ಸಾರಾಂಶ
ಬಿ.ಜೆ.ಪಿ.ಮತ್ತು ಸಹಕಾರ ಭಾರತಿ ನೇತೃತ್ವಕ್ಕೆ 17 ಸಹಕಾರ ಸಂಘಗಳಲ್ಲಿ ಗೆಲುವು
ಕನ್ನಡಪ್ರಭ ವಾರ್ತೆ, ತರೀಕೆರೆಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಪ್ರಸಕ್ತ ವರ್ಷದಲ್ಲಿ ₹ 7.4ಕೋಟಿ ಲಾಭಗಳಿಸಿದೆ ಎಂದು ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್. ಸುರೇಶ್ ಹೇಳಿದರು.
ಸೋಮವಾರ ಮಾಜಿ ಶಾಸಕ ಡಿ.ಎಸ್.ಸುರೇಶ್ ಅವರ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮತ್ತು ಸಹಕಾರ ಭಾರತಿ ನೇತೃತ್ವದಲ್ಲಿ ವಿವಿಧ ಸಹಕಾರ ಸಂಘ ಗೆಲುವು ಸಾಧಿಸಿದವರನ್ನು ಅಭಿನಂದಿಸಿ ಮಾತನಾಡಿದರು. ರಾಜ್ಯದಲ್ಲಿ ಉತ್ತಮ ಅಡಳಿತಕ್ಕಾಗಿ ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಗೆ ರಾಜ್ಯದಲ್ಲಿ 2ನೆ ಪ್ರಶಸ್ತಿ ದೊರಕಿದೆ. ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನಲ್ಲಿ ಒಟ್ಟು 8 ಸಹಕಾರ ಸಂಘಗಳಿಗೆ ಕಟ್ಟಡ ನಿರ್ಮಾಣಕ್ಕೆ ಅರ್ಥಿಕ ನೆರವು ನೀಡಲಾಗಿದೆ. ಸಹಕಾರ ಸಂಘಗಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗಿದೆ. ಎಲ್ಲ ಸಹಕಾರ ಸಂಘಗಳಿಗೆ ಹೆಚ್ಚುವರಿ ಸಾಲ ನೀಡಿ, ಮರುಪಾವತಿಯೂ ಆಗಿದೆ ಎಂದು ತಿಳಿಸಿದರು.ನೂತನ ಕಟ್ಟಡ
ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗೆ ಜಿಲ್ಲಾ ಕೇಂದ್ರದಲ್ಲಿ ಸುಸಜ್ಜಿತ ನೂತನ ಕಟ್ಟಡ ನಿರ್ಮಿಸಲಾಗಿದ್ದು, ಮಾರ್ಚ್ ತಿಂಗಳಲ್ಲಿ ಬ್ಯಾಂಕಿನ ನೂತನ ಕಟ್ಟಡ ಉದ್ಘಾಟನೆಯಾಗಲಿದೆ. ಬಿಜೆಪಿ ಮತ್ತು ಸಹಕಾರ ಭಾರತಿ ನೇತೃತ್ವದಲ್ಲಿ ಗೆಲುವು ಸಾಧಿಸಿದ 17 ಸಹಕಾರ ಸಂಘಗಳ ನಿರ್ದೇಶಕರನ್ನು ಅಭಿನಂದಿಸಿದರು.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮಾಜಿ ಉಪಾಧ್ಯಕ್ಷ, ಹಾಲಿ ನಿರ್ದೇಶಕ ಟಿ.ಎಚ್.ಎಲ್. ರಮೇಶ್ ಮಾತನಾಡಿ17 ಸಹಕಾರ ಸಂಘಗಳಲ್ಲಿ ಗೆಲುವು ಸಾಧಿಸಿರುವುದು ಜಿಲ್ಲೆಯ ರಾಜಕೀಯ ಪರ್ವದಲ್ಲಿ ಒಂದು ಹೊಸ ದಿಕ್ಸೂಚಿ. ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್ ಯಾವುದೇ ರೀತಿ ತಾರತಮ್ಯ ಮಾಡದೆ ಎಲ್ಲ ಸಹಕಾರ ಸಂಘಗಳಿಗೆ ಸಾಲ , ಕೃಷಿ ಸಾಲ ನೀಡಿದ್ದೇ ಕಾರಣ. ಡಿಸಿಸಿ ಬ್ಯಾಂಕ್ ರಾಜ್ಯದಲ್ಲಿ 2ನೆ ಪ್ರಶಸ್ತಿ ಪಡೆದಿದೆ ಎಂದು ಹೇಳಿದರು.
ಬಿಜೆಪಿ ಮತ್ತು ಸಹಕಾರ ಭಾರತಿ ನೇತೃತ್ವದಲ್ಲಿ ತರೀಕೆರೆ ಪಿಎಲ್ ಡಿ ಬ್ಯಾಂಕ್ 4ನೆ ಬಾರಿ ಗೆಲುವು ಸಾಧಿಸಿರುವುದು ಹರ್ಷ ತಂದಿದೆ. ಸಹಕಾರಿ ಚಳುವಳಿಯನ್ನು ಬಲಪಡಿಸಲಾಗಿದೆ ಎಂದು ಹೇಳಿದರು.ಮಾಮ್ಕೋಸ್ ಹಿರಿಯ ನಿರ್ದೇಶಕ ಡಾ.ಆರ್.ದೇವಾನಂದ್ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಉತ್ತಮ ಆಡಳಿತ, ಮಾಜಿ ಶಾಸಕ ಡಿ.ಎಸ್.ಸುರೇಶ್ ಅವರ ಅವಿರತ ಶ್ರಮದಿಂದ ಬಿಜೆಪಿ ಮತ್ತು ಸಹಕಾರ ಭಾರತಿ ನೇತೃತ್ವದಲ್ಲಿ ಗೆಲುವು ಸಾಧಿಸಿರುವುದು ಮಹತ್ವದ್ದಾಗಿದೆ. ಸಹಕಾರ ಚಳುವಳಿ ಪ್ರಭಲವಾಗಿ ಬೆಳೆಯುತ್ತಿದೆ ಎಂದು ಹೇಳಿದರು.
ತಾಲೂಕು ಬಿಜೆಪಿ ಅಧ್ಯಕ್ಷ ಪ್ರತಾಪ್, ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಶಶಿಕುಮಾರ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ವಸಂತಕುಮಾರ್, ಸುಧಾಕರ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.6ಕೆಟಿಆರ್.ಕೆ.2ಃತರೀಕೆರೆಯಲ್ಲಿ ತಮ್ಮ ನಿವಾಸದಲ್ಲಿನ ಸುದ್ದಿಗೋಷ್ಠಿಯಲ್ಲಿ 17 ಸಹಕಾರ ಸಂಘಗಳ ಚುನಾವಣೆ ಯಲ್ಲಿ ಗೆಲುವು ಸಾಧಿಸಿದ ನಿರ್ದೇಶಕರನ್ನು ಮಾಜಿ ಶಾಸಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್ ಅಭಿನಂದಿಸಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಎಚ್.ಎಲ್.ರಮೇಶ್, ಮಾಮ್ಕೋಸ್ ಹಿರಿಯ ನಿರ್ದೇಶಕ ಡಾ.ಆರ್.ದೇವಾನಂದ್, ತಾಲೂಕು ಬಿಜೆಪಿ ಅಧ್ಯಕ್ಷ ಪ್ರತಾಪ್ ಮತ್ತಿತರರು ಇದ್ದರು.