಂ. ಚಿದಾನಂದಗೌಡ ಮೊದಲಾದವರು ಪಾಲ್ಗೊಳ್ಳುವರು ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷ ಬಿ.ಆರ್. ನಟರಾಜ ಜೋಯಿಸ್, ಲತಾ ಮೋಹನ್ ಇದ್ದರು.